ಕನ್ನಡದ ಖ್ಯಾತ ನಿರೂಪಕಿ ಅಪರ್ಣಾ (Aparna) ಜು.11ರಂದು ನಿಧನರಾಗಿದ್ದಾರೆ. ಹಲವು ವರ್ಷಗಳಿಂದ ನಟಿ ಜೊತೆ ಬಾಂಧವ್ಯ ಹೊಂದಿರುವ ನಿರೂಪಕಿ ಅನುಶ್ರೀ (Anushree) ಅವರು ಅಪರ್ಣಾ ನಿಧನಕ್ಕೆ ಭಾವುಕರಾಗಿದ್ದಾರೆ. ನಿರೂಪಣೆ ನೀವಿಲ್ಲದೇ ಅಪೂರ್ಣ ಎಂದು ಕಂಬನಿ ಮಿಡಿದಿದ್ದಾರೆ. ಇದನ್ನೂ ಓದಿ:ಶ್ವಾಸಕೋಶ ಕ್ಯಾನ್ಸರ್ ಈ ಹಂತದಲ್ಲಿತ್ತು, ವೈದ್ಯರು ಆರೇ ತಿಂಗಳು ಗ್ಯಾರಂಟಿ ಕೊಟ್ಟಿದ್ದರು – ಮಡದಿ ಸಾವು ನೆನೆದು ಪತಿ ಭಾವುಕ!
Advertisement
ನಿರೂಪಣೆಗೆ ಘನತೆ ನೀವು, ಕನ್ನಡಕ್ಕೆ ಶೋಭೆ, ನಿರೂಪಣೆ ನೀವಿಲ್ಲದೆ ಅಪೂರ್ಣ ಅಪರ್ಣ ಅಕ್ಕ ಎಂದಿದ್ದಾರೆ ಅನುಶ್ರೀ. ಈ ವಿಚಾರ ನೋವು ತಂದಿದೆ. ಬಿಗ್ ಬಾಸ್ ಕಾರ್ಯಕ್ರಮದಲ್ಲಿ ನಿಮ್ಮನ್ನು ಭೇಟಿಯಾದ ಕ್ಷಣ. ಇಂದಿಗೂ ಹಸಿರಾಗಿದೆ. ಅಂದು ಇಂದು ಎಂದೆಂದಿಗೂ ಕನ್ನಡಕ್ಕೆ ಒಬ್ಬರೇ ಮಹಾ ನಿರೂಪಕಿ ಅದು ನೀವು ಓಂ ಶಾಂತಿ ಎಂದು ಸೋಷಿಯಲ್ ಮೀಡಿಯಾದಲ್ಲಿ ಅನುಶ್ರೀ ಬರೆದುಕೊಂಡಿದ್ದಾರೆ.
Advertisement
View this post on Instagram
Advertisement
ಅಂದಹಾಗೆ, ಬಹಳ ದಿನಗಳಿಂದಲೂ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಅಪರ್ಣಾ ಅವರು ಬನಶಂಕರಿ 2ನೇ ಹಂತದಲ್ಲಿರುವ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. ಬೆಂಗಳೂರು ದೂರದರ್ಶನದಲ್ಲಿ ಸೀನಿಯರ್ ಗ್ರೇಡ್ ನಿರೂಪಕಿಯಾಗಿದ್ದ ಅಪರ್ಣಾ, ಆಕಾಶವಾಣಿ ನಿರೂಪಕಿಯಾಗಿ ಕೆಲಸ ನಿರ್ವಹಿಸಿದ್ದರು. ಅಲ್ಲದೇ ಮಜಾ ಟಾಕೀಸ್ ಕಾರ್ಯಕ್ರಮದಲ್ಲೂ ಅಭಿನಯಿಸಿದ್ದರು. ಕನ್ನಡದ ಯಶಸ್ವಿ ನಿರೂಪಕಿಯಾಗಿ 3 ದಶಕಗಳನ್ನು ಪೂರೈಸಿದ್ದಾರೆ.
Advertisement
ಕಿರುತೆರೆಯಲ್ಲಿ ‘ಮೂಡಲಮನೆ’, ‘ಮುಕ್ತ’ ಮುಂತಾದ ಧಾರಾವಾಹಿಗಳಲ್ಲಿ ಅಭಿನಯಿಸಿದ್ದ ಅಪರ್ಣಾ, 2013 ರಲ್ಲಿ ಬಿಗ್ಬಾಸ್ ಕನ್ನಡದ ಮೊದಲ ಸೀಸನ್ನಲ್ಲಿ ಭಾಗವಹಿಸಿದ್ದರು. 2015 ರಲ್ಲಿ ಸೃಜನ್ ಲೋಕೇಶ್ ನೇತೃತ್ವದಲ್ಲಿ ಆರಂಭವಾದ ‘ಮಜಾ ಟಾಕೀಸ್’ ಕಾರ್ಯಕ್ರಮದಲ್ಲಿ ವರಲಕ್ಷ್ಮಿ ಪಾತ್ರ ಮಾಡಿ ಕನ್ನಡ ಕಲಾಪ್ರಿಯರ ಮನಗೆದ್ದಿದ್ದರು. 2014 ರಲ್ಲಿ ಬೆಂಗಳೂರಿನ ನಮ್ಮ ಮೆಟ್ರೋದಲ್ಲಿ ಘೋಷಣೆಯಾಗುವ `ಪ್ರಯಾಣಿಕರು ಹತ್ತುವ ಮತ್ತು ಇಳಿಯುವ ಸೂಚನೆ’ಗೆ ಧ್ವನಿ ಗೂಡಿಸಿದ್ದರು.