ದಾವಣಗೆರೆ: ಕಲುಷಿತ ನೀರು (Contaminated Water) ಕುಡಿದು ಆಸ್ಪತ್ರೆಗೆ ದಾಖಲಾಗಿದ್ದ ವೃದ್ಧೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ ಘಟನೆ ದಾವಣಗೆರೆ (Davanagere) ಜಿಲ್ಲೆಯ ಹೊನ್ನಾಳಿ (Honnali) ತಾಲೂಕಿನ ಹುಣಸಘಟ್ಟ ಗ್ರಾಮದಲ್ಲಿ ನಡೆದಿದೆ.
ಚಂದ್ರಮ್ಮ (60) ಸಾವನ್ನಪ್ಪಿದ ವೃದ್ಧೆ. ಆ.21ರಂದು ಕಲುಷಿತ ನೀರು ಕುಡಿದು ಅಸ್ವಸ್ಥರಾಗಿ ಗ್ರಾಮದ 7 ಮಂದಿ ಆಸ್ಪತ್ರೆಗೆ ದಾಖಲಾಗಿದ್ದರು. ಈ ಪೈಕಿ ಚಂದ್ರಮ್ಮ ವಾಂತಿ, ಬೇಧಿ, ಜ್ವರ ಹಾಗೂ ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದು, ಚಿಕಿತ್ಸೆಗಾಗಿ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇಂದು ಚಿಕಿತ್ಸೆ ಫಲಿಸದೆ ಚಂದ್ರಮ್ಮ ಕೊನೆಯುಸಿರೆಳೆದಿದ್ದಾರೆ. ಇದನ್ನೂ ಓದಿ: ಇಂದಿನಿಂದ ದಸರಾ ಗಜಪಡೆಗಳ ತಾಲೀಮು ಆರಂಭ
ಇನ್ನುಳಿದ 6 ಮಂದಿ ಚಿಕಿತ್ಸೆ ಪಡೆದು ಮನೆಗೆ ತೆರಳಿದ್ದಾರೆ. ಕುಡಿಯುವ ನೀರಿನ ಪೈಪು ಒಡೆದು ಚರಂಡಿ ನೀರು ಮಿಶ್ರಣವಾದ ಹಿನ್ನೆಲೆ ನೀರು ಕಲುಷಿತಗೊಂಡಿತ್ತು. ಘಟನೆಯ ನಂತರ ಆರೋಗ್ಯ ಇಲಾಖೆ ಅಧಿಕಾರಿಗಳು ಗ್ರಾಮಕ್ಕೆ ಭೇಟಿ ನೀಡಿದ್ದರು. ಅಲ್ಲದೇ ನೀರು ಕಲುಷಿತಗೊಳ್ಳದಂತೆ ನೋಡಿಕೊಳ್ಳಲು ಜನರಲ್ಲಿ ಜಾಗೃತಿ ಮೂಡಿಸಿದ್ದರು. ಇದನ್ನೂ ಓದಿ: ಬಾಂಗ್ಲಾದಿಂದ ಭಾರತಕ್ಕೆ ಹಿಂದೂಗಳೇ ಬರ್ತಿಲ್ಲ, ಆದ್ರೆ 35 ಮುಸ್ಲಿಂ ನುಸುಳುಕೋರರನ್ನು ಬಂಧಿಸಿದ್ದೇವೆ: ಅಸ್ಸಾಂ ಸಿಎಂ