ಬೆಂಗಳೂರು: ದಾಖಲೆಯ ಅವಧಿಯಲ್ಲಿ ತುಂಗಭದ್ರಾ ಅಣೆಕಟ್ಟಿನ(Tungabhadra Dam) ಎಲ್ಲಾ 33 ಗೇಟ್‌ಗಳನ್ನು ಯಶಸ್ವಿಯಾಗಿ ಬದಲಾಯಿಸಿದ ಹಿನ್ನೆಲೆಯಲ್ಲಿ ಆಯೋಜಿಸಿರುವ ಐತಿಹಾಸಿಕ ಸಂಭ್ರಮಾಚರಣೆ ಕಾರ್ಯಕ್ರಮಕ್ಕೆ ಆಂಧ್ರಪ್ರದೇಶದ ಮುಖ್ಯಮಂತ್ರಿ (Andhra Pradesh CM) ಎನ್. ಚಂದ್ರಬಾಬು ನಾಯ್ಡು(N. Chandrababu Naidu) ಹಾಗೂ ನೀರಾವರಿ ಸಚಿವ ನಿಮ್ಮಲ ರಾಮ ನಾಯ್ಡು ಅವರನ್ನು ಕರ್ನಾಟಕದ ಉನ್ನತ ಮಟ್ಟದ ನಿಯೋಗವು ಅಧಿಕೃತವಾಗಿ ಆಹ್ವಾನಿಸಿದೆ.
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನಿರ್ದೇಶನದ ಮೇರೆಗೆ ಮಾಜಿ ಸಚಿವ ಹಾಗೂ ಹಾಲಿ ವಿಧಾನ ಪರಿಷತ್ ಸದಸ್ಯ ಎನ್.ಎಸ್. ಬೋಸರಾಜು ಅವರ ನೇತೃತ್ವದ ನಿಯೋಗವು ಆಂಧ್ರಪ್ರದೇಶದ ನಾಯಕರನ್ನು ಖುದ್ದಾಗಿ ಭೇಟಿ ಮಾಡಿ ಆಹ್ವಾನ ಪತ್ರಿಕೆ ಹಸ್ತಾಂತರಿಸಿತು. ಈ ನಿಯೋಗದಲ್ಲಿ ಹಿರಿಯ ಶಾಸಕರಾದ ಬಸವರಾಜ ರಾಯರೆಡ್ಡಿ ಹಾಗೂ ವಿಧಾನ ಪರಿಷತ್ ಸದಸ್ಯ ಬಸನಗೌಡ ಬಾದರ್ಲಿ ಅವರು ಸಹ ಉಪಸ್ಥಿತರಿದ್ದರು.

ಈ ಐತಿಹಾಸಿಕ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಆಂಧ್ರ ಸಿಎಂಗೆ ಪತ್ರದ ಮೂಲಕ ವೈಯಕ್ತಿಕವಾಗಿ ಮನವಿ ಮಾಡಿದ್ದಾರೆ. ತುಂಗಭದ್ರಾ ಅಣೆಕಟ್ಟಿನ ಸುರಕ್ಷತೆ ಹಾಗೂ ಭವಿಷ್ಯದ ದೃಷ್ಟಿಯಿಂದ ಅತ್ಯಂತ ಮಹತ್ವದ್ದಾಗಿರುವ ಈ ಗೇಟ್ ಅಳವಡಿಕೆ ಕಾರ್ಯವು ಇಂಜಿನಿಯರಿಂಗ್ ಮತ್ತು ಆಡಳಿತಾತ್ಮಕ ಸಾಧನೆಯ ಮೈಲುಗಲ್ಲಾಗಿದೆ.
ಈ ಯಶಸ್ಸಿನ ಸಂಭ್ರಮಾಚರಣೆಯನ್ನು ಇದೇ ಜೂನ್ 25, 2026ರಂದು ನೇರವಾಗಿ ತುಂಗಭದ್ರಾ ಅಣೆಕಟ್ಟಿನ ಮೇಲೆಯೇ ಆಯೋಜಿಸಲಾಗಿದೆ. ಕರ್ನಾಟಕ ಸರ್ಕಾರ ಆಯೋಜಿಸುತ್ತಿರುವ ಈ ಬೃಹತ್ ಕಾರ್ಯಕ್ರಮದಲ್ಲಿ ಕೇಂದ್ರ ಜಲಶಕ್ತಿ ಸಚಿವ ಸಿ.ಆರ್. ಪಾಟೀಲ್ ಹಾಗೂ ಇತರ ಪಾಲುದಾರ ರಾಜ್ಯಗಳ ಜನಪ್ರತಿನಿಧಿಗಳು ಭಾಗವಹಿಸಲಿದ್ದಾರೆ.ಇದನ್ನೂ ಓದಿ: ಬಸ್ ಸ್ಟೇರಿಂಗ್ ಹಿಡಿದು ಕುಡುಕನ ಯಡವಟ್ಟು – ಮರಕ್ಕೆ ಡಿಕ್ಕಿಯಾಗಿ 11 ಮಂದಿಗೆ ಗಂಭೀರ ಗಾಯ
ದಾಖಲೆಯ ಅವಧಿಯಲ್ಲಿ 33 ಹೊಸ ಗೇಟ್‌ಗಳ ಉನ್ನತೀಕರಣವು ಮಹತ್ವದ ಕಾರ್ಯವಾಗಿದ್ದು, ಮುಂದಿನ ಹಲವು ದಶಕಗಳ ಕಾಲ ಅಣೆಕಟ್ಟಿನ ಸುರಕ್ಷಿತ ಕಾರ್ಯಾಚರಣೆಗೆ ಅನುವು ಮಾಡಿಕೊಡಲಿದೆ. ಉಪಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್ ಅವರ ನಿರ್ದೇಶನದಂತೆ ನಾವು ಆಂಧ್ರಪ್ರದೇಶಕ್ಕೆ ಭೇಟಿ ನೀಡಿ, ಅಲ್ಲಿನ ಮುಖ್ಯಮಂತ್ರಿಗಳು ಹಾಗೂ ನೀರಾವರಿ ಸಚಿವರನ್ನು ಈ ಮಹತ್ವದ ಕಾರ್ಯಕ್ರಮಕ್ಕೆ ಅಧಿಕೃತವಾಗಿ ಆಹ್ವಾನಿಸಿದ್ದೇವೆ ಎಂದು ಮಾಜಿ ಸಚಿವ ಎನ್.ಎಸ್. ಬೋಸರಾಜು ತಿಳಿಸಿದ್ದಾರೆ.ಇದನ್ನೂ ಓದಿ: ಬಿಜೆಪಿಯಲ್ಲಿ ಅಡ್ಡ ಮತ ಪ್ರಕ್ಷುಬ್ಧತೆ – ಧರ್ಮಸ್ಥಳ ಆಣೆ ಬೇಡ ಅಂತಿರೋ ಹಿರಿಯರು
