ಬೆಂಗಳೂರು: ಪತಿಯ ಸಾವಿನಿಂದ ಮನನೊಂದು ಆ್ಯಸಿಡ್ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದ ನಿರೂಪಕ ಚಂದನ್ ಪತ್ನಿ ಮೀನಾ ಇದೀಗ ಮೃತಪಟ್ಟಿದ್ದಾರೆ.
ಪತಿ ಚಂದನ್ ಸಾವಿನ ಬಳಿಕ ತೀವ್ರ ನೊಂದಿದ್ದ ಮೀನಾ ತನ್ನ ಮಗನನ್ನು ಕೊಲೆ ಮಾಡಿ ತಾನೂ ಆ್ಯಸಿಡ್ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೀನಾ ಗುರುವಾರ ರಾತ್ರಿ 10 ಗಂಟೆಗೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಕೊನೆಯುಸಿರುಳೆದಿದ್ದಾರೆ.
Advertisement
ಖಾಸಗಿ ವಾಹಿನಿ ನಿರೂಪಕ ಚಂದನ್ ಸಾವಿನ ಬಳಿಕ ಮಾನಸಿಕವಾಗಿ ಕುಗ್ಗಿದ್ದ ಮೀನಾ ಏನಾದ್ರೂ ಮಾಡಿಕೊಳ್ಳಬಹುದೆಂದು ಆಕೆಯ ಅಣ್ಣ ಮತ್ತು ತಂದೆ ಒಂದು ವಾರದಿಂದ ಕಾವಲು ಕಾಯುತ್ತಿದ್ದರು. ಆದರೆ ಗುರುವಾರ ಬೆಳಗ್ಗೆ ದೊಡ್ಡಬಳ್ಳಾಪುರ ನಗರದ ಸೋಮೇಶ್ವರ ಬಡಾವಣೆಯಲ್ಲಿ ಯಾರೂ ಇಲ್ಲದ ವೇಳೆ ಮೀನಾ ತನ್ನ 13 ವರ್ಷದ ಮಗ ತುಷಾರ್ ನ ಕತ್ತು ಕೊಯ್ದು ಕೊಲೆ ಮಾಡಿದ್ದರು. ಬಳಿಕ ತಾನೂ ಆ್ಯಸಿಡ್ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದರು. ಘಟನೆಯಲ್ಲಿ ಚಂದನ್ ಮಗ ತುಷಾರ್ ಸ್ಥಳದಲ್ಲೇ ಸಾವನ್ನಪ್ಪಿದ್ದನು. ಆದ್ರೆ ಮೀನಾ ಅವರನ್ನು ಕೂಡಲೇ ಆಸ್ಪತ್ರೆಗೆ ರವಾನಿಸಲಾಗಿತ್ತು. ಇದನ್ನೂ ಓದಿ: ನಿರೂಪಕ ಚಂದನ್ ಸಾವಿನ ಬಳಿಕ ಮಗನ ಕತ್ತು ಕೊಯ್ದು, ಆ್ಯಸಿಡ್ ಕುಡಿದ ಪತ್ನಿ
Advertisement
Advertisement
ಮೃತ ಚಂದನ್ ಚಿಕ್ಕಪ್ಪ ವಿಜಯ್ ಕುಮಾರ್ ಗುರುವಾರ ವಿಕ್ಟೋರಿಯಾ ಆಸ್ಪತ್ರೆಗೆ ಭೇಟಿ ನೀಡಿದ್ದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೀನಾ ಆರೋಗ್ಯದಲ್ಲಿ ಚೇತರಿಕೆ ಕಾಣುತ್ತಿದೆ. ಬೆಳಗ್ಗೆ 11 ಗಂಟೆ ವೇಳೆಗೆ ನಮಗೆ ಮಾಹಿತಿ ಗೊತ್ತಾಯಿತು. ಮೀನಾಗೆ ಮೊದಲು ಕೊಲಂಬೊಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಕರೆದುಕೊಂಡು ಹೋಗಿ ನಂತರ ಅಲ್ಲಿಂದ ವಿಕ್ಟೋರಿಯಾಗೆ ಕರೆದುಕೊಂಡು ಹೋಗಲಾಯಿತು. ವಿಕ್ಟೋರಿಯಾ ಆಸ್ಪತ್ರೆಯ ಐಸಿಯು ನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಅಲ್ಲಿ ಮನೆಯಲ್ಲಿ ಏನ್ ಆಗಿತ್ತು ಎನ್ನುವ ಬಗ್ಗೆ ಮಾಹಿತಿ ಇಲ್ಲ. ಪಕ್ಕದ ಮನೆಯವರು ಆಸ್ಪತ್ರೆಗೆ ಸೇರಿಸಿದ್ದರು. ಈಗ ಮೀನಾ ಆರೋಗ್ಯದಲ್ಲಿ ಚೇತರಿಕೆ ಕಾಣುತಿತ್ತು. ಪುತ್ರ ತುಷಾರ್ ಮರಣೋತ್ತರ ಪರೀಕ್ಷೆ ಆಗಿದ್ದು, ಶುಕ್ರವಾರ ಅಂತ್ಯಕ್ರಿಯೆ ನಡೆಯಲಿದೆ ಎಂದು ಹೇಳಿದ್ದರು. ಸದ್ಯ ಮೀನಾ ಕೂಡ ಚಿಕಿತ್ಸೆ ಫಲಕಾರಿ ಆಗದೇ ಆಸ್ಪತ್ರೆಯಲ್ಲಿಯೇ ಮೃತಪಟ್ಟಿದ್ದಾರೆ. ಇದನ್ನೂ ಓದಿ: ಸಾವಿನಲ್ಲೂ ಸಾರ್ಥಕತೆ ಮೆರೆದ ನಿರೂಪಕ ಚಂದನ್ ಪುತ್ರ!
Advertisement
ತುಷಾರ್ ಸಾವಿನ ಬಳಿಕ ಆತನ ಕಣ್ಣನ್ನು ಕುಟುಂಬದವರು ದಾನ ಮಾಡಿ ಸಾವಿನಲ್ಲೂ ಸಾರ್ಥಕತೆ ಮರೆದಿದ್ದಾರೆ.