ಕಾರವಾರ: ಮಂಡ್ಯದ ಮುಸ್ಕಾನ್‍ರನ್ನು ತನಿಖೆಗೆ ಒಳಪಡಿಸುವಂತೆ ಉತ್ತರ ಕನ್ನಡ ಜಿಲ್ಲೆಯ ಸಂಸದ ಅನಂತಕುಮಾರ್ ಹೆಗ್ಡೆ ಅವರು ಮುಖ್ಯಮಂತ್ರಿಗೆ ಪತ್ರ ಬರೆದಿದ್ದಾರೆ. ಇದನ್ನೂ ಓದಿ: ಕುರಾನ್ ಮೇಲೆ ದೇಶ ನಡೆಯಲ್ಲ, ತಂದೆಯ ಜೊತೆಗೆ ಮುಸ್ಕಾನ್‌ಳನ್ನು ಬಂಧಿಸಬೇಕು: ಮುತಾಲಿಕ್
Advertisement
ತಾವು ಬರೆದ ಪತ್ರದಲ್ಲಿ ಮಂಡ್ಯದ ವಿದ್ಯಾರ್ಥಿನಿ ಬೀಬಿ ಮುಸ್ಕಾನ್ ಕುರಿತು ಪ್ರಸ್ತಾಪಿಸಿರುವ ಅವರು, ಈ ಹಿಂದೆ ಹಿಜಬ್ ವಿವಾದ ತಾರಕ್ಕೇರಿದ್ದ ಸಂದರ್ಭದಲ್ಲಿ ಮಂಡ್ಯದ ಪಿ.ಇ.ಎಸ್ ಕಾಲೇಜಿನ ವಿದ್ಯಾರ್ಥಿಗಳು ಹಿಜಾಬ್ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದರು. ಇದಕ್ಕುತ್ತರವಾಗಿ ಬೀಬಿ ಮುಸ್ಕಾನ್ ಎಂಬ ಬುರ್ಖಾಧಾರಿ ವಿದ್ಯಾರ್ಥಿನಿಯು ‘ಅಲ್ಲಾ ಹೋ ಅಕ್ಬರ್’ ಎಂದು ಕೂಗಿದ್ದ ವೀಡಿಯೋ ಜಗತ್ತಿನೆಲ್ಲಡೆ ಪ್ರಮುಖ ನ್ಯೂಸ್ ಚಾನೆಲ್‍ಗಳಲ್ಲಿ ಪ್ರಸಾರವಾಗಿ, ಸದರಿ ವಿದ್ಯಾರ್ಥಿನಿಯು ದಿಢೀರ್ ಪ್ರಸಿದ್ಧಿಯನ್ನು ಪಡೆದಿದ್ದ ಘಟನೆ ನಡೆದಿತ್ತು. ಇದನ್ನೂ ಓದಿ: ನನ್ನ ಮಗಳಿಗೆ ಬಂದ ಹಣವನ್ನು ಜನ ಸೇವೆಗೆ ಕೊಡ್ತೀನಿ: ಮುಸ್ಕಾನ್ ತಂದೆ
Advertisement
Advertisement
ಈ ವಿದ್ಯಾರ್ಥಿನಿಗೆ ಹಲವಾರು ಮುಸ್ಲಿಂ ಸಂಘಟನೆಗಳಿಂದ ಪ್ರಶಂಸೆಯ ನುಡಿಗಳು ಹಾಗೂ ಬಹುಮಾನಗಳ ಘೋಷಣೆ ಮಾಡಲಾಗಿತ್ತು. ಹೀಗಿರುವಾಗ ನಿಷೇಧಿತ ಮುಸ್ಲಿಂ ಭಯೋತ್ಪಾದಕ ಸಂಘಟನೆಯಾದ ಅಲ್-ಖೈದಾದ ಮುಖ್ಯಸ್ಥನಾದ ಆಯಮನ್-ಅಲ್-ಜವಾಹರಿ ಇತ್ತೀಚೆಗೆ ಈ ವಿದ್ಯಾರ್ಥಿನಿಯ ಕುರಿತು ‘ಭಾರತದ ಸರ್ವಶ್ರೇಷ್ಟ ಮಹಿಳೆ’ ಎಂದು ಹೊಗಳುತ್ತಿರುವ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರಗೊಂಡಿದೆ. ಇದನ್ನೂ ಓದಿ: ಮಂಡ್ಯದ ಮುಸ್ಕಾನ್ ಖಾನ್‍ನನ್ನು ಹೊಗಳಿದ ಮೋಸ್ಟ್ ವಾಂಟೆಡ್ ಅಲ್ ಖೈದಾ ಉಗ್ರ
Advertisement
ಕರ್ನಾಟಕ ರಾಜ್ಯ ಉಚ್ಚ ನ್ಯಾಯಾಲಯವು ಶಿಕ್ಷಣ ಸಂಸ್ಥೆಗಳಲ್ಲಿ ಹಿಜಬ್ ಧರಿಸುವುದನ್ನು ನಿಷೇಧಿಸಿ ತೀರ್ಪು ನೀಡಿದ್ದರೂ ಸಹಿತ ಹಲವಾರು ರಾಜಕಾರಣಿಗಳು, ಮೂಲಭೂತವಾದಿ ಸಂಘಟನೆಗಳು ಹಾಗೂ ವಿದ್ಯಾರ್ಥಿನಿಯರು ಉಚ್ಚ ನ್ಯಾಯಾಲಯದ ಆದೇಶವನ್ನು ಉಲ್ಲಂಘಿಸಿ ಪ್ರತಿಭಟನೆ ನಡೆಸಿರುತ್ತಾರೆ. ಹಿಜಾಬ್ ಪ್ರತಿಭಟನೆಯ ಹಿಂದೆ ಕಾಣದ ಕೈಗಳ ಕೈವಾಡವಿದೆ ಎಂದು ಉಚ್ಚ ನ್ಯಾಯಲಯ ಪೀಠವು ಅಭಿಪ್ರಾಯ ವ್ಯಕ್ತಪಡಿಸಿರುವುದು ಇಲ್ಲಿ ಉಲ್ಲೇಖನೀಯವಾಗಿದೆ. ಇದನ್ನೂ ಓದಿ: ಮಂಡ್ಯ ವಿದ್ಯಾರ್ಥಿನಿಗೆ ಐಫೋನ್, ಸ್ಮಾರ್ಟ್‍ವಾಚ್ ಗಿಫ್ಟ್ ಕೊಟ್ಟ ಕಾಂಗ್ರೆಸ್ ಶಾಸಕ
ಕಾರಣ ಬೀಬಿ ಮುಸ್ಕಾನ್ ವಿದ್ಯಾರ್ಥಿನಿಗೆ ಹಿಜಾಬ್ ಷಡ್ಯಂತ್ರದ ಹಿಂದಿರುವ ಕಾಣದ ಕೈಗಳು ಮತ್ತು ನಿಷೇಧಿತ ಸಂಘಟನೆಗಳೊಂದಿಗೆ ಇರುವ ಸಂಬಂಧದ ಕುರಿತಂತೆ ಕೂಲಂಕುಷವಾದ ತನಿಖೆ ನಡೆಸಬೇಕೆಂದು ಮುಖ್ಯಮಂತ್ರಿ ಬೊಮ್ಮಾಯಿಯವರಿಗೆ ಪತ್ರ ಬರೆದು ತನಿಖೆಗೆ ಆಗ್ರಹಿಸಿದ್ದಾರೆ.