– ಪ್ರಾಣಪತಿಷ್ಠೆಯಂದು ಸೀಮಿತ ಜನಕ್ಕಷ್ಟೇ ಅವಕಾಶ
ಉಡುಪಿ: ದೇಶದಲ್ಲಿ ರಾಮನ ಭಕ್ತರು, ಸಂತರು-ಮಹಂತರು ಬಹಳ ಇದ್ದಾರೆ. ಜನಪ್ರತಿನಿಧಿಗಳು, ದಾನಿಗಳು ರಾಮ ಮಂದಿರದ (Ram Mandir) ಪ್ರಾಣ ಪ್ರತಿಷ್ಠೆಗೆ ಭಕ್ತರೆಲ್ಲಾ ಆಮಂತ್ರಿತರು. ಪ್ರಾಣಪ್ರತಿಷ್ಠೆಗೆ ಪ್ರಾತಿನಿಧ್ಯ ಇಟ್ಟುಕೊಂಡು ಆಮಂತ್ರಣ ನೀಡಲು ಆಯ್ಕೆ ಮಾಡಿ ಆಹ್ವಾನ ಕೊಡಲಾಗಿದೆ ಎಂದು ಪೇಜಾವರ ಮಠಾಧೀಶ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ (Pejavara Shree) ಹೇಳಿದರು.
Advertisement
ಉಡುಪಿ (Udupi) ಪೇಜಾವರ ಮಠದಲ್ಲಿ ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸೀಮಿತ ಸ್ಥಳ ಇರುವುದರಿಂದ ಎಲ್ಲರೂ ಭಾಗಿಯಾಗಲು ಕಷ್ಟವಾಗಲಿದೆ. ಪ್ರತಿಷ್ಠಾಪನೆಯ ನಂತರ ಕೋಟ್ಯಂತರ ಭಕ್ತರಿಗೆ ಬಾಲರಾಮನ ದರ್ಶನಕ್ಕೆ ಅವಕಾಶ ಇದೆ. ಯಾವುದೇ ಗೊಂದಲಗಳು ಆಗದಿರಲಿ ಎಂಬುದು ಟ್ರಸ್ಟ್‌ನ ಉದ್ದೇಶ. ದೇಗುಲದ ಪ್ರತಿಷ್ಠಾಪನೆ ಆಗಿರುವುದರಿಂದ ಇದನ್ನು ಯಾವುದೋ ಮೈದಾನದಲ್ಲಿ ಕಾರ್ಯಕ್ರಮ ನೆರವೇರಿಸಲು ಸಾಧ್ಯವಿಲ್ಲ ಎಂದರು. ಇದನ್ನೂ ಓದಿ: ಕರ್ನಾಟಕದಲ್ಲಿ ತುಘಲಕ್ ಸರ್ಕಾರ ನಡೆಯುತ್ತಿದೆ: ರೇಣುಕಾಚಾರ್ಯ ಕಿಡಿ
Advertisement
Advertisement
ಜನವರಿ 22 ರಂದು ಮೈದಾನದಲ್ಲಿ ಕಾರ್ಯಕ್ರಮ ಮಾಡಲು ಸಾಧ್ಯವಿಲ್ಲ. ಮಂದಿರದ ಸ್ಥಳಾವಕಾಶ ಬಹಳ ಸೀಮಿತವಾಗಿದೆ. ಭಕ್ತರು ಯಾರೂ ತಪ್ಪು ತಿಳಿಯಬಾರದು. ಆಹ್ವಾನ ಇದ್ದವರು ಖಂಡಿತಾ ಭಾಗಿಯಾಗಬೇಕು. ಉಳಿದವರೆಲ್ಲರೂ ಮುಂದಿನ ದಿನದಲ್ಲಿ ಅಯೋಧ್ಯೆಗೆ (Ayodhya) ಬರಬೇಕು. ಅಯೋಧ್ಯೆಯಲ್ಲಿ ಅನೇಕ ಟೆಂಟ್, ಶೆಡ್ ತಯಾರಾಗಿದ್ದು, ಧನುರ್ಮಾಸ ಇರುವುದರಿಂದ ಹೊರಗೆ ಮಲಗಲು ಸಾಧ್ಯವಿಲ್ಲ ಎಂದು ಸ್ಪಷ್ಟನೆ ನೀಡಿದರು. ಇದನ್ನೂ ಓದಿ: INDIA ಒಕ್ಕೂಟಕ್ಕೆ ಬಿಹಾರ ಸಿಎಂ ನಿತೀಶ್ ಕುಮಾರ್ ಸಂಚಾಲಕ?
Advertisement