ಅಮರಾವತಿ: ಸಾರ್ವಜನಿಕ ಸುರಕ್ಷತೆಯ ಹಿನ್ನೆಲೆಯಲ್ಲಿ ಆಂಧ್ರಪ್ರದೇಶ ಸರ್ಕಾರವು ಹೆದ್ದಾರಿ ಸೇರಿದಂತೆ ರಸ್ತೆಗಳಲ್ಲಿ ಸಾರ್ವಜನಿಕ ಸಭೆಗಳನ್ನು (Public Meetings) ಹಾಗೂ ರ‍್ಯಾಲಿಗಳನ್ನು (Rallies) ನಡೆಸುವುದನ್ನು ನಿಷೇಧಿಸಿದೆ.
ಕಳೆದ ವಾರ ಕಂದುಕೂರಿನಲ್ಲಿ ಆಂಧ್ರ ಪ್ರದೇಶದ ಮಾಜಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು ನಡೆಸಿದ್ದ ರ‍್ಯಾಲಿ ವೇಳೆ ನೂಕುನುಗ್ಗಲು ಉಂಟಾಗಿತ್ತು. ಈ ವೇಳೆ ಕಾಲ್ತುಳಿತಕ್ಕೆ 11 ಮಂದಿ ಸಾವನ್ನಪ್ಪಿದ್ದರು. ಈ ಬೆನ್ನಲ್ಲೇ ಆಂಧ್ರ ಸರ್ಕಾರ ನಿಷೇಧಾಜ್ಞೆಯನ್ನು ಜಾರಿಗೆ ತಂದಿದೆ.
Advertisement
Advertisement
ಈ ಬಗ್ಗೆ ರಾಜ್ಯ ಗೃಹ ಸಚಿವಾಲಯದ ಪ್ರಧಾನ ಕಾರ್ಯದರ್ಶಿ ಹರೀಶ್ ಕುಮಾರ್ ಗುಪ್ತಾ ಮಾತನಾಡಿ, ಸಾರ್ವಜನಿಕ ಸಂಚಾರ, ತುರ್ತು ಸೇವೆ, ಅಗತ್ಯ ವಸ್ತುಗಳ ಚಲನೆಗೆ ಅಡ್ಡಿಯಾಗದ ರೀತಿಯಲ್ಲಿ ಸಾರ್ವಜನಿಕ ಸಭೆಗಳನ್ನು ನಡೆಸಲು ಆಯಾ ಜಿಲ್ಲಾಡಳಿತ ಹಾಗೂ ಪೊಲೀಸರು ಅನುವು ಮಾಡಿಕೊಡಬೇಕು ಎಂದು ತಿಳಿಸಿದರು.
Advertisement
ಅಧಿಕಾರಿಗಳು ರಸ್ತೆಗಳಲ್ಲಿ ಸಭೆಗಳಿಗೆ ಅನುಮತಿ ನೀಡುವುದನ್ನು ತಪ್ಪಿಸಬೇಕು. ಅಪರೂಪದ ಸಂದರ್ಭದಲ್ಲಿ ಮಾತ್ರ ಸಾರ್ವಜನಿಕ ಸಭೆಗಳಿಗೆ ಅನುಮತಿಯನ್ನು ನೀಡಬೇಕು ಎಂದು ಸೂಚಿಸಿದರು. ಇದನ್ನೂ ಓದಿ: ಆಂಧ್ರದ ಮಾಜಿ ಸಿಎಂ ರ‍್ಯಾಲಿ ವೇಳೆ ಕಾಲ್ತುಳಿತಕ್ಕೆ ಮತ್ತೆ 3 ಬಲಿ
Advertisement
ಆಂಧ್ರಪ್ರದೇಶದ (Andhra Pradesh) ಮಾಜಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು (Chandrababu Naidu) ಅವರು ನಡೆಸುತ್ತಿರುವ ರ‍್ಯಾಲಿ ವೇಳೆ ನೂಕುನುಗ್ಗಲಿನಿಂದ ಕಾಲ್ತುಳಿತಕ್ಕೆ (Stampede) ಇತ್ತೀಚೆಗಷ್ಟೇ 8 ಮಂದಿ ದಾರುಣ ಸಾವಿಗೀಡಾದ ಘಟನೆ ಮಾಸುವ ಮುನ್ನವೇ ಮತ್ತೊಂದು ದುರಂತ ಇತ್ತೀಚೆಗಷ್ಟೇ ಸಂಭವಿಸಿತ್ತು. ನಾಯ್ಡು ಅವರ ರ‍್ಯಾಲಿ ವೇಳೆ ಗುಂಟೂರು (Guntur) ಜಿಲ್ಲೆಯಲ್ಲಿ ಕಾಲ್ತುಳಿತಕ್ಕೆ ಮತ್ತೆ 3 ಮಂದಿ ಬಲಿಯಾಗಿದ್ದಾರೆ. ಇದನ್ನೂ ಓದಿ: ಲಾರಿ ಟೈರ್ ಸ್ಫೋಟಿಸಿ ಚಾಲಕ ಸ್ಥಳದಲ್ಲೇ ಸಾವು