ಧಾರವಾಡ: ಸರಳತೆಯ ಸಾಕಾರ ಮೂರ್ತಿ, ನಡೆದಾಡುವ ದೇವರು, ನಿತ್ಯ ಸಂತ ಎಂದೆಲ್ಲ ಖ್ಯಾತರಾಗಿ ನಾಡಿನ ಜನತೆಗೆ ತಮ್ಮ ಪ್ರವಚನದ ಮೂಲಕವೇ ಹತ್ತಿರವಾಗಿದ್ದ ವಿಜಯಪುರ ಜ್ಞಾನ ಯೋಗಾಶ್ರಮದ ಸಿದ್ದೇಶ್ವರ ಶ್ರೀಗಳು (Siddeshwar Swamiji) ಪರಮಾತ್ಮನಲ್ಲಿ ಲೀನರಾಗಿದ್ದಾರೆ. ಶ್ರೀಗಳಿಗೆ ಕಲಾವಿದ ಮಂಜುನಾಥ್ ಹಿರೇಮಠ ಅವರು ಕಲಾನಮನ ಸಲ್ಲಿಸಿದ್ದಾರೆ.
ಸಿದ್ದೇಶ್ವರ ಶ್ರೀಗಳ ನೆನಪಿನಲ್ಲಿ ಧಾರವಾಡದ (Dharawada) ಪರಿಸರ ಸ್ನೇಹಿ ಕಲಾವಿದ ಮಂಜುನಾಥ್ ಹಿರೇಮಠ, 11 ಕೆಜಿ ಜೇಡಿ ಮಣ್ಣಿನಲ್ಲಿ ಎರಡು ಅಡಿ ಎತ್ತರದ ಸಿದ್ದೇಶ್ವರ ಶ್ರೀಗಳ ಕಲಾಕೃತಿಯನ್ನು (Clay) ರಚಿಸಿ ಶ್ರೀಗಳಿಗೆ ಕಲಾನಮನ ಸಲ್ಲಿಸಿದ್ದಾರೆ. ಇದನ್ನೂ ಓದಿ: ಸಿದ್ದೇಶ್ವರ ಶ್ರೀಗಳ ಅಂತ್ಯಸಂಸ್ಕಾರಕ್ಕೆ ಭರದ ಸಿದ್ಧತೆ- ಸಂಜೆ 5 ಗಂಟೆ ವೇಳೆಗೆ ಪಾರ್ಥಿವ ಶರೀರಕ್ಕೆ ಅಗ್ನಿ ಸ್ಪರ್ಶ
ಸೋಮವಾರ ಸಂಜೆ ಶ್ರೀಗಳ ನಿಧನ ಸುದ್ದಿ ತಿಳಿದ ನಂತರ ಕಲಾವಿದ ಮಂಜುನಾಥ್ ಹಿರೇಮಠ ಮಣ್ಣಿನಲ್ಲಿ ಈ ಕಲಾಕೃತಿ ರಚಿಸುವ ಮೂಲಕ ಸರಳತೆಯ ಸಾಕಾರ ಮೂರ್ತಿಗೆ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ. ಥೇಟ್ ಸಿದ್ದೇಶ್ವರ ಶ್ರೀಗಳಂತೆಯೇ ಈ ಮಣ್ಣಿನ ಮೂರ್ತಿಯನ್ನು ಕಲಾವಿದ ಮಂಜುನಾಥ್ ಸಿದ್ಧಪಡಿಸಿದ್ದು ಎಲ್ಲರ ಗಮನಸೆಳೆಯುತ್ತಿದೆ. ಇದನ್ನೂ ಓದಿ: ಸಿದ್ದೇಶ್ವರ ಶ್ರೀಗಳ ಅಂತಿಮ ದರ್ಶನಕ್ಕೆ ವೃದ್ಧೆಯನ್ನು ಹೆಗಲ ಮೇಲೆ ಹೊತ್ತು ತಂದ ವ್ಯಕ್ತಿ!