ಜಾರ್ಖಂಡ್: ಹೋಳಿ ಆಚರಣೆ (Holy Celebration) ಯ ವೇಳೆ ನನ್ನ ಮೇಲೆ ಬಣ್ಣ ಎರಚಬೇಡಿ ಎಂದ ವೃದ್ಧೆಯನ್ನು ಯುವಕರ ಗುಂಪೊಂದು ಥಳಿಸಿ ಕೊಲೆಗೈದ ಘಟನೆ ಜಾರ್ಖಂಡ್‍ನ ಗೊಡ್ಡಾ ಜಿಲ್ಲೆಯಲ್ಲಿ ನಡೆದಿದೆ.
ಮೃತಳನ್ನು ಮುಟ್ಟಿ ದೇವಿ ಎಂದು ಗುರುತಿಸಲಾಗಿದೆ. ಬಲಬದ್ಧಾ ಪೊಲೀಸ್ ಠಾಣೆ ವ್ಯಾಪ್ತಿಯ ಅಮೋರ್ ನಿಮಾ ಗ್ರಾಮದಲ್ಲಿ ಈ ಘಟನೆ ನಡೆದಿದೆ. 65 ವರ್ಷದ ವೃದ್ಧೆಯನ್ನು ಪಾನಮತ್ತ ಯುವಕರ ಗುಂಪು ಹತ್ಯೆ ಮಾಡಿದೆ. ಇದನ್ನೂ ಓದಿ: ಬೆಳಗಾವಿಯಲ್ಲಿ ವಿಚಿತ್ರವಾದ ಎಲೆಕ್ಟ್ರಾನಿಕ್ ಬಲೂನು ಪತ್ತೆ – ಆತಂಕದಲ್ಲಿ ಜನ
Advertisement
Advertisement
ಹೋಳಿ ಬಣ್ಣದಾಟದ ಸಮಯದಲ್ಲಿ ಕೆಲವೊಮ್ಮೆ ಬಲವಂತವಾಗಿ ಬಣ್ಣ ಎರಚಲಾಗುತ್ತದೆ. ಅಂತೆಯೇ ಇದನ್ನು ವೃದ್ಧೆಯೊಬ್ಬರು ವಿರೋಧಿಸಿದ್ದಾರೆ. ಈ ವೇಳೆ ಪಾನಮತ್ತ ಯುವಕರು ಆಕೆಗೆ ಥಳಿಸಿದ್ದಾರೆ. ಬಳಿಕ ಆಕೆ ಸಾವನ್ನಪ್ಪಿದ ವಿಚಾರ ತಿಳಿಯುತ್ತಿದ್ದಂತೆಯೇ ಆರೋಪಿಗಳು ಪರಾರಿಯಾಗಿದ್ದು, ಅವರ ಪತ್ತೆಗೆ ಪೊಲೀಸರು ಹುಡುಕಾಟ ಆರಂಭಿಸಿದ್ದಾರೆ.
Advertisement
Advertisement
ಈ ಸಂಬಂಧ ಮೃತ ಮಹಿಳೆಯ ಪುತ್ರ ಮುರಾರಿ ಸಿಂಗ್, ಇದು ಯಾವುದೇ ದ್ವೇಷಕ್ಕಾಗಿ ನಡೆದ ಪ್ರಕರಣವಲ್ಲ, ನಾವು ಯಾರೊಂದಿಗೂ ದ್ವೇಷ ಹೊಂದಿರಲಿಲ್ಲ. ಮದ್ಯದ ಅಮಲಿನಲ್ಲಿ ಹೋಳಿ ಆಚರಿಸುತ್ತಿದ್ದವರು ಬಲವಂತವಾಗಿ ಬಣ್ಣ ಹಚ್ಚುತ್ತಿದ್ದರು ಮತ್ತು ಜೋರಾಗಿ ಗಲಾಟೆ ಮಾಡುತ್ತಿದ್ದರು. ತಾಯಿ ಅವರ ಗೂಂಡಾಗಿರಿಯನ್ನು ವಿರೋಧಿಸಿದ್ದು, ಅವರು ಆಕೆಯ ಪ್ರಾಣ ಹೋಗುವವರೆಗೂ ಥಳಿಸಿದ್ದಾರೆ. ಇತ್ತ ತಾಯಿ ಸಾವನ್ನಪ್ಪಿದ ವಿಚಾರ ತಿಳಿಯುತ್ತಿದ್ದಂತೆಯೇ ನಾವು ಪೊಲೀಸರಿಗೆ ಮಾಹಿತಿ ನೀಡಿದೆವು. ಆದರೆ ಪೊಲೀಸರು ಬರುವ ಮೊದಲೇ ಅವರೆಲ್ಲರೂ ಸ್ಥಳದಿಂದ ಪರಾರಿಯಾಗಿದ್ದರು ಎಂದರು.