ಅಮರಾವತಿ: ಹಸುವಿನ ಜೊತೆ ಅಸಹಜ ಲೈಂಗಿಕ ಕ್ರಿಯೆ ನಡೆಸಿದ ಆರೋಪದ ಮೇಲೆ 62 ವರ್ಷದ ನಿವೃತ್ತ ಸರ್ಕಾರಿ ಅಧಿಕಾರಿಯನ್ನು ಪೊಲೀಸರು ಬಂಧಿಸಿದ್ದಾರೆ.
ವಿಜಯನಗರ ಜಿಲ್ಲೆಯ ರಾಜಂ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಕಂಚರಂ ಗ್ರಾಮದಲ್ಲಿ ಕೆಲವು ದಿನಗಳ ಹಿಂದೆ ಈ ಘಟನೆ ನಡೆದಿದೆ. ಕೃತ್ಯದ ವೀಡಿಯೋ ವೈರಲ್ ಆದ ನಂತರ ಪ್ರಕರಣ ಬೆಳಕಿಗೆ ಬಂದಿದೆ. ಇದನ್ನೂ ಓದಿ: ಕುಡಿದ ಮತ್ತಲ್ಲಿ ತಾಯಿಯನ್ನೇ ಥಳಿಸಿ ಕೊಂದ ಪಾಪಿ ಪುತ್ರ
ಭೂಮಾಪನ ಇಲಾಖೆ ಸಹಾಯಕ ನಿರ್ದೇಶಕರಾಗಿ ನಿವೃತ್ತರಾಗಿರುವ ಪಿ.ರಾಮಕೃಷ್ಣ ಅವರನ್ನು ಬಂಧಿಸಲಾಗಿದೆ. ಕಳೆದ ಕೆಲವು ವರ್ಷಗಳಿಂದ ಹಸುಗಳು ಮತ್ತು ಸಾಕುನಾಯಿಗಳೊಂದಿಗೆ ಇಂತಹ ಕೃತ್ಯಗಳನ್ನು ಮಾಡುತ್ತಿದ್ದಾನೆ ಎಂಬುದು ತನಿಖೆಯಿಂದ ತಿಳಿದುಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಆತನ ಅಸ್ವಾಭಾವಿಕ ಮಾರ್ಗಗಳ ಬಗ್ಗೆ ಆತನ ಸಂಬಂಧಿಕರು ಮತ್ತು ಗ್ರಾಮಸ್ಥರು ತಿಳಿದಿದ್ದರೂ, ಅವರು ಅದನ್ನು ಯಾರಿಗೂ ಬಹಿರಂಗಪಡಿಸಲಿಲ್ಲ. ಈ ವಿಚಾರ ತಿಳಿದ ನಂತರ ಅವನಿಂದ ದೂರವಿದ್ದರು. ಅವರು ಇಂತಹ ಕೃತ್ಯಗಳಲ್ಲಿ ತೊಡಗಿರುವುದಕ್ಕೆ ನಿಖರವಾದ ಕಾರಣ ನಮಗೆ ಇನ್ನೂ ತಿಳಿದಿಲ್ಲ ಎಂದು ಸ್ಥಳೀಯ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಡಿ.ನವೀನ್ ಕುಮಾರ್ ಹೇಳಿದ್ದಾರೆ. ಇದನ್ನೂ ಓದಿ: ಜಾರ್ಖಂಡ್ ಸಿಎಂ ಆಪ್ತನ ಮನೆ ಮೇಲೆ ಇಡಿ ದಾಳಿ – 2 ಎಕೆ-47 ರೈಫಲ್ಗಳು ವಶ
ಹಸುವಿನ ಜೊತೆ ಅಸ್ವಾಭಾವಿಕ ಸಂಭೋಗ ನಡೆಸುತ್ತಿರುವ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ವ್ಯಕ್ತಿಯೊಬ್ಬರು ನೀಡಿದ ದೂರಿನ ಮೇರೆಗೆ ರಾಮಕೃಷ್ಣರನ್ನು ಬಂಧಿಸಲಾಗಿದೆ. ದೂರಿನ ಆಧಾರದ ಮೇಲೆ ನಾವು ಐಪಿಸಿ ಸೆಕ್ಷನ್ 377 ಮತ್ತು ಪ್ರಾಣಿಗಳ ಮೇಲಿನ ಕ್ರೌರ್ಯಕ್ಕೆ ಸಂಬಂಧಿಸಿದ ಸೆಕ್ಷನ್ಗಳ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಿದ್ದೇವೆ ಎಂದು ಅವರು ಮಾಹಿತಿ ನೀಡಿದ್ದಾರೆ.