ಹೈದರಾಬಾದ್: ಆಂಧ್ರ ಪ್ರದೇಶದ ವಿರೋಧ ಪಕ್ಷದ ನಾಯಕ ಎನ್.ಚಂದ್ರಬಾಬು ನಾಯ್ಡು ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಈ ಕುರಿತಂತೆ ಚಂದ್ರಬಾಬು ನಾಯ್ಡು ಅವರು ಟ್ವೀಟ್ ಮಾಡುವ ಮೂಲಕ ಮಾಹಿತಿ ನೀಡಿದ್ದಾರೆ.
Advertisement
ತೆಲುಗು ದೇಶಂ ಪಕ್ಷ(ಟಿಡಿಪಿ) ಮುಖ್ಯಶ್ಥರಾಗಿರುವ ಚಂದ್ರಬಾಬು ನಾಯ್ಡು ಅವರು, ನಾನು ಕೋವಿಡ್-19 ಟೆಸ್ಟ್ ಮಾಡಿಸಿಕೊಂಡಿದ್ದು, ಈ ವೇಳೆ ನನಗೆ ಕೊರೊನಾ ಪಾಸಿಟಿವ್ ಬಂದಿದೆ. ನನಗೆ ಸೌಮ್ಯ ರೋಗಲಕ್ಷಣಗಳಿದ್ದು, ಇದೀಗ ಮನೆಯಲ್ಲಿಯೇ ಕ್ವಾರಂಟೈನ್‍ನಲ್ಲಿದ್ದೇನೆ ಮತ್ತು ಎಲ್ಲಾ ರೀತಿಯ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿದ್ದೇನೆ. ನನ್ನ ಜೊತೆ ಸಂಪರ್ಕಕ್ಕೆ ಬಂದಿದ್ದ ಎಲ್ಲರೂ ಆದಷ್ಟು ಬೇಗ ಕೊರೊನಾ ಪರೀಕ್ಷೆಗೆ ಒಳಗಾಗುವಂತೆ ವಿನಂತಿಸುತ್ತೇನೆ. ದಯವಿಟ್ಟು ಎಲ್ಲರೂ ಸುರಕ್ಷಿತವಾಗಿರಿ ಮತ್ತು ನಿಮ್ಮ ಬಗ್ಗೆ ಕಾಳಜಿ ವಹಿಸಿ ಎಂದು ಟ್ವೀಟ್ ಮಾಡಿದ್ದಾರೆ. ಇದನ್ನೂ ಓದಿ: ಆಮ್ ಆದ್ಮಿ ಪಕ್ಷಕ್ಕೆ ರಾಜೀನಾಮೆ ಕೊಟ್ಟ ಮಹೇಶ್ ಸವಾನಿ
Advertisement
I’ve tested positive for COVID with mild symptoms. I have quarantined myself at home and taking all the necessary precautions.
I would request those who came in contact with me to get themselves tested at the earliest. Please be safe and take care.
— N Chandrababu Naidu (@ncbn) January 18, 2022
Advertisement
ಆಂಧ್ರಪ್ರದೇಶದಲ್ಲಿ ಕೊರೊನಾ ಸಕ್ರಿಯ ಪ್ರಕರಣಗಳು 30,000 ಗಡಿ ದಾಟಿ 30,182 ಕ್ಕೆ ತಲುಪಿದೆ. ಸೋಮವಾರ ರಾಜ್ಯದಲ್ಲಿ 4,108 ಕೊರೊನಾ ಹೊಸ ಪ್ರಕರಣಗಳು ವರದಿಯಾಗಿದ್ದು, ವಿಶಾಖಪಟ್ಟಣಂ ಜಿಲ್ಲೆಯಲ್ಲಿ 1,018 ಮತ್ತು ಚಿತ್ತೂರಿನಲ್ಲಿ 1,004 ಹೊಸ ಪ್ರಕರಣಗಳು ದಾಖಲಾಗಿದೆ. ಇದನ್ನೂ ಓದಿ: ರಜನಿಕಾಂತ್ ಪುತ್ರಿಗೆ ಡಿವೋರ್ಸ್ ನೀಡಿದ ಧನುಷ್
Advertisement