ಅಂಬಾನಿ ಕುಟುಂಬದಲ್ಲಿ ಸಂಭ್ರಮ ಮನೆ ಮಾಡಿದೆ. ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ (Radhika Merchant) ವಿವಾಹ ಪೂರ್ವ ಕಾರ್ಯಕ್ರಮ (Pre-Wedding) ಅದ್ಧೂರಿಯಾಗಿ ಜರುತ್ತಿದೆ. ಅಂಬಾನಿ ಮನೆ ಪಾರ್ಟಿಯಲ್ಲಿ ಬಿಟೌನ್ (Bollywood) ಸ್ಟಾರ್ಸ್ ಮಿಂಚಿದ್ದಾರೆ. ನವಜೋಡಿ ಅನಂತ್-ರಾಧಿಕಾ ಜೋಡಿ ರಾಯಲ್ ಆಗಿ ಎಂಟ್ರಿ ಕೊಟ್ಟಿದ್ದಾರೆ.
ಅನಂತ್ (Ananth Ambani) ಮತ್ತು ರಾಧಿಕಾ ಮದುವೆ ಇದೇ ಜೂನ್ 12ಕ್ಕೆ ಫಿಕ್ಸ್ ಆಗಿದೆ. ಮಾರ್ಚ್ 1ರಿಂದ 3ರವರೆಗೆ ವಿವಾಹ ಪೂರ್ವ ಕಾರ್ಯಕ್ರಮ ನಡೆಯುತ್ತಿವೆ. ಅದಕ್ಕಾಗಿ ಗುಜರಾತ್‌ನ ಜಾಮ್‌ನಗರವನ್ನು ಸಿಂಗರಿಸಲಾಗಿದೆ. ಅನಂತ್ ಪ್ರೀ-ವೆಡ್ಡಿಂಗ್ ಮದುವೆ ಸಂಗೀತ, ನೃತ್ಯ ಹೀಗೆ ವಿವಿಧ ರೀತಿಯ ಪ್ರದರ್ಶನಗಳು ನಡೆಯುತ್ತಿದೆ. ಇದನ್ನೂ ಓದಿ:‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’ ಎನ್ನುತ್ತಾ ಬಂತು ಮೋಷನ್ ಪೋಸ್ಟರ್
ಅನಂತ್ ಅಂಬಾನಿ ಪ್ರೀ-ವೆಡ್ಡಿಂಗ್‌ನ ಮುಖ್ಯ ಆಕರ್ಷಣೆ ಎಂದರೆ ಸುಪ್ರಸಿದ್ಧ ಗಾಯಕಿ ರಿಯಾನಾ ಅವರ ಸಂಗೀತ ಕಾರ್ಯಕ್ರಮ. ಅನಂತ್-ರಾಧಿಕಾ ಪ್ರೀ-ವೆಡ್ಡಿಂಗ್ ಕಾರ್ಯಕ್ರಮದ ಸುಂದರ ಸಂಜೆಗೆ ರಿಯಾನಾ ಗಾಯನ ಕಿಕ್ ಕೊಟ್ಟಿದೆ. ಕಾರ್ಯಕ್ರಮದಲ್ಲಿ ಹಾಡಲು ರಿಯಾನಾ, ಬರೋಬ್ಬರಿ 74 ಕೋಟಿ ರೂ. ಸಂಭಾವನೆ ಪಡೆದು ಎಲ್ಲರ ಹುಬ್ಬೇರಿಸಿದ್ದಾರೆ. ಇದನ್ನೂ ಓದಿ:ಪ್ರಶಾಂತ್ ನೀಲ್ ಮನೆಯಲ್ಲಿ ಒಟ್ಟಾದ ಜ್ಯೂ.ಎನ್‌ಟಿಆರ್, ರಿಷಬ್ ಶೆಟ್ಟಿ
ಅನಂತ್ ಅಂಬಾನಿ ಮದುವೆಯಾಗಿ ಅದ್ಧೂರಿ ದೇಗುಲ ನಿರ್ಮಿಸಲಾಗಿದೆ. ಸೊಗಸಾಗಿ ಕೆತ್ತನೆ ಮಾಡಿದ ಸ್ಥಂಭಗಳು, ಕಲಾಕೃತಿಗಳು ಹಾಗೂ ಕರಕುಶಲವಸ್ತುಗಳು ಇಲ್ಲಿ ಕಾಣಬಹುದು. ಇದನ್ನೂ ಓದಿ:ಸದ್ದಿಲ್ಲದೇ ಹಸೆಮಣೆ ಏರಿದ ‘ಬಿಗ್ ಬಾಸ್’ ಖ್ಯಾತಿಯ ದೀಪಿಕಾ ದಾಸ್
ಮದುವೆಯ ಪೂರ್ವ ಸಂಭ್ರಮದಲ್ಲಿ ಶಾರುಖ್ ಖಾನ್, ಗೌರಿ ಖಾನ್, ಸಲ್ಮಾನ್ ಖಾನ್, ಬಿಲ್ ಗೇಟ್ಸ್, ಮಾರ್ಕ್ ಜುಕರ್‌ಬರ್ಗ್, ಸದ್ಗುರು, ಅಕ್ಷಯ್ ಕುಮಾರ್, ಮುಂತಾದ ಸೆಲೆಬ್ರಿಟಿಗಳು ಭಾಗವಹಿಸಿದ್ದರು. ಆಲಿಯಾ ಭಟ್, ದೀಪಿಕಾ ಪಡುಕೋಣೆ, ರಣವೀರ್ ಸಿಂಗ್, ರಣಬೀರ್ ಕಪೂರ್, ನೀತು ಕಪೂರ್, ಅನನ್ಯಾ ಪಾಂಡೆ, ಜಾಹ್ನವಿ ಕಪೂರ್, ಶನಯಾ ಕಪೂರ್, ಶ್ರದ್ಧಾ ಕಪೂರ್, ಸೋನಮ್ ಕಪೂರ್ ಅಹುಜಾ, ಅನಿಲ್ ಕಪೂರ್ ಭಾಗಿಯಾಗಿದ್ದರು.
ಡೇವಿಡ್ ಧವನ್, ಎಂಎಸ್ ಧೋನಿ, ರೋಹಿತ್ ಶರ್ಮಾ, ಹಾರ್ದಿಕ್ ನೆಹ್ವಾಲ್, ಹಾರ್ದಿಕ್ ಪಾಂಡ್ಯ ಜಾಫ್ರಿ, ಅಮೀರ್ ಖಾನ್, ಸುಹಾನಾ ಖಾನ್, ರಿಯಾ ಕಪೂರ್, ಕರೀನಾ ಕಪೂರ್ ಖಾನ್, ಸೈಫ್ ಅಲಿ ಖಾನ್, ಸಾರಾ ಅಲಿ ಖಾನ್, ಇಬ್ರಾಹಿಂ ಅಲಿ ಖಾನ್, ಜಾನ್ ಅಬ್ರಹಾಂ, ಕರಿಷ್ಮಾ ಕಪೂರ್, ಅಟ್ಲೀ, ರಾಮ್ ಚರಣ್, ಮನೀಶ್ ಮಲ್ಹೋತ್ರಾ, ಮಾಧುರಿ ದೀಕ್ಷಿತ್ ನೇನೆ, ಕಿಯಾರಾ ಅಡ್ವಾಣಿ ಮತ್ತು ಸಿದ್ಧಾರ್ಥ್ ಮಲ್ಹೋತ್ರಾ ಇತರರ ಇದ್ದರು.