Advertisements

ಆಂಧ್ರ ಪ್ರದೇಶ ಪ್ರವಾಹ – 1 ಕೋಟಿ ರೂ. ದೇಣಿಗೆ ಕೊಟ್ಟ ಪ್ರಭಾಸ್

ಹೈದರಾಬಾದ್: ಆಂಧ್ರಪ್ರದೇಶದಲ್ಲಿ ಸುರಿದ ಭಾರೀ ಮಳೆ ಹಾಗೂ ಪ್ರವಾಹದಿಂದಾಗಿ ಸಂಕಷ್ಟಕ್ಕೆ ಸಿಲುಕಿರುವ ಸಂತ್ರಸ್ತರ ನೆರವಿಗೆ ಟಾಲಿವುಡ್ ನಟ ಪ್ರಭಾಸ್ ಸಹಾಯ ಹಸ್ತಚಾಚಿದ್ದಾರೆ.

Advertisements

ಕಳೆದ ಎರಡು ವಾರ ಸುರಿದ ಭಾರೀ ಮಳೆಯಿಂದಾಗಿ ರಾಜ್ಯದ ಹಲವು ಭಾಗಗಳು ತೀವ್ರ ಹಾನಿಗೊಳಗಾಗಿವೆ. ಅದರಲ್ಲಿಯೂ ಎರಡನೇ ಬಾರಿ ಸುರಿದ ಭಾರೀ ಮಳೆಗೆ ರಾಜ್ಯದ ಜನರು ಅಕ್ಷರಶಃ ತತ್ತರಿಸಿ ಹೋಗಿದ್ದಾರೆ. ಸದ್ಯ ಜನರಿಗೆ ಸಹಾಯ ಮಾಡಲು ಪ್ರಭಾಸ್ ಅವರು ಮುಖ್ಯಮಂತ್ರಿ ಪರಿಹಾರ ನಿಧಿಗೆ(ಸಿಎಂಆರ್‍ಎಫ್) 1 ಕೋಟಿ ರೂ. ದೇಣಿಗೆ ನೀಡಿದ್ದಾರೆ. ಇದನ್ನೂ ಓದಿ: ಆಂಧ್ರಪ್ರದೇಶ ಪ್ರವಾಹ ಸಂತ್ರಸ್ತರಿಗೆ ಮಿಡಿದ ಟಾಲಿವುಡ್ ಸ್ಟಾರ್ಸ್

Advertisements

ಇತ್ತೀಚೆಗಷ್ಟೇ ಜನರ ಕಷ್ಟಕ್ಕೆ ಮಿಡಿದ ಟಾಲಿವುಡ್ ಮೆಗಾ ಸ್ಟಾರ್ ನಟ ಚಿರಂಜೀವಿ, ಜೂನಿಯರ್ ಎನ್‍ಟಿಆರ್ ಮತ್ತು ಸೂಪರ್ ಸ್ಟಾರ್ ಮಹೇಶ್ ಬಾಬು, ರಾಮ್ ಚರಣ್‍ತೇಜ ಅವರು ಮಳೆ ಮತ್ತು ಪ್ರವಾಹದಿಂದ ಹಾನಿಗೊಳಗಾದವರಿಗೆ ಸಹಾಯ ಮಾಡಲು ಆಂಧ್ರಪ್ರದೇಶ ಸಿಎಂ ಪರಿಹಾರ ನಿಧಿಗೆ ತಲಾ 25 ಲಕ್ಷ ರೂ. ದೇಣಿಗೆ ನೀಡಿದ್ದರು. ಇದೀಗ ಪ್ರಭಾಸ್ ನೆರವಿಗೆ ಮುಂದಾಗಿದ್ದಾರೆ. ಇದನ್ನೂ ಓದಿ: ಆಂಧ್ರಪ್ರದೇಶ ಪ್ರವಾಹ – ತಲಾ 25 ಲಕ್ಷ ದೇಣಿಗೆ ನೀಡಿದ ಚಿರಂಜೀವಿ, ರಾಮ್‍ಚರಣ್

Advertisements

ಪ್ರಸ್ತುತ ಪ್ರಭಾಸ್ ಅಭಿನಯದ ಬಹುನಿರೀಕ್ಷಿತ ಬಿಗ್ ಬಜೆಟ್ ಪ್ಯಾನ್ ಇಂಡಿಯನ್ ಸಿನಿಮಾ ರಾಧೆ ಶ್ಯಾಮ್‍ದಲ್ಲಿ ಕೆಲಸ ಮಾಡುತ್ತಿದ್ದಾರೆ. ಈ ಚಿತ್ರಕ್ಕೆ ರಾಧಾ ಕೃಷ್ಣ ಕುಮಾರ್ ಅವರು ಆ್ಯಕ್ಷನ್ ಕಟ್ ಹೇಳಿದ್ದು, ಪ್ರಭಾಸ್‍ಗೆ ಜೋಡಿಯಾಗಿ ಪೂಜಾ ಹೆಗ್ಡೆ ನಟಿಸಿದ್ದಾರೆ. ಇನ್ನೂ ಈ ಸಿನಿಮಾ ರಾಧೆ ಶ್ಯಾಮ್ 2022ರ ಜನವರಿ 14ರಂದು ತೆರೆ ಕಾಣಲಿದೆ.

Advertisements
Exit mobile version