ಬೆಂಗಳೂರು: ರಾಜ್ಯದಲ್ಲಿ ಬೀದಿ ನಾಯಿ (Street Dogs) ಗಳ ಹಾವಳಿ ನಿಯಂತ್ರಣಕ್ಕೆ ಸರ್ಕಾರ ಮಹತ್ವದ ನಿರ್ಧಾರ ಪ್ರಕಟಿಸಿದೆ.
ರಾಜ್ಯಾದ್ಯಂತ ಬೀದಿ ನಾಯಿಗಳ ಸಂತಾನ ನಿಯಂತ್ರಣ ಕಾರ್ಯಕ್ರಮವನ್ನು ಅನುಷ್ಠಾನಗೊಳಿಸಿ ಸರ್ಕಾರ ಆದೇಶ ಹೊರಡಿಸಿದ್ದು, ನಗರಾಭಿವೃದ್ಧಿ ಇಲಾಖೆ ಹಾಗೂ ಪಶುಪಾಲನಾ ಮತ್ತು ಪಶು ವೈದ್ಯಸೇವಾ ಇಲಾಖೆಯಿಂದ ಜಂಟಿ ಸುತ್ತೋಲೆ ಹೊರಡಿಸಲಾಗಿದೆ.
Advertisement
Advertisement
ಇಲಾಖೆ ಹೊರಡಿಸಿರುವಂತ ಸುತ್ತೋಲೆಯಲ್ಲಿ ರಾಜ್ಯದ ಎಲ್ಲಾ ಪುರಸಭೆ, ನಗರಸಭೆ, ಪಟ್ಟಣ ಪಂಚಾಯ್ತಿ, ನಗರಪಾಲಿಕೆಗಳ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಸಂತಾನ ನಿಯಂತ್ರಣ ಯೋಜನೆಯನ್ನು ಕೈಗೊಳ್ಳುವುದು ಸಂಬಂಧಪಟ್ಟ ಸ್ಥಳೀಯ ಸಂಸ್ಥೆಗಳ ಆದ್ಯ ಕರ್ತವ್ಯವಾಗಿರುತ್ತದೆ ಎಂದು ಹೇಳಿದೆ. ಇದನ್ನೂ ಓದಿ: ನೇಮಕ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಜಾ – ವಿಕ್ಟೋರಿಯಾ ಗೌರಿ ಪ್ರಮಾಣ ವಚನ ಸ್ವೀಕಾರ
Advertisement
Advertisement
ಈ ಯೋಜನೆಯನ್ನು ಕ್ರಮಬದ್ಧವಾಗಿ ಅನುಷ್ಠಾನಗೊಳಿಸುವುದರಿಂದ ಬೀದಿ ನಾಯಿಗಳ ಸಂಖ್ಯೆ ನಿಯಂತ್ರಣವಾಗುವುದರ ಜೊತೆಗೆ ನಾಯಿ ಕಡಿತ ಮತ್ತು ರೆಬೀಸ್ ರೋಗ ನಿಯಂತ್ರಣ ಮಾಡಲು ಸಾಧ್ಯವಾಗುವುದು ಎಂದು ತಿಳಿಸಿದೆ. ಎಬಿಸಿ ನಿಯಮದಡಿಯಲ್ಲಿ ರಾಜ್ಯಾದ್ಯಂತ ಬೀದಿ ನಾಯಿಗಳ ಹಾವಳಿಯನ್ನು ನಿಯಂತ್ರಣಗೊಳಿಸಲು, ಕೆಲ ಮಾರ್ಗಸೂಚಿ ಕ್ರಮಗಳನ್ನು ಕೂಡ ಇಲಾಖೆ ಹೊರಡಿಸಿದೆ.
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k