ಅಸಮರ್ಥರಾಗಿದ್ದ ಕಾರ್ತಿಕ್- ಸಂಗೀತಾ- ತನಿಷಾ ಸಮರ್ಥರಾದ ರೋಚಕ ಕಥೆ

Public TV
2 Min Read
Bigg Boss 17

ಬಿಗ್ ಬಾಸ್ (Bigg Boss Kannada)ಮನೆಯಲ್ಲಿ ಅಸಮರ್ಥರ ತಂಡದಲ್ಲಿ ಒಂದಾಗಿ ಮನೆಯೊಳಗೆ ಪ್ರವೇಶಿಸಿದ ಕಾರ್ತಿಕ್ (Karthik), ಸಂಗೀತಾ (Sangeetha) ಮತ್ತು ತನಿಷಾ (Tanisha Kuppanda)ಬಹುಬೇಗ ಆಪ್ತ ಸ್ನೇಹಿತರಾದರು. ಅದರಲ್ಲಿಯೂ ಸಂಗೀತಾ ಮತ್ತು ಕಾರ್ತಿಕ್ ಅವರ ಸಂಬಂಧಕ್ಕೆ ಕೆಲವು ಸಲ ರೊಮ್ಯಾಂಟಿಕ್ ಆಂಗಲ್ ಕೂಡ ದಕ್ಕಿತ್ತು. ಆದರೆ ಆರಂಭದಲ್ಲಿಯೇ, ‘ಲವ್‌ ಗಿವ್‌ ಎಲ್ಲ ಬೇಡ… ಫ್ರೆಂಡ್ ಆಗಿರೋಣ’ ಎಂದು ಸಂಗೀತ ಸ್ಪಷ್ಟವಾಗಿ ಹೇಳಿದ್ದರು. ಅದಕ್ಕೆ ಕಾರ್ತಿಕ್ ಕೂಡ ಒಪ್ಪಿದ್ದರು. ಈ ಮೂವರ ಫ್ರೆಂಡ್‌ಷಿಪ್ ಬಿಗ್‌ಬಾಸ್ ಮನೆಯಲ್ಲಿ ಸಾಕಷ್ಟು ದೂರ ಸಾಗಿತ್ತು.

Bigg Boss 3 1

ಒಮ್ಮೆ ಸಂಗೀತಾ ಜೈಲಿಗೆ ಹೋದಾಗ ಕಾರ್ತಿಕ್ ನೇರವಾಗಿಯೇ, ‘ನಾವು ಮೊದಲ ದಿನದಿಂದಲೂ ಒಬ್ಬರಿಗೊಬ್ಬರು ನಿಂತಿದ್ದೇವೆ. ಮುಂದೆಯೂ ನಿಲ್ಲುತ್ತೇವೆ’ ಎಂದೇ ಹೇಳಿದ್ದರು. ಜೈಲು ಅವಧಿ ಮುಗಿದಾಗ, ಸಂಗೀತಾಳನ್ನು ಹೆಗಲ ಮೇಲೆ ಹೊತ್ತು ಮನೆಯೊಳಗೆ ತಂದ ಸನ್ನಿವೇಶ ಅವರಿಬ್ಬರ ಸ್ನೇಹಸಂಬಂಧದ ಬಗ್ಗೆ ಬಹಳಷ್ಟನ್ನು ಹೇಳುವಂತಿತ್ತು. ಹಲವು ಸಲ ಕಾರ್ತಿಕ್, ತನ್ನ ಸ್ನೇಹಿತರಾದ ಸಂಗೀತಾ ಮತ್ತು ತನಿಷಾ ಪರವಾಗಿ ನಿಂತಿದ್ದಾರೆ. ಅವರೊಟ್ಟಿಗೆ ಸೇರಿ ಆಡಿದ್ದಾರೆ. ಮನೆಯ ಉಳಿದ ಸಮಯದಲ್ಲಿಯೂ ಅವರ ನೋವುಗಳಿಗೆ ಜೊತೆಯಾಗಿದ್ದಾರೆ. ಕಣ್ಣೀರು ಒರೆಸಿದ್ದಾರೆ. ಹಾಗೆಯೇ ತಮ್ಮ ನೋವು ನಲಿವುಗಳನ್ನೂ ಅವರೊಟ್ಟಿಗೆ ಹಂಚಿಕೊಂಡಿದ್ದಾರೆ.

Bigg Boss 2 8

ಆದರೆ ಸಂಗೀತಾ ಜೊತೆಗಿನ ಈ ಸ್ನೇಹ ಒಂದು ಹಂತದ ನಂತರ ಸಡಿಲಗೊಳ್ಳುತ್ತ ಬಂದಿತು. ಸಂಗೀತಾ ತಮ್ಮ ಕಂಪರ್ಟ್‌ ಝೋನ್ ಬಿಟ್ಟು ಹೊರಬರಲೆಂದು ವಿನಯ್ ಅವರಿದ್ದ ತಂಡದಲ್ಲಿ ಆಡಲು ನಿರ್ಧರಿಸಿದಾಗ ಆ ಸಂಬಂಧ ಇನ್ನಷ್ಟು ಸಡಿಲಾಗಿದ್ದು ನಿಜ. ಅಂಥ ಒಂದು ಸಂದರ್ಭದಲ್ಲಿ ಸಂಗೀತಾ ಎಸೆದ ಛಾಲೆಂಜ್ ಅನ್ನು ಸವಾಲಾಗಿ ಸ್ವೀಕರಿಸಿದ ಕಾರ್ತಿಕ್ ಮತ್ತು ತುಕಾಲಿ ಸಂತೋಷ್ ತಮ್ಮ ತಲೆಯನ್ನು ಬೋಳಿಸಿಕೊಂಡಿದ್ದರು. ನಂತರ ನಾಮಿನೇಷನ್‌ನಲ್ಲಿ, ಮನೆಯೊಳಗಿನ ಚಟುವಟಿಕೆಗಳ ಸಂದರ್ಭದಲ್ಲಿಯೆಲ್ಲ ಸಂಗೀತಾ ಮತ್ತು ಕಾರ್ತೀಕ್ ನಡುವಿನ ಗ್ಯಾಪ್ ಹೆಚ್ಚುತ್ತಲೇ ಹೋಯಿತು. ಒಂದು ಹಂತದಲ್ಲಿ ಈ ಸ್ನೇಹವನ್ನು ಬೇರ್ಪಡಿಸುವುದು ಸಾಧ್ಯವೇ ಇಲ್ಲ ಎಂಬಂತೆ ಕಾಣಿಸುತ್ತಿದ್ದ ಈ ಜೋಡಿ ಪರಸ್ಪರ ಕಿತ್ತಾಡುವ ಹೆಜ್ಜೆಹೆಜ್ಜೆಗೂ ಜಗಳವಾಡುವ ಎದುರಾಳಿಗಳಾಗಿ ಬದಲಾದರು.

Bigg Boss 5 2

ಬೆರ್ಚುಗೊಂಬೆಯ ತಲೆಮೇಲಿನ ಮಡಕೆ ಒಡೆಯುವ ಸಂದರ್ಭದಲ್ಲಿ ಕಾರ್ತಿಕ್, ಸಂಗೀತಾ ಚಿತ್ರವಿರುವ ಮಡಕೆಯನ್ನು ಪುಡಿಗಟ್ಟಿ, ‘ಸಂಗೀತಾ ಅವರಲ್ಲಿ ನನ್ನನ್ನು ಕಳೆದರೆ ನಾನು ಜಿರೋ ಎಂದು ಕೆಲವರ ವಾದ. ಅದು ಸುಳ್ಳು ಅಂತ ನಾನು ಪ್ರೂವ್ ಮಾಡಿ ತೋರಿಸುತ್ತೇನೆ’ ಎಂದು ಹೇಳಿದ್ದರು.

 

ಆದರೆ ಅದಾದ ನಂತರ ಕಾರ್ತಿಕ್ ಅವರ ಗ್ರಾಫ್‌ ನಿಧಾನಕ್ಕೆ ಇಳಿಯುತ್ತಲೇ ಬಂತು. ತನಿಷಾ ಅವರನ್ನು ನಾಮಿನೇಟ್ ಮಾಡುವುದರ ಮೂಲಕ ಅವರ ಅವರ ಸ್ನೇಹದಲ್ಲಿಯೂ ಒಡಕು ಬಂದಿತು. ಅವರ ನೆಚ್ಚಿನ ಅಕ್ಕ ಸಿರಿ ಎಲಿಮಿನೇಟ್ ಆಗಿ ಮನೆಯಿಂದ ಹೊರಗೆ ಹೋದರು. ನಮ್ರತಾ ಜೊತೆಗಿನ ಅವರ ಸಂಬಂಧ ಬೇರೆಯದೇ ಆಯಾಮ ಪಡೆದುಕೊಳ್ಳುವ ಸೂಚನೆ ಸಿಕ್ಕಿತ್ತು. ಈ ಎಲ್ಲದರಿಂದ ಕಾರ್ತಿಕ್ ಮಾನಸಿಕವಾಗಿ ಕುಗ್ಗಿದ್ದು ಸುಳ್ಳಲ್ಲ. ಮನೆಯೊಳಗೆ ಒಬ್ಬಂಟಿಯಾದರು ಕೂಡ.

Share This Article