ಆಂಧ್ರದಲ್ಲಿ ಕಾಂಗ್ರೆಸ್‌ ಮುಖ್ಯಸ್ಥೆಯಾಗಿ ವೈಎಸ್ ಶರ್ಮಿಳಾ ಆಯ್ಕೆ?

Public TV
1 Min Read
YS SHARMILA

ಹೈದರಾಬಾದ್:‌ ಇತ್ತೀಚೆಗಷ್ಟೇ ಕಾಂಗ್ರೆಸ್ (Congress) ಸೇರ್ಪಡೆಯಾಗಿರುವ ವೈಎಸ್ ಶರ್ಮಿಳಾ (YS Sharmila) ಅವರನ್ನು ನೂತನ ರಾಜ್ಯಾಧ್ಯಕ್ಷರನ್ನಾಗಿ ನೇಮಕ ಮಾಡುವ ಸಾಧ್ಯತೆ ಇದೆ ಎಂಬುದಾಗಿ ವರದಿಯಾಗಿದೆ.

ಮೂಲಗಳ ಪ್ರಕಾರ, ಆಂಧ್ರ ಪ್ರದೇಶ ಕಾಂಗ್ರೆಸ್ ಮುಖ್ಯಸ್ಥ ಗಿಡುಗು ರುದ್ರರಾಜು  (Gidugu Rudra Raju) ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನಲಾಗಿದೆ. ಹೀಗಾಗಿ ಅವರ ಸ್ಥಾನಕ್ಕೆ ವೈಎಸ್ ಶರ್ಮಿಳಾ ಅವರನ್ನು ನೇಮಕ ಮಾಡಿ ಶೀಘ್ರದಲ್ಲೇ ಕಾಂಗ್ರೆಸ್ ಅಧಿಕೃತ ಘೋಷಣೆ ಮಾಡಲಿದೆ ಎನ್ನಲಾಗಿದೆ.

Gidugu Rudra Raju

ಈ ತಿಂಗಳ ಆರಂಭದಲ್ಲಿ ಆಂಧ್ರಪ್ರದೇಶದ (Andhpradesh) ಮುಖ್ಯಮಂತ್ರಿ ವೈಎಸ್ ಜಗನ್ ಮೋಹನ್ ರೆಡ್ಡಿ ಅವರ ಸಹೋದರಿ ವೈಎಸ್ ಶರ್ಮಿಳಾ ಅವರು ತಮ್ಮ ವೈಎಸ್ಆರ್ ತೆಲಂಗಾಣ ಕಾಂಗ್ರೆಸ್ ಪಕ್ಷವನ್ನು ಕಾಂಗ್ರೆಸ್‌ನೊಂದಿಗೆ ವಿಲೀನಗೊಳಿಸುವುದಾಗಿ ಘೋಷಿಸಿದರು. ಇದನ್ನೂ ಓದಿ: ಅಯೋಧ್ಯೆ ಕಾರ್ಯಕ್ರಮಕ್ಕೆ ಹೋಗಲಾಗ್ತಿಲ್ಲ, ಇದು ನನ್ನ ದುರದೃಷ್ಟ: ಜಗ್ಗಿ ವಾಸುದೇವ್

ಕಾಂಗ್ರೆಸ್ ಅನ್ನು ಶ್ಲಾಘಿಸಿದ ಶರ್ಮಿಳಾ, ಇದು ದೇಶದ ಅತಿದೊಡ್ಡ ಜಾತ್ಯತೀತ ಪಕ್ಷವಾಗಿದೆ ಯಾಕೆಂದರೆ ಅದು ಎಲ್ಲಾ ಸಮುದಾಯಗಳಿಗೆ ಅಚಲವಾಗಿ ಸೇವೆ ಸಲ್ಲಿಸುತ್ತದೆ. ಎಲ್ಲಾ ವರ್ಗದ ಜನರನ್ನು ಒಗ್ಗೂಡಿಸುತ್ತದೆ ಎಂದು ಹೇಳಿದರು.

ಕಾಂಗ್ರೆಸ್ ಸೇರುವ ಮೊದಲು ವೈಎಸ್ ಶರ್ಮಿಳಾ ಅವರು ಪಕ್ಷಕ್ಕೆ ಬೆಂಬಲ ನೀಡುವುದಾಗಿ ಪುನರುಚ್ಚರಿಸಿದ್ದರು. ತೆಲಂಗಾಣ ಮಾಜಿ ಮುಖ್ಯಮಂತ್ರಿ ಕೆ ಚಂದ್ರಶೇಖರ ರಾವ್ ಅವರಿಗೆ ಲಾಭವಾಗಬಹುದಾದ ಮತಗಳ ವಿಭಜನೆಯನ್ನು ತಡೆಯಲು ತೆಲಂಗಾಣ ಚುನಾವಣೆಯಲ್ಲಿ ಸ್ಪರ್ಧಿಸಲಿಲ್ಲ ಎಂದಿದ್ದರು.

Share This Article