ಉಡುಪಿ: ಮನೆಯಲ್ಲಿ ಮತದಾನ (Vote) ಮಾಡಿ ಕೆಲವೇ ಕ್ಷಣಗಳಲ್ಲಿ ವಯೋವೃದ್ಧೆ (Old Woman) ಮೃತಪಟ್ಟ ಘಟನೆ ಉಡುಪಿ (Udupi) ಜಿಲ್ಲೆಯಲ್ಲಿ ನಡೆದಿದೆ.
ಪಿ.ಯಶೋಧಾ ನಾರಾಯಣ ಉಪಾಧ್ಯ (83) ಮೃತಪಟ್ಟ ಹಿರಿಯ ಮಹಿಳೆ. ಉಡುಪಿ ಜಿಲ್ಲೆಯ ಬ್ರಹ್ಮಾವರ (Bramhavar) ತಾಲೂಕಿನ ಸಾಸ್ತಾನ ಪಾಂಡೇಶ್ವರ ನಿವಾಸಿಯಾಗಿರುವ ಯಶೋಧಾ, ಚಡಗರ ಅಗ್ರಹಾರದ ನಿವಾಸಿಯಾಗಿದ್ದಾರೆ. ನಿವೃತ್ತ ಗ್ರಾಮ ಲೆಕ್ಕಾಧಿಕಾರಿ ದಿ.ನಾರಾಯಣ ಉಪಾಧ್ಯ ಅವರ ಪತ್ನಿಯಾಗಿರುವ ಅವರು, ತನ್ನ ಜೀವನದಲ್ಲಿ ಎಲ್ಲಾ ಚುನಾವಣೆಗಳಲ್ಲೂ ತಪ್ಪದೆ ಹಕ್ಕು ಚಲಾಯಿಸಿದ್ದಾರೆ. ಇದನ್ನೂ ಓದಿ: ಡಿ.ಕೆ.ಸುರೇಶ್ ಆಪ್ತನ ಮನೆ ಮೇಲೆ ಐಟಿ ದಾಳಿ
ಈ ಬಾರಿ ಹಿರಿಯ ನಾಗರಿಕರ ಕಾರ್ಯಕ್ರಮದಡಿ ಮನೆಯಿಂದಲೇ ಮತದಾನ ಮಾಡಿದ್ದರು. ಬೆಳಗ್ಗೆಯಿಂದ ಕೊಂಚ ಎದೆನೋವು ಇತ್ತು ಎಂದು ಮನೆಯವರ ಬಳಿ ಹೇಳಿಕೊಂಡಿದ್ದರು. ಆದರೆ ಮತದಾನ ಮಾಡಿ ಆಸ್ಪತ್ರೆ ತೆರಳುವುದಾಗಿ ಹೇಳಿದ್ದ ಮಹಿಳೆ ಯಶೋಧಾ ಅವರನ್ನು ಮತ ಪ್ರಕ್ರಿಯೆ ಮುಗಿದ ಮೇಲೆ ಕೋಟೇಶ್ವರ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಇದನ್ನೂ ಓದಿ: ಕೊತ್ವಾಲ್ ಬ್ರದರ್ಸ್ ‘ಆ ದಿನಗಳ’ ಗೂಂಡಾಗಿರಿ ಮುಂದುವರೆಸಿದ್ದಾರೆ: ಡಿಕೆಶಿ ವಿರುದ್ಧ ಬಿಜೆಪಿ ಆಕ್ರೋಶ
ಕಳೆದ ರಾತ್ರಿ 9 ಗಂಟೆ ಸುಮಾರಿಗೆ ಚಿಕಿತ್ಸೆಗೆ ಸ್ಪಂದಿಸದೆ ಯಶೋಧಮ್ಮ ಕೊನೆಯುಸಿರೆಳೆದಿದ್ದಾರೆ. ಮೃತರು ಪುತ್ರ, ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ಚುನಾವಣಾ ಪ್ರಕ್ರಿಯೆ ತನ್ಮ ಹಕ್ಕು ಚಲಾಯಿಸಬೇಕೆಂಬ ಆಸೆಯನ್ನು ಪೂರ್ತಿಗೊಳಿಸಿ ಇಹಲೋಕ ತ್ಯಜಿಸಿದ್ದಾರೆ ಎಂದು ಕುಟುಂಬಸ್ಥರು ಹೇಳಿದ್ದಾರೆ. ಇದನ್ನೂ ಓದಿ: ನನಗೂ ನನ್ನ ಮಗನಿಗೂ ಭವಿಷ್ಯ ಇಲ್ಲ ಅಂತಾ ಗೊತ್ತಿದ್ದೇ ಈ ನಿರ್ಧಾರ ಮಾಡಿದ್ದೇನೆ: ಈಶ್ವರಪ್ಪ