ಡೆಹ್ರಾಡೂನ್: ಉದ್ಯಮಿ ಮುಖೇಶ್ ಅಂಬಾನಿ ಪುತ್ರ ಅನಂತ್ ಅಂಬಾನಿ ಅವರನ್ನು ಪ್ರಸಿದ್ಧ ತೀರ್ಥ ಕ್ಷೇತ್ರಗಳಾದ ಬದರಿನಾಥ, ಕೇದಾರನಾಥ ದೇಗುಲ ಸಮಿತಿಗೆ ಸದಸ್ಯರನ್ನಾಗಿ ಉತ್ತರಾಖಂಡ ಮುಖ್ಯಮಂತ್ರಿ ತ್ರಿವೇಂದ್ರ ಸಿಂಗ್ ಅವರು ಶುಕ್ರವಾರ ನೇಮಿಸಿದ್ದಾರೆ.
ಮನೆಯಲ್ಲಿ ಶುಭಕಾರ್ಯ ನಡೆಯುವಾಗ ಮುಖೇಶ್ ಅಂಬಾನಿ ಕುಟುಂಬಸ್ಥರು ಕೇದಾರನಾಥ ಹಾಗೂ ಬದರಿನಾಥ ದೇಗುಲಕ್ಕೆ ಭೇಟಿ ನೀಡಿ, ದೇವರ ದರ್ಶನ ಪಡೆಯುತ್ತಾರೆ. ಕಳೆದ ವರ್ಷ ನಡೆದ ಪುತ್ರಿ ಇಶಾ ಅಂಬಾನಿ ವಿವಾಹದ ನಿಮಿತ್ತ ಮುಖೇಶ್ ಅಂಬಾನಿ ಅವರು, ಕೇದಾರನಾಥ ಮತ್ತು ಬದರಿನಾಥ ದೇಗುಲಗಳಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದರು.
Advertisement
Uttarakhand Chief Minister Trivendra Singh Rawat appoints industrialist Mukesh Ambani’s son Anant Ambani as a member of Badrinath Kedarnath Temple Committee. (File pics) pic.twitter.com/lmpXjOa0Uj
— ANI (@ANI) March 8, 2019
Advertisement
ಕೇದಾರನಾಥ ದೇವಸ್ಥಾನವು ಹಿಂದೂಗಳ ಪ್ರಸಿದ್ಧ ದೇವಾಲಯವಾಗಿದೆ. ಈ ದೇವಾಲಯವು ಉತ್ತರಾಖಂಡದ ಗರ್ವಾಲ್ ಹಿಮಾಲಯ ಶ್ರೇಣಿಯ ಸಮೀಪ ಮಂದಾಕಿನಿ ನದಿ ಪಾತ್ರದಲ್ಲಿ ನಿರ್ಮಾಣವಾಗಿದೆ.
Advertisement
ಕೇದಾರನಾಥ ದೇವಾಲಯದ ಪ್ರದೇಶದಲ್ಲಿ ಹಿಮ ಹೆಚ್ಚಾಗಿ ಬೀಳುತ್ತದೆ. ಹೀಗಾಗಿ ಭಕ್ತರಿಗೆ ಏಪ್ರಿಲ್‍ನಿಂದ ನವೆಂಬರ್ ತಿಂಗಳಲ್ಲಿ ಮಾತ್ರ ದೇವಸ್ಥಾನಕ್ಕೆ ಭೇಟಿ ನೀಡಲು ಅವಕಾಶ ಮಾಡಿಕೊಡಲಾಗುತ್ತದೆ.
Advertisement
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv