ಹೈದರಾಬಾದ್: ರಂಜಾನ್ ತಿಂಗಳಲ್ಲಿ ಸರ್ಕಾರಿ ನೌಕರರು ಸೇರಿದಂತೆ ಶಿಕ್ಷಕರು ಒಂದು ಗಂಟೆ ಮುಂಚಿತವಾಗಿ ಕಚೇರಿಯಿಂದ ತೆರಳಲು ಆಂಧ್ರ ಪ್ರದೇಶ ಸರ್ಕಾರ ಅವಕಾಶ ಕಲ್ಪಿಸಿಕೊಟ್ಟಿದೆ.
Advertisement
ರಂಜಾನ್ ತಿಂಗಳಲ್ಲಿ ಮುಸ್ಲಿಮರು ಉಪವಾಸ ಮಾಡುವ ಸಲುವಾಗಿ ಅನುಕೂಲ ಆಗುವ ರೀತಿಯಲ್ಲಿ ಸರ್ಕಾರಿ ನೌಕರರು, ಶಿಕ್ಷಕರು, ಶಾಲಾ-ಕಾಲೇಜ್‍ನಲ್ಲಿರುವ ಮುಸ್ಲಿಂ ವಿದ್ಯಾರ್ಥಿಗಳಿಗೆ ಸಂಜೆ ಒಂದು ಗಂಟೆ ಮುಂಚಿತವಾಗಿ ಮನೆಗೆ ತೆರಳಲು ಅವಕಾಶ ನೀಡಿ ಸರ್ಕಾರದಿಂದ ಆದೇಶ ಹೊರಡಿಸಲಾಗಿದೆ. ಮುಸ್ಲಿಮರಿಗೆ ಏಪ್ರಿಲ್ 3 ರಿಂದ ಮೇ 4ರ ವರೆಗೆ ಅನುಕೂಲ ಆಗುವಂತೆ ಒಂದು ಗಂಟೆ ಮುಂಚಿತವಾಗಿ ಮನೆಗೆ ತೆರಳಲು ಆದೇಶಿಸಲಾಗಿದೆ. ಇದನ್ನೂ ಓದಿ: ಆಂಧ್ರಪ್ರದೇಶದ ಎಲ್ಲಾ ಸಚಿವರು ರಾಜೀನಾಮೆ
Advertisement
Advertisement
ಮುಸ್ಲಿಮರ ಪವಿತ್ರ ಹಬ್ಬ ರಂಜಾನ್ ತಿಂಗಳಲ್ಲಿ ಉಪವಾಸ ಮಾಡುತ್ತಾರೆ. ಸೂರ್ಯ ಮುಳುಗುವ ಮುಂಚೆ ಮತ್ತು ಸೂರ್ಯ ಉದಯಿಸುವ ಮುನ್ನ ಆಹಾರವನ್ನು ಸೇವಿಸುವ ಪದ್ಧತಿ ಇರುವುದರಿಂದ ಅವರ ಅನುಕೂಲಕ್ಕಾಗಿ ಸರ್ಕಾರ ಈ ನಿರ್ಧಾರ ಕೈಗೊಂಡಿದೆ ಎಂದು ಆದೇಶದಲ್ಲಿ ಸ್ಪಷ್ಟಪಡಿಸಲಾಗಿದೆ. ಇದನ್ನೂ ಓದಿ: ಯೋಗಿಗೆ ಬೆದರಿಕೆ ಹಾಕಿದ್ದ ಎಸ್‍ಪಿ ಶಾಸಕನ ಪೆಟ್ರೋಲ್ ಬಂಕ್ ಧ್ವಂಸ
Advertisement