ಹೈದರಾಬಾದ್: ಕೇಂದ್ರ ಸರ್ಕಾರದ ವಿರುದ್ಧ ಆಂಧ್ರ ಪ್ರದೇಶ ಸಿಎಂ ಚಂದ್ರಬಾಬು ನಾಯ್ಡು ಅವರು ಫೆ.11 ರಂದು ನಡೆಸಲು ಉದ್ದೇಶಿಸಿರುವ ಪ್ರತಿಭಟನೆಗೆ ಜನರನ್ನು ಕೊಂಡ್ಯೊಯಲು ಬರೋಬ್ಬರಿ 1.23 ಕೋಟಿ ರೂ. ಹಣವನ್ನು ಬಿಡುಗಡೆ ಮಾಡಿದೆ.
ಆಂಧ್ರ ಪ್ರದೇಶ ಆಡಳಿತಾತ್ಮಕ ಇಲಾಖೆ ರಾಜ್ಯದಿಂದ ರೈಲುಗಳಲ್ಲಿ ಜನರನ್ನು ಕರೆದುಕೊಂಡು ಹೋಗಲು ಹಣವನ್ನು ಬಿಡುಗಡೆ ಮಾಡಿದೆ. ಅನಂತಪುರಂ, ಶ್ರೀಕಾಕುಳಂ ಸೇರಿದಂತೆ ವಿವಿಧ ಜಿಲ್ಲೆಗಳಿಂದ ಪಕ್ಷದ ಕಾರ್ಯಕರ್ತರು, ವಿವಿಧ ಸಂಘಟನೆಗಳ ಸ್ವಯಂ ಸೇವಕರನ್ನು ದೆಹಲಿಗೆ ಕರೆತರಲಿದ್ದು, ಫೆ.11 ರಂದು ‘ದೀಕ್ಷಾ’ ಹೆಸರಿನಲ್ಲಿ ಬೃಹತ್ ಪ್ರತಿಭಟನೆಯನ್ನು ಚಂದ್ರಬಾಬು ನಾಯ್ಡು ಅವರು ಕೈಗೊಳ್ಳಲಿದ್ದಾರೆ.
ಆಂಧ್ರ ಪ್ರದೇಶದಿಂದ ಹೊರಡುವ ಎರಡು ರೈಲುಗಳು ಭಾನುವಾರ 10 ಗಂಟೆಗೆ ದೆಹಲಿಯನ್ನು ತಲುಪಲಿದ್ದು, ಆಂಧ್ರ ಪ್ರದೇಶ ರಾಜ್ಯಕ್ಕೆ ವಿಶೇಷ ಸ್ಥಾನಮಾನ ಆಗ್ರಹಿಸಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. 2014ರಲ್ಲಿ ಆಂಧ್ರಪ್ರದೇಶ ವಿಭಜನೆ ಕಾಯ್ದೆ ಆನ್ವಯ ಕೇಂದ್ರ ಸರ್ಕಾರ ತಮಗೇ ನೀಡಿರುವ ಆಶ್ವಾಸನೆಗಳನ್ನು ಈಡೇರಿಸಬೇಕು ಎಂಬುವುದು ಚಂದ್ರಬಾಬು ನಾಯ್ಡು ಸರ್ಕಾರದ ಪ್ರಮುಖ ಬೇಡಿಕೆ ಆಗಿದೆ.
ಕೇವಲ ಚಂದ್ರಬಾಬು ನಾಯ್ಡು ಅವರ ತೆಲುಗು ದೇಶಂ ಪಕ್ಷ ಮಾತ್ರವಲ್ಲದೇ ವಿರೋಧಿ ಪಕ್ಷಗಳ ಸಹಕಾರವನ್ನು ಕೂಡ ಚಂದ್ರಬಾಬು ನಾಯ್ಡು ಅವರು ಕೋರಿದ್ದು, ಬಿಜೆಪಿ ಪಕ್ಷ ಹೊರತು ಪಡಿಸಿ ಉಳಿದೆಲ್ಲಾ ಪಕ್ಷಗಳು ಕೂಡ ಪ್ರತಿಭಟನೆಯಲ್ಲಿ ಭಾಗವಹಿಸುವ ನಿರೀಕ್ಷೆ ಇದೆ. ಅಂದಹಾಗೇ ಕಳೆದ ವರ್ಷವಷ್ಟೇ ಟಿಡಿಪಿ ಪಕ್ಷ ಎನ್‍ಡಿಎ ಒಕ್ಕೂಟದಿಂದ ಹೊರ ಬಂದಿತ್ತು.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ಮಾಡಿ: play.google.com/publictv