ಹೈದರಾಬಾದ್: ಪಶ್ಚಿಮ ಗೋದಾವರಿ ಜಿಲ್ಲೆಯ ಜಂಗಾರೆಡ್ಡಿಗುಡೆಂ ಬಳಿ ಇಂದು ಆಂಧ್ರಪ್ರದೇಶ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ(ಎಪಿಎಸ್‌ಆರ್‌ಟಿಸಿ)ಯ ಬಸ್ ಜಿಲ್ಲೇರು ವಾಗು(ಜಲ್ಲೇರು ಹೊಳೆ)ಯಲ್ಲಿ ಬಿದ್ದಿದೆ. ಈ ಪರಿಣಾಮ ಒಂಬತ್ತು ಪ್ರಯಾಣಿಕರು ಸಾವನ್ನಪ್ಪಿದ್ದಾರೆ.
ತೆಲಂಗಾಣದ ಅಶ್ವರಾವ್‍ಪೇಟೆಯಿಂದ ಜಂಗಾರೆಡ್ಡಿಗುಡೆಮ್‍ಗೆ ತೆರಳುತ್ತಿದ್ದ ಬಸ್‍ನಲ್ಲಿ ಸುಮಾರು 35 ಪ್ರಯಾಣಿಕರು ಪ್ರಯಾಣಿಸುತ್ತಿದ್ದರು. ಈ ವೇಳೆ ಎಪಿಎಸ್‌ಆರ್‌ಟಿಸಿ ಬಸ್ ಚಾಲಕ ಜಲ್ಲೇರು ನದಿಗೆ ಅಡ್ಡಲಾಗಿರುವ ಸೇತುವೆಯ ಮೇಲೆ ವಿರುದ್ಧ ದಿಕ್ಕಿನಲ್ಲಿ ಬರುತ್ತಿದ್ದ ಲಾರಿಯನ್ನು ತಪ್ಪಿಸಲು ಪ್ರಯತ್ನಿಸಿದ್ದಾನೆ. ಇದನ್ನೂ ಓದಿ: ಶ್ರೀನಿವಾಸ್ ಪೂಜಾರಿ ಒಂದು ರೂಪಾಯಿ ಖರ್ಚು ಮಾಡದೇ ಗೆದ್ದಿದ್ದಾರೆ: ಬಿ.ಎಲ್.ಸಂತೋಷ್
Advertisement
Advertisement
ಈ ಪರಿಣಾಮ ಬಸ್ ಸೇತುವೆಯ ರೇಲಿಂಗ್‍ಗೆ ಡಿಕ್ಕಿ ಹೊಡೆದು ನದಿಯೊಳಗೆ ಬಿದ್ದಿದೆ. ಅದಕ್ಕೆ ಬಸ್ ನಲ್ಲಿದ್ದ ಪ್ರಯಾಣಿಕರಲ್ಲಿ 9 ಜನರು ಸಾವನ್ನಪ್ಪಿದ್ದಾರೆ.
Advertisement
Advertisement
ಪಶ್ಚಿಮ ಗೋದಾವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಹುಲ್ ದೇವ್ ಶರ್ಮಾ ಅವರು ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ್ದು, ಇದುವರೆಗೆ ನಾವು ಐದು ಮಹಿಳಾ ಪ್ರಯಾಣಿಕರು ಸೇರಿದಂತೆ ಎಂಟು ಮೃತದೇಹಗಳನ್ನು ಹೊರತೆಗೆದಿದ್ದೇವೆ. ಅಪಘಾತ ನಡೆದ ತಕ್ಷಣ ಸ್ಥಳೀಯ ಜನರು ಮತ್ತು ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ರಕ್ಷಣಾ ಕಾರ್ಯಾಚರಣೆಯನ್ನು ಮಾಡಿದ್ದಾರೆ ಎಂದು ತಿಳಿಸಿದರು. ಇದನ್ನೂ ಓದಿ: ಪಠ್ಯಪುಸ್ತಕ ವಿತರಿಸದಿರುವುದು ಶಿಕ್ಷಣ ಸಚಿವರ ಅಸಮರ್ಥತೆಯ ಸಂಕೇತ: ಎಎಪಿ