ಮುಕೇಶ್‌ ಅಂಬಾನಿ ಪುತ್ರನ ಮದುವೆ ಡೇಟ್‌ ಫಿಕ್ಸ್‌; ಎಲ್ಲಿ? ಯಾವಾಗ? ಆಮಂತ್ರಣ ಪತ್ರಿಕೆ ನೋಡಿ..

Public TV
1 Min Read
anant ambani 2

ಮುಂಬೈ: ಉದ್ಯಮಿ ಮುಖೇಶ್ ಅಂಬಾನಿ (Mukesh Ambani) ಅವರ ಪುತ್ರ ಅನಂತ್ ಅಂಬಾನಿ (Anant Ambani) ಜುಲೈ 12 ರಂದು ಮುಂಬೈನಲ್ಲಿ ರಾಧಿಕಾ ಮರ್ಚೆಂಟ್ (Radhika Merchant) ಅವರನ್ನು ವಿವಾಹವಾಗಲಿದ್ದಾರೆ. ಸಾಂಪ್ರದಾಯಿಕ ಕೆಂಪು ಮತ್ತು ಚಿನ್ನದ ಕಾರ್ಡ್ ಆಗಿರುವ ‘ಸೇವ್‌ ದಿ ಡೇಟ್‌’ (ಆಮಂತ್ರಣ ಪತ್ರಿಕೆ) ಆಹ್ವಾನವನ್ನು ಅತಿಥಿಗಳು ಸ್ವೀಕರಿಸುತ್ತಿದ್ದಾರೆ.

anant ambani wedding card

ನಗರದ ಬಾಂದ್ರಾ-ಕುರ್ಲಾ ಕಾಂಪ್ಲೆಕ್ಸ್‌ನಲ್ಲಿರುವ ಜಿಯೋ ವರ್ಲ್ಡ್ ಕನ್ವೆನ್ಷನ್ ಸೆಂಟರ್‌ನಲ್ಲಿ ಹಿಂದೂ ವೈದಿಕ ಸಂಪ್ರದಾಯದಂತೆ ವಿವಾಹ ಸಮಾರಂಭ ನಡೆಯಲಿದೆ ಎಂದು ವರದಿಯಾಗಿದೆ. ಇದನ್ನೂ ಓದಿ: ಎನ್‌ಡಿಎ ಅಧಿಕಾರಕ್ಕೆ ಬಂದ್ರೆ ಜೂನ್‌ 9 ರಂದು ಮೋದಿ ಪ್ರಮಾಣ ವಚನ!

ಮದುವೆ ಸಂಭ್ರಮದ ಕಾರ್ಯಕ್ರಮಗಳು (ಜು.12 ರಿಂದ 14) ಮೂರು ದಿನಗಳ ಕಾಲ ಜರುಗಲಿವೆ. ಜು.12 ರಂದು ಶುಭ ವಿವಾಹದೊಂದಿಗೆ ಕಾರ್ಯಕ್ರಮಗಳು ನಡೆಯಲಿವೆ. ಜು.13 ರ ಶನಿವಾರ ಶುಭ ಆಶೀರ್ವಾದ ಅಥವಾ ದೈವಿಕ ಆಶೀರ್ವಾದ ಕಾರ್ಯಕ್ರಮ ಇರಲಿದೆ. ಜು.14ರ ಭಾನುವಾರದಂದು ಅದ್ಧೂರಿ ವಿವಾಹ ಆರತಕ್ಷತೆ ನಡೆಯಲಿದೆ ಎಂದು ವರದಿಯಾಗಿದೆ.

ನೀತಾ ಮತ್ತು ಮುಖೇಶ್ ಅಂಬಾನಿ ಈ ವಾರ ಯುರೋಪ್‌ನಲ್ಲಿ ಐಷಾರಾಮಿ ಕ್ರೂಸ್ ಹಡಗಿನಲ್ಲಿ ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್‌ಗಾಗಿ ನಾಲ್ಕು ದಿನಗಳ ವಿವಾಹ ಪೂರ್ವ ಸಮಾರಂಭವನ್ನು ಆಯೋಜಿಸುತ್ತಿದ್ದಾರೆ. ಇದನ್ನೂ ಓದಿ: ಚಿನ್ನ ಕಳ್ಳಸಾಗಣೆ – ಕಾಂಗ್ರೆಸ್‌ ಸಂಸದ ಶಶಿ ತರೂರ್‌ ಆಪ್ತ ಸಹಾಯಕ ಬಂಧನ

ಕ್ರಿಕೆಟಿಗ ಎಂ.ಎಸ್.ಧೋನಿ ಸೇರಿದಂತೆ ಬಾಲಿವುಡ್ ತಾರೆಯರು ಮತ್ತು ಇತರ ವಿಐಪಿ ಅತಿಥಿಗಳು ಗಾಲಾ ಕಾರ್ಯಕ್ರಮಕ್ಕೆ ಹಾಜರಾಗಲಿದ್ದಾರೆ.

Share This Article