ಅಮರಾವತಿ: ಆಂಧ್ರಪ್ರದೇಶ ವಿಧಾನಸಭೆಯ (Andhra Pradesh Assembly) ಸ್ಪೀಕರ್ ತಮ್ಮಿನೇನಿ ಸೀತಾರಾಮ್ ಅವರು ಪಕ್ಷಾಂತರದ ವಿರುದ್ಧ ನಿರ್ಣಾಯಕ ನಿಲುವು ತೆಗೆದುಕೊಂಡಿದ್ದು, 8 ಶಾಸಕರನ್ನು ಅನರ್ಹಗೊಳಿಸಿದ್ದಾರೆ.
ಯುವಜನ ಶ್ರಮಿಕ ರೈತ ಕಾಂಗ್ರೆಸ್ ಪಕ್ಷ (ವೈಎಸ್‌ಆರ್‌ಸಿಪಿ) ಸಲ್ಲಿಸಿದ ಅರ್ಜಿಯ ಮೇರೆಗೆ ಮುಖ್ಯಮಂತ್ರಿ ಕಚೇರಿ (ಸಿಎಂಒ) ಅಧಿಕೃತ ಪ್ರಕಟಣೆಯ ಪ್ರಕಾರ, ಅನರ್ಹಗೊಂಡ ಸದಸ್ಯರಲ್ಲಿ ಆನಂ ರಾಮನಾರಾಯಣ ರೆಡ್ಡಿ, ಮೇಕಪತಿ ಚಂದ್ರಶೇಖರ್ ರೆಡ್ಡಿ, ಕೋಟಂ ರೆಡ್ಡಿ ಶ್ರೀಧರ್ ರೆಡ್ಡಿ ಮತ್ತು ಉಂಡವಳ್ಳಿ ಶ್ರೀದೇವಿ ಸೇರಿದ್ದಾರೆ. ಇದನ್ನೂ ಓದಿ: ರಾಹುಲ್‌ಗೆ ಶಾಕ್ – ವಯನಾಡಿನಲ್ಲಿ ಸಿಪಿಐ ಅಭ್ಯರ್ಥಿ ಕಣಕ್ಕೆ
ಮುಖ್ಯಮಂತ್ರಿ ಕಚೇರಿ ಪ್ರಕಟಣೆ ಪ್ರಕಾರ, ಉಲ್ಲೇಖಿಸಲಾದ ಶಾಸಕರ ವಿರುದ್ಧ ವೈಎಸ್‌ಆರ್‌ಸಿಪಿಯ ಅರ್ಜಿಯಲ್ಲಿ ಸಲ್ಲಿಸಲಾದ ಆರೋಪಗಳು ಮತ್ತು ಸಾಕ್ಷ್ಯಗಳನ್ನು ಕೂಲಂಕಷವಾಗಿ ಪರಿಶೀಲಿಸಿದ ನಂತರ ಅನರ್ಹತೆ ನಿರ್ಧಾರಕ್ಕೆ ಬರಲಾಗಿದೆ.
ಅನರ್ಹಗೊಂಡ ಸದಸ್ಯರು ಪಕ್ಷದ ಶಿಸ್ತು ಉಲ್ಲಂಘಿಸಿದ್ದಾರೆ. ಪಕ್ಷದ ತತ್ವಗಳಿಗೆ ವಿರುದ್ಧವಾದ ಚಟುವಟಿಕೆಗಳಲ್ಲಿ ತೊಡಗಿದ್ದಾರೆ ಎಂದು ಆರೋಪಿಸಲಾಗಿದೆ. ಇದಲ್ಲದೇ, ತೆಲುಗು ದೇಶಂ ಪಕ್ಷ (ಟಿಡಿಪಿ) ಸಲ್ಲಿಸಿದ ಅರ್ಜಿಯ ಆಧಾರದ ಮೇಲೆ ಮದ್ದಲಗಿರಿ, ಕರಣಂ ಬಲರಾಮ್, ವಲ್ಲಭನೇನಿ ವಂಶಿ ಮತ್ತು ವಾಸುಪಲ್ಲಿ ಗಣೇಶ್ ಅನರ್ಹಗೊಂಡಿದ್ದಾರೆ. ಟಿಡಿಪಿ ಕೂಡ ತನ್ನ ಶಾಸಕರ ವಿರುದ್ಧ ಇದೇ ಆರೋಪ ಮಾಡಿದೆ. ಇದನ್ನೂ ಓದಿ: ಜಾರ್ಖಂಡ್‌ನ ಮಾಜಿ ಸಿಎಂ ಮಧು ಕೋಡ ಪತ್ನಿ, ಕಾಂಗ್ರೆಸ್ ಸಂಸದೆ ಗೀತಾ ಕೋಡಾ ಬಿಜೆಪಿ ಸೇರ್ಪಡೆ