ಆಂಧ್ರ, ತೆಲಂಗಾಣದಲ್ಲಿ ಭಾರಿ ಮಳೆ ಪ್ರವಾಹ; 35 ಮಂದಿ ಸಾವು

Public TV
1 Min Read
andhra pradesh and telangana rain

ಹೈದರಬಾದ್: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆ ಆಂಧ್ರಪ್ರದೇಶ ಮತ್ತು ತೆಲಂಗಾಣದಲ್ಲಿ (Andhra Pradesh, Telangana Rain) ಭಾರಿ ಮಳೆಯಾಗುತ್ತಿದ್ದು, 35 ಮಂದಿ ಸಾವನ್ನಪ್ಪಿದ್ದಾರೆ. ಆಂಧ್ರಪ್ರದೇಶದಲ್ಲಿ ಮಳೆ ಸಂಬಂಧಿತ ಘಟನೆಗಳಿಂದ 19 ಜನರು ಸಾವನ್ನಪ್ಪಿದ್ದರೆ, ತೆಲಂಗಾಣದಲ್ಲಿ ಮಳೆ ಮತ್ತು ಪ್ರವಾಹದ ಪ್ರಕೋಪಕ್ಕೆ 16 ಜನರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಎರಡೂ ರಾಜ್ಯಗಳಲ್ಲಿ 47,000 ಕ್ಕೂ ಹೆಚ್ಚು ಜನರನ್ನು ಪರಿಹಾರ ಶಿಬಿರಗಳಿಗೆ ಸ್ಥಳಾಂತರಿಸಲಾಗಿದೆ. ಎನ್‌ಡಿಆರ್‌ಎಫ್ ಮತ್ತು ಎಸ್‌ಡಿಆರ್‌ಎಫ್ ಸಿಬ್ಬಂದಿ ಸೇರಿದಂತೆ ಒಟ್ಟು 47 ರಕ್ಷಣಾ ತಂಡಗಳನ್ನು ರಾಜ್ಯದಲ್ಲಿ ಪರಿಹಾರ ಕಾರ್ಯಾಚರಣೆಗೆ ನಿಯೋಜಿಸಲಾಗಿದೆ. 3.5 ಲಕ್ಷಕ್ಕೂ ಅಧಿಕ ಜನರಿಗೆ ಆಹಾರ ಪೊಟ್ಟಣಗಳು, ಕುಡಿಯುವ ನೀರು ವಿತರಿಸಲಾಗಿದೆ. ಇದನ್ನೂ ಓದಿ: ಭಾರೀ ಮಳೆಗೆ ಆಂಧ್ರಪ್ರದೇಶ ತತ್ತರ – ರೈಲು ಸಂಚಾರ ಅಸ್ತವ್ಯಸ್ತ; 30ಕ್ಕೂ ಅಧಿಕ ಮಂದಿ ಸಾವು!

Andhra Telangana Rain 3

ಅದಿಲಾಬಾದ್, ಮಂಚೇರಿಯಲ್, ಖಮ್ಮಂ, ಸೂರ್ಯಪೇಟ್, ಕೊಮಾರಂ ಭೀಮ್ ಆಸಿಫಾಬಾದ್, ಪೆದ್ದಪಲ್ಲಿ, ಜಯಶಂಕರ್ ಭೂಪಾಲಪಲ್ಲಿ, ಮುಲುಗು, ಭದ್ರಾದ್ರಿ ಕೊತಗುಡೆಂ, ಮತ್ತು ಮಹಬೂಬಾಬಾದ್ ಸೇರಿದಂತೆ ತೆಲಂಗಾಣದ 10 ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಮಳೆಯಾಗುವ ಕುರಿತು ಹವಮಾನ ಇಲಾಖೆ ಹಳದಿ ಎಚ್ಚರಿಕೆ ನೀಡಿದೆ.

ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು ರಾಜ್ಯದಲ್ಲಿ ಸಂಭವಿಸಿದ ಪ್ರವಾಹವನ್ನು ಅದರಲ್ಲೂ ವಿಶೇಷವಾಗಿ ವಿಜಯವಾಡದಲ್ಲಿ ಅವಘಡ ರಾಜ್ಯ ಕಂಡ “ದೊಡ್ಡ ದುರಂತ” ಎಂದು ಕರೆದಿದ್ದಾರೆ. ಸದ್ಯ ಎನ್‌ಟಿಆರ್ ಜಿಲ್ಲೆಯ ಕಲೆಕ್ಟರೇಟ್‌ನಲ್ಲಿ ತಂಗಿರುವ ಅವರು ಆಂಧ್ರಪ್ರದೇಶದ ಪ್ರವಾಹವನ್ನು ನೈಸರ್ಗಿಕ ವಿಕೋಪ ಎಂದು ಘೋಷಿಸಲು ಕೇಂದ್ರಕ್ಕೆ ಮನವಿ ಮಾಡುವುದಾಗಿ ತಿಳಿಸಿದ್ದಾರೆ. ಇದನ್ನೂ ಓದಿ: ಬಂಗಾಳ ವಿಧಾನಸಭೆಯಲ್ಲಿ ಅತ್ಯಾಚಾರ ವಿರೋಧಿ ಮಸೂದೆ ಮಂಡನೆ

ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ಅವರು ಪ್ರವಾಹವನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸಲು ಮನವಿ ಮಾಡಿದ್ದಾರೆ. ರಾಜ್ಯದಲ್ಲಿ ಪ್ರವಾಹದಿಂದಾಗಿ ಇದುವರೆಗೆ 5,000 ಕೋಟಿ ರೂಪಾಯಿಗೂ ಹೆಚ್ಚು ಹಾನಿಯಾಗಿದೆ. ಕೇಂದ್ರದಿಂದ 2,000 ಕೋಟಿ ರೂಪಾಯಿಗಳ ತಕ್ಷಣದ ಪರಿಹಾರ ನೆರವು ಕೋರಿದ್ದಾರೆ. ಇದೇ ವೇಳೆ ಮೃತರ ಕುಟುಂಬಕ್ಕೆ 5 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ.

Share This Article