ಹೈದರಾಬಾದ್: ಖಾಸಗಿ ಪ್ರವಾಸಿ ಬಸ್ ಹಾಗೂ ಕ್ರೂಸರ್ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ 13 ಜನ ಸ್ಥಳದಲ್ಲಿಯೇ ಮೃತಪಟ್ಟ ಧಾರುಣ ಘಟನೆ ಇಂದು ಸಂಜೆ ಆಂಧ್ರ ಪ್ರದೇಶದಲ್ಲಿ ನಡೆದಿದೆ.
ಕರ್ನೂಲ್ ಜಿಲ್ಲೆಯ ವೆಲ್‍ದುರ್ತಿಯಲ್ಲಿ ಎಸ್‌ಆರ್‌ಎಸ್ ಟ್ರಾವೆಲ್ಸ್ ಬಸ್ ಹಾಗೂ ಕ್ರೂಸರ್ ಮುಖಾಮುಖಿ ಡಿಕ್ಕಿ ಹೊಡೆದಿದೆ. ಚಾಲಕ ಸೇರಿದಂತೆ ಕ್ರೂಸರ್ ಮುಂಭಾಗದಲ್ಲಿ ಕುಳಿತಿದ್ದ ಪ್ರಯಾಣಿಕರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಅನೇಕರು ಗಂಭೀರವಾಗಿ ಗಾಯಗೊಂಡಿದ್ದಾರೆ.
Advertisement
Andhra Pradesh: 13 dead and several injured after two vehicles collided in Veldurthi of Kurnool district today. More details awaited. pic.twitter.com/lHoIlDsBkO
— ANI (@ANI) May 11, 2019
Advertisement
ಕೆಲ ಪ್ರಯಾಣಿಕರು ವಾಹನಗಳನ್ನು ನಿಲ್ಲಿಸಿ ಗಾಯಾಳುಗಳನ್ನು ಕರ್ನೂಲ್ ಆಸ್ಪತ್ರೆಗೆ ಸಾಗಿಸಿ ಮಾನವೀಯತೆ ಮರೆದಿದ್ದಾರೆ. ಘಟನೆಯಿಂದಾಗಿ ಕೆಲ ಹೊತ್ತು ಸಂಚಾರ ಅಸ್ತವ್ಯಸ್ತವಾಗಿತ್ತು. ಸ್ಥಳಕ್ಕೆ ದೌಡಾಯಿಸಿದ ಪೊಲೀಸರು, ಪರಿಶೀಲನೆ ನಡೆಸಿ, ವಾಹನ ಸಂಚಾರಕ್ಕೆ ವ್ಯವಸ್ಥೆ ಮಾಡಿಕೊಟ್ಟಿದ್ದಾರೆ.
Advertisement
ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು ಈ ಘಟನೆಯ ಬಗ್ಗೆ ಸಂತಾಪ ಸೂಚಿಸಿದ್ದು, ಗಾಯಾಳುಗಳಿಗೆ ಅಗತ್ಯ ವೈದ್ಯಕೀಯ ಸೌಲಭ್ಯ ಒದಗಿಸಬೇಕು ಎಂದು ಕರ್ನೂಲ್ ಆಸ್ಪತ್ರೆಯ ವೈದ್ಯಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.