ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮತ್ತೆ ಪಾತಕ ಲೋಕ ಹೆಡೆ ಎತ್ತಿದಂತಿದೆ. ಕೆಆರ್‌ಪುರಂನ ಸೀಗೆಹಳ್ಳಿಯಲ್ಲಿ ರಸ್ತೆ ಬದಿ ನಿಂತಿದ್ದ ಆಂಧ್ರ ಮೂಲದ ಬಿಲ್ಡರ್ (Builder) ಕಮ್ ರೌಡಿಶೀಟರ್ ಮೇಲೆ ದುಷ್ಕರ್ಮಿಗಳು ನಾಲ್ಕೈದು ಸುತ್ತು ಗುಂಡಿನ ಮಳೆಗರೆದು ಎಸ್ಕೇಪ್ ಆಗಿದ್ದಾರೆ.
ಬೆಂಗಳೂರಿನ (Bengaluru) ಕೆ.ಆರ್.ಪುರಂ ಠಾಣಾ ವ್ಯಾಪ್ತಿಯ ಕುರುಡುಸೊಣ್ಣೇನಹಳ್ಳಿಯಲ್ಲಿ ಈ ಘಟನೆ ನಡೆದಿದೆ. ಶಿವಶಂಕರ್ ರೆಡ್ಡಿ ಮದನಪಲ್ಲಿಯಲ್ಲಿ ಹಲವಾರು ಕ್ರೈಂಗಳಲ್ಲಿ ಭಾಗಿಯಾಗಿದ್ದಾನೆ. ಘಟನೆಯಲ್ಲಿ ಆಂಧ್ರಪ್ರದೇಶದ (Andhra Pradesh) ಮದನಪಲ್ಲಿಯ ರೌಡಿಶೀಟರ್ ಕಮ್ ಬಿಲ್ಡರ್ ಶಿವಶಂಕರರೆಡ್ಡಿ ಮತ್ತು ಆತನ ಕಾರು ಚಾಲಕ ಅಶೋಕ್ ರೆಡ್ಡಿ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸದ್ಯ ಇಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇದನ್ನೂ ಓದಿ: ಟಿಆರ್‌ಎಸ್ ಅಲ್ಲ, ಇನ್ಮುಂದೆ ಬಿಆರ್‌ಎಸ್ – ಕೆಸಿಆರ್ ಪಕ್ಷದ ಹೆಸರು ಬದಲಾವಣೆಗೆ ಚುನಾವಣಾ ಆಯೋಗ ಒಪ್ಪಿಗೆ
ಗುಂಡಿನ ದಾಳಿ ನಡೆಸಿದ ದುಷ್ಕರ್ಮಿಗಳು ಆಂಧ್ರ ಮೂಲದವರೆಂಬ ಶಂಕೆ ವ್ಯಕ್ತವಾಗಿದ್ದು, ಹಳೆದ್ವೇಷದ ಹಿನ್ನೆಲೆಯಲ್ಲಿ ಹತ್ಯೆಗೆ ಯತ್ನಿಸಿರುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ. ಆರೋಪಿಗಳ ಪತ್ತೆಗೆ ವೈಟ್ ಫೀಲ್ಡ್ ಡಿಸಿಪಿ ಮೂರು ತಂಡ ರಚನೆ ಮಾಡಿದ್ದು, ಪೊಲೀಸರು ಶೋಧ ನಡೆಸಿದ್ದಾರೆ. ಘಟನೆಗೆ ಸಂಬಂಧಿಸಿ ಕೆ ಆರ್ ಪುರಂ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ಪ್ರತಿಭಟನೆ ವೇಳೆ ಬಂದ ಮಹಾರಾಷ್ಟ್ರ ಲಾರಿಗೆ ಮಸಿ ಬಳಿದ ಕರವೇ ಕಾರ್ಯಕರ್ತರು