ನಟ ವಿಜಯ ರಾಘವೇಂದ್ರ (Vijay Raghavendra) ಪತ್ನಿ ಸ್ಪಂದನಾ (Spandana) ಅಗಲಿ ಇಂದಿಗೆ ಒಂದು ವರ್ಷ ಕಳೆದಿವೆ. ಹಾಗಾಗಿ ಮಗ ಮತ್ತು ಪತ್ನಿ ಜೊತೆಗಿರೋ ಫೋಟೋವನ್ನು ನಟ ವಿಜಯ ರಾಘವೇಂದ್ರ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡು ಭಾವುಕ ಪೋಸ್ಟ್ ಮಾಡಿದ್ದಾರೆ. ಪತ್ನಿಯೊಂದಿಗಿನ ನೆನಪುಗಳನ್ನು ಅವರು ಹಂಚಿಕೊಂಡಿದ್ದಾರೆ.
- Advertisement 2-
ಪತ್ನಿಯ ನಿಧನದ ನಂತರ ಮೌನಕ್ಕೆ ಶರಣಾಗಿದ್ದ ವಿಜಯ ನಂತರ ದಿನಗಳಲ್ಲಿ ಚೇತರಿಸಿಕೊಂಡು ಸ್ಪಂದನಾ ಬಗ್ಗೆ ಭಾವುಕರಾಗಿ ವೀಡಿಯೋ ಮೂಲಕ ಮನದಾಳದ ಭಾವನೆಗಳನ್ನ ಅಕ್ಷರ ರೂಪಕ್ಕೆ ಇಳಿಸಿದ್ದರು. ಸ್ಪಂದನಾ ನೆನಪನ್ನ ತಮ್ಮೊಳಗಿನ ಪ್ರೀತಿಯನ್ನ ಅವರು ಈ ಹಿಂದೆಯೂ ಬಿಚ್ಚಿಟ್ಟಿದ್ದರು.
- Advertisement 3-
- Advertisement 4-
ಸ್ಪಂದನಾ ಹೆಸರಿಗೆ ತಕ್ಕ ಜೀವ. ಉಸಿರಿಗೆ ತಕ್ಕ ಭಾವ. ಅಳತೆಗೆ ತಕ್ಕ ನುಡಿ. ಬದುಕಿಗೆ ತಕ್ಕ ನಡೆ. ನಮಗೆಂದೇ ಮಿಡಿದ ನಿನ್ನ ಹೃದಯವ. ನಿಲ್ಲದು ನಿನ್ನೊಂದಿಗಿನ ಕಲರವ. ನಾನೆಂದೂ ನಿನ್ನವ. ಕೇವಲ ನಿನ್ನವ ಎಂದು ವಿಜಯ್ ರಾಘವೇಂದ್ರ ಅವರು ಭಾವನ್ಮಾತಕವಾಗಿ ಸಾಲುಗಳನ್ನು ಹೇಳಿಕೊಂಡಿದ್ದರು.
ಪ್ರೀತಿಸಿ ಗುರುಹಿರಿಯರ ಸಮ್ಮತಿ ಪಡೆದು ಆಗಸ್ಟ್ 26ರ 2017ರಲ್ಲಿ ವಿಜಯ-ಸ್ಪಂದನಾ ಮದುವೆಯಾದರು. ಅವರ ದಾಂಪತ್ಯಕ್ಕೆ ಪ್ರೀತಿಗೆ ಶೌರ್ಯ ಎಂಬ ಪುತ್ರ ಸಾಕ್ಷಿಯಾಗಿದ್ದಾರೆ. ಸ್ಪಂದನಾ ಅನಿರೀಕ್ಷಿತ ಅಗಲಿಕೆ ಕುಟುಂಬಕ್ಕೆ ಶಾಕ್ ನೀಡಿತ್ತು.
ಆಗಸ್ಟ್ 6ರಂದು ಹೃದಯಾಘಾತದಿಂದ (Heart Attack) ಸ್ಪಂದನಾ ಬ್ಯಾಕಾಂಕ್‌ನಲ್ಲಿ ನಿಧನರಾದರು. ಆಗಸ್ಟ್ 9ರಂದು ಸ್ಪಂದನಾ ಅಂತ್ಯಕ್ರಿಯೆ ಹರಿಶ್ಚಂದ್ರ ಘಾಟ್‌ನಲ್ಲಿ ನೆರವೇರಿತ್ತು.