ಮಡಿಕೇರಿ: ಪ್ರವಾಸಿಗರ ಸ್ವರ್ಗ ಕೊಡಗು. ಇಲ್ಲಿನ ಒಂದೊಂದು ತಾಣವೂ ಮನಮೋಹಕ. ಮಡಿಕೇರಿಯ ಪ್ರವಾಸಿ ತಾಣಗಳ ಮುಕುಟ ರಾಜಾಸೀಟ್. ಇಲ್ಲಿನ ಸೂರ್ಯಾಸ್ಥದ ವಿಹಂಗಮ ನೋಟ ಪ್ರಕೃತಿಯ ನೈಜ ಸೌಂದರ್ಯವನ್ನು ಅನಾವರಣಗೊಳಿಸುತ್ತೆ. ಇಂತಹ ರಾಜಾಸೀಟ್‍ಗೆ ಮತ್ತಷ್ಟು ಪ್ರವಾಸಿಗರನ್ನು ಸೆಳೆಯಲು ತೋಟಗಾರಿಕೆ ಇಲಾಖೆ ವಿನೂತನ ಪ್ರಯತ್ನಕ್ಕೆ ಕೈಹಾಕಿದೆ.
ತೋಟಗಾರಿಕೆ ಇಲಾಖೆಯವರು ಪ್ರತಿ ತಿಂಗಳ 2ನೇ ಶನಿವಾರ, ರಾಜ್ಯದ ವಿವಿಧ ಭಾಷೆಯನ್ನು ಬಿಂಬಿಸುವ ಕಾರ್ಯಕ್ರಮವನ್ನು ರಾಜಾಸೀಟ್ ವ್ಯೂ ಪಾಯಿಂಟ್‍ನ ಸ್ಥಳದಲ್ಲಿ ಆಯೋಜಿಸುತ್ತಿದ್ದಾರೆ. ದೇಶದ ವಿವಿಧ ರಾಜ್ಯಗಳಿಂದ ಕೊಡಗಿನತ್ತ ಲಗ್ಗೆಯಿಡುವ ಪ್ರಕೃತಿ ಪ್ರೇಮಿಗಳು ಜಿಲ್ಲೆಯ ನೈಸರ್ಗಿಕ ಸೌಂದರ್ಯವನ್ನು ಕಣ್ತುಂಬಿಕೊಳ್ಳುತ್ತಾರೆ. ಸದ್ಯ ತೋಟಗಾರಿಕೆ ಇಲಾಖೆಯ ವಿನೂತನ ಪ್ರಯತ್ನದಿಂದ ಕೊಡಗು ಹಾಗೂ ರಾಜ್ಯದ ಸಂಸ್ಕೃತಿಗಳನ್ನು ತಿಳಿಯಲು ಪ್ರವಾಸಿಗರಿಗೆ ನೆರವಾಗಿದೆ.
Advertisement
Advertisement
ಮೊದಲ ಬಾರಿಗೆ ರಾಜಾಸೀಟ್‍ನಲ್ಲಿ ತೋಟಗಾರಿಗೆ ಇಲಾಖೆ ವಿಶೇಷ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ. ಈ ಬಾರಿ ಇಲಾಖೆ ಡೋಲು ಕುಣಿತ, ಸ್ಥಳೀಯ ಕಲಾವಿದರಿಂದ ಸುಗಮ ಸಂಗೀತ. ಕನ್ನಡ ಚಿತ್ರರಂಗ, ಹಿಂದಿ, ಕೊಡವ ಹಾಡು, ವಾದ್ಯ ಸೇರಿದಂತೆ ರಾಜ್ಯದ ಸಂಸ್ಕೃತಿ ಬಿಂಬಿಸುವ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಸದಾ ಪ್ರವಾಸಿಗರಿಂದ ತುಂಬಿತುಳುಕುವ ರಾಜಾಸೀಟ್‍ಗೆ ಬಂದ ಪ್ರವಾಸಿಗರಿಗೆ ನಾಡಿನ ಸಂಸ್ಕೃತಿ ಹಾಗೂ ಪರಿಸರದ ಬಗ್ಗೆ ಕಾಳಜಿ ಹೊಂದಿರುವ ಕಾರ್ಯಕ್ರಮ ಮುದ ನೀಡಿದೆ.