ನವದೆಹಲಿ: ಭದ್ರಾ ಮೇಲ್ದಂಡೆ ಯೋಜನೆಗೆ (Bhadra Upper Project) ಆಂಧ್ರಪ್ರದೇಶ ಆಕ್ಷೇಪ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ (Supreme Court), ವಿಚಾರಣೆಯನ್ನು 8 ವಾರಗಳಿಗೆ ಮುಂದೂಡಿದೆ.
ನ್ಯಾ. ವಿಕ್ರಮನಾಥ್ ನೇತೃತ್ವದ ತ್ರಿಸದಸ್ಯ ಪೀಠದಲ್ಲಿ ಅರ್ಜಿ ವಿಚಾರಣೆ ನಡೆಯಿತು. ಯೋಜನೆಯಿಂದ ಆಂಧ್ರಪ್ರದೇಶದ ರಾಯಲಸೀಮಾ ಭಾಗಕ್ಕೆ ನೀರಿನ ಕೊರತೆಯಾಗಲಿದೆ. ಯೋಜನೆಯಲ್ಲಿ ಹಲವು ನಿಯಮಗಳ ಉಲ್ಲಂಘನೆಯಾಗಿದೆ ಎಂದು ಆಂಧ್ರಪ್ರದೇಶ ಆಕ್ಷೇಪ ವ್ಯಕ್ತಪಡಿಸಿದೆ. ಇದನ್ನೂ ಓದಿ: ಕರ್ನಾಟಕಕ್ಕೆ ಮತ್ತೆ ಕಾವೇರಿ ಆಘಾತ; ತಮಿಳುನಾಡಿಗೆ ನಿತ್ಯ 4 ಸಾವಿರ ಕ್ಯೂಸೆಕ್ ನೀರು ಹರಿಸಲು ಸೂಚನೆ
ಆಂಧ್ರದ ಅರ್ಜಿಗೆ ಕರ್ನಾಟಕ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. 21,500 ಕೋಟಿ ಹಣವನ್ನು ಕರ್ನಾಟಕ ಯೋಜನೆಗೆ ವ್ಯಯ ಮಾಡಿದೆ. 65% ಕಾಮಗಾರಿ ಮುಕ್ತಾಯವಾಗಿದೆ. ಈ ಹಂತದಲ್ಲಿ ಯೋಜನೆಗೆ ತಡೆ ಕೋರುವುದು ಸೂಕ್ತವಲ್ಲ ಎಂದು ತಿಳಿಸಿದೆ.
ವಿಚಾರಣೆ ಬಳಿಕ ಹೆಚ್ಚುವರಿ ಮಾಹಿತಿ ಸಲ್ಲಿಕೆಗೆ ಸುಪ್ರೀಂ ಕೋರ್ಟ್ ಕಾಲಾವಕಾಶ ನೀಡಿದೆ. ನಿಯಮಗಳ ಉಲ್ಲಂಘನೆ ಬಗ್ಗೆ ಮಾಹಿತಿ ನೀಡಲು ಕೋರ್ಟ್ ಸೂಚಿಸಿದೆ. ಎಂಟು ವಾರಗಳಿಗೆ ಪ್ರಕರಣ ಮುಂದೂಡಿಕೆ ಮಾಡಿದೆ. ಇದನ್ನೂ ಓದಿ: ಕರ್ನಾಟಕಕ್ಕೆ ಮತ್ತೆ ಕಾವೇರಿ ಶಾಕ್ – CWMA ಆದೇಶ ಪಾಲಿಸಲು ಸುಪ್ರೀಂ ಸೂಚನೆ; ಅ.12ಕ್ಕೆ ವಿಚಾರಣೆ ಮುಂದೂಡಿಕೆ

