ತುಮಕೂರು: ಸಿದ್ದಗಂಗೆಯ ಶಿವೈಕ್ಯ ಶತಾಯುಷಿ ಶಿವಕುಮಾರ ಶ್ರೀಗಳ ಐಕ್ಯ ಸ್ಥಳದ ಮೇಲೆ ಇಂದು ಶಿವಲಿಂಗ ಪ್ರತಿಷ್ಠಾಪನೆಯಾಗಿದೆ.
ಇಂದು ಬೆಳಗ್ಗಿನ ಜಾವ ಬ್ರಾಹ್ಮಿ ಮುಹೂರ್ತದಲ್ಲಿ ಶಿವಕುಮಾರ ಶ್ರೀಗಳ ಗದ್ದುಗೆಯ ಪೀಠದ ಮೇಲೆ ಶಿವಲಿಂಗ ಪ್ರತಿಷ್ಠಾಪನೆ ಮಾಡಲಾಯಿತು. ಪ್ರಾತಃ ಕಾಲದಿಂದಲೇ ಹಲವು ವಿಧಿವಿಧಾನಗಳನ್ನು ನೆರವೇರಿಸಿ, ಶಿವಲಿಂಗವನ್ನು ದೈವೀಕರಿಸಿ ಪ್ರತಿಷ್ಠಾಪನೆ ಮಾಡಲಾಗಿದೆ. ಸಿದ್ದಗಂಗಾ ಮಠಾಧ್ಯಕ್ಷ ಸಿದ್ದಲಿಂಗ ಸ್ವಾಮೀಜಿ, ಸೇರಿದಂತೆ ಹಲವು ಸಾಧು ಸಂತರ ನೇತೃತ್ವದಲ್ಲಿ ಶಾಸ್ತ್ರೋಕ್ತವಾಗಿ ಶಿವಲಿಂಗ ಪ್ರತಿಷ್ಠಾಪನೆ ಮಾಡಲಾಯಿತು. ಇದನ್ನೂ ಓದಿ: ಪುರಾತನ ಕಾಲದ ಶಿವಲಿಂಗ ಪತ್ತೆ- ಗ್ರಾಮಸ್ಥರಲ್ಲಿ ಅಚ್ಚರಿ, ಸಂತಸ
Advertisement
Advertisement
ಲಿಂಗವನ್ನು ಶ್ರೀಗಳು ತಂಗುತ್ತಿದ್ದ ಹಳೆ ಮಠದಲ್ಲಿ ಮಂಡಳದ 48 ದಿನಗಳ ಕಾಲ ಜಲಾಧಿವಾಸ, ಧಾನ್ಯಾಧಿವಾಸ, ಪುಷ್ಪಾಧಿವಾಸ ಹಾಗೂ ಶಯನಾಧಿವಾಸದ ವಿಧಿವಿಧಾನ ಪೂರೈಸಲಾಗಿತ್ತು. ಹೀಗೆ ಸಕಲ ವಿಧಾನ ಪೂರೈಸಿ ದೈವೀ ಶಕ್ತಿಯನ್ನು ಪಡೆದ ಪವಿತ್ರ ಲಿಂಗವನ್ನು ಶ್ರೀಗಳ ಗದ್ದುಗೆಯ ಪೀಠದ ಮೇಲೆ ಇರಿಸಲಾಗಿದೆ.
Advertisement
Advertisement
ಪ್ರತಿಷ್ಠಾಪಿಸಲ್ಪಟ್ಟ ಶಿವಲಿಂಗವು 27 ಇಂಚು ಉದ್ದವಿದೆ. ಶಿವಕುಮಾರ ಶ್ರೀಗಳ ಕೈಯಲ್ಲಿನ ಗೇಣು 9 ಇಂಚು ಇತ್ತು. ಆ ಗೇಣಿನ ಮೂರು ಪಟ್ಟು ಲಿಂಗವನ್ನು ರೂಪಿಸಲಾಗಿದೆ. ಪಾನ ಬಟ್ಟಲು ಸೇರಿ ಪೂರ್ಣವಾಗಿ ಲಿಂಗ 38 ಇಂಚು ಇದೆ.
ಲಿಂಗ ಪ್ರತಿಷ್ಠಾಪನಾ ಕಾರ್ಯಕ್ರಮ ಕಣ್ಣು ತುಂಬಿಕೊಳ್ಳಲು ನಾಡಿನ ವಿವಿಧೆಡೆಗಳಿಂದ ಭಕ್ತಾದಿಗಳು ಸಮೂಹ ಬಂದಿತ್ತು. ಅದೇ ರೀತಿ ಸಂಸದ ಜಿ.ಎಸ್ ಬಸವರಾಜ ಹಾಜರಿದ್ದು, ಶಿವಲಿಂಗ ದರ್ಶನ ಪಡೆದರು.