ಅಮರಾವತಿ: ವ್ಯಕ್ತಿಯೊಬ್ಬ ತನ್ನ ತಾಯಿಯ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಿರುವ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದ್ದು, ಈ ಘಟನೆ ಸದ್ಯ ಭಾರೀ ವೈರಲ್ ಆಗುತ್ತಿದೆ.
ನಾಗಮಣಿ ಹಲ್ಲೆಗೊಳಗಾದ ಮಹಿಳೆ ಹಾಗೂ ಶೇಷು ಆರೋಪಿ. ಆಂಧ್ರಪ್ರದೇಶದ ಗುಂಟುರು ಜಿಲ್ಲೆಯ ತಾಡಪಲ್ಲಿಯ ಬ್ರಹ್ಮಾನಂದಪುರಂನಲ್ಲಿ ಈ ಘಟನೆ ನಡೆದಿದೆ. ವರ್ಷಗಳ ಹಿಂದೆ ಅಂದಿನ ಆಂಧ್ರ ಸರ್ಕಾರ ನಾಗಮಣಿ ಅವರ ಪತಿ ವೆಂಕಟೇಶ್ವರರಾವ್ ಅವರಿಗೆ ಭೂಮಿ ಮಂಜೂರು ಮಾಡಿತ್ತು. ಕಷ್ಟಪಟ್ಟು ಅವರು ಮನೆ ಕಟ್ಟಿದ್ದರು. ಆದರೆ ನಾಗಮಣಿ ಅವರ ಪತಿ ಮೂರು ವರ್ಷಗಳ ಹಿಂದೆ ನಿಧನರಾದರು. ಈ ದಂಪತಿಗೆ ಮಗ ಹಾಗೂ ಮಗಳು ಇದ್ದಾರೆ.
Advertisement
Advertisement
ತಂದೆಯ ನಿಧನದ ನಂತರ ಬೇರೆ ಊರಿನಲ್ಲಿ ಕೆಲಸ ಮಾಡುತ್ತಿದ್ದ ಶೇಷು ಪತ್ನಿಯೊಂದಿಗೆ ತನ್ನ ಗ್ರಾಮಕ್ಕೆ ಬಂದು ವಾಸಿಸತೊಡಗಿನು. ಈ ಖುಷಿ ನಾಗಮಣಿಗೆ ಹೆಚ್ಚು ದಿನಗಳ ಕಾಲ ಉಳಿಯಲಿಲ್ಲ. ಅವಳಿಗೆ ಶೇಷು ದಿನನಿತ್ಯ ಆಸ್ತಿಗಾಗಿ ಕಿರುಕುಳ ನೀಡುತ್ತಿದ್ದ. ಜೊತೆ ತಾಯಿಯ ಮೇಲೆ ಅಮಾನುಷವಾಗಿ ವರ್ತಿಸುತ್ತಿದ್ದ. ಇದನ್ನೂ ಓದಿ: ಭದ್ರಾವತಿಯಲ್ಲಿ ಕಮಲ ಅರಳಿಸೋಕೆ ಎಲ್ಲರೂ ದುಡಿಯೋಣ : ನಾರಾಯಣಗೌಡ
Advertisement
Advertisement
ಇದನ್ನು ಗಮನಿಸಿದ ಸ್ಥಳೀಯರು ಈ ಹಿಂದೆ ಶೇಷುಗೆ ಛೀಮಾರಿ ಹಾಕಿದರೂ ವರ್ತನೆ ಬದಲಿಸಿಕೊಳ್ಳಲಿಲ್ಲ. ಇರಿಂದಾಗಿ ಸ್ಥಳೀಯರು ಪೊಲೀಸರಿಗೆ ಆತನ ವಿರುದ್ಧ ತಾಯಿಗೆ ಹಲ್ಲೆ ಮಾಡುತ್ತಿರುವ ಮಾಹಿತಿ ನೀಡಿದ್ದಾರೆ. ಇದರ ಆಧಾರದ ಮೇಲೆ ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಪೊಲೀಸರು ಶೇಷುವನ್ನು ವಶಕ್ಕೆ ಪಡೆದು, ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ದಾಂಪತ್ಯ ಜೀವನಕ್ಕೆ ಕಾಲಿಟ್ಟ ಬಾಲಿವುಡ್ ಸ್ಟಾರ್ ಕಪಲ್