ಅಮರಾವತಿ: ನನ್ನ ಮೇಲೆ ಹಿರಿಯ ವಿದ್ಯಾರ್ಥಿಗಳು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ಆಂಧ್ರಪ್ರದೇಶದ 22 ವರ್ಷದ ಎಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬಳು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾಳೆ.
ತನ್ನ ಕಾಲೇಜಿನ ಹಿರಿಯ ವಿದ್ಯಾರ್ಥಿಗಳು ಕಳೆದ ವರ್ಷ ಹುಟ್ಟು ಹಬ್ಬದ ಪಾರ್ಟಿಗೆ ಕರೆದುಕೊಂಡು ಹೋಗಿ ತನ್ನ ಮೇಲೆ ಅತ್ಯಾಚಾರ ನಡೆಸಿದ್ದಾರೆ. ಅದನ್ನು ವಿಡಿಯೋ ಮಾಡಿ ಮತ್ತೆ ದೈಹಿಕ ಸಂಬಂಧ ಹೊಂದುವಂತೆ ಬ್ಲ್ಯಾಕ್ ಮೇಲ್ ಮಾಡುತ್ತಿದ್ದಾರೆ ಎಂದು ಯುವತಿ ದೂರಿನಲ್ಲಿ ಉಲ್ಲೇಖಿಸಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.
Advertisement
ಈ ಕುರಿತಂತೆ ಪೊಲೀಸರು ಆರೋಪಿಗಳ ವಿರುದ್ಧ ಗ್ಯಾಂಗ್ ರೇಪ್ ಪ್ರಕರಣವನ್ನು ದಾಖಲಿಸಿದ್ದಾರೆ. ಅಲ್ಲದೇ ವಿಡಿಯೋ ಮಾಡಿ ಬ್ಲ್ಯಾಕ್ ಮೇಲ್ ಮಾಡಿದಕ್ಕಾಗಿ ಐಟಿ ಕಾಯ್ದೆಗೆ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
Advertisement
ಈ ಕುರಿತು ಸಂತ್ರಸ್ತ ವಿದ್ಯಾರ್ಥಿನಿ ಕೃಷ್ಣಾ ಜಿಲ್ಲೆಯಲ್ಲಿರುವ ಅಗಿರಿಪಳ್ಳಿಯಲ್ಲಿನ ತನ್ನ ಕಾಲೇಜಿನ ಆಡಳಿತ ಮಂಡಳಿಗೆ ದೂರು ನೀಡಿದ್ದಳು. ಆದರೆ ಆಡಳಿತ ಮಂಡಳಿ ಈ ಕುರಿತಂತೆ ಯಾವುದೇ ಕ್ರಮ ಕೈಗೊಂಡಿರಲಿಲ್ಲ. ಬದಲಾಗಿ ಆ ಯುವಕರನ್ನು ಕರೆಸಿ ವಿಡಿಯೋ ಡಿಲೀಟ್ ಮಾಡಿ, ನನ್ನಲ್ಲಿ ಕ್ಷಮೆ ಕೇಳುವಂತೆ ಹೇಳಿದ್ದಾರೆಂದು ಯುವತಿ ಆರೋಪಿಸಿದ್ದಾಳೆ.
Advertisement
ಕಾಲೇಜಿನ ಆಡಳಿತ ಮಂಡಳಿ ಪ್ರತಿಕ್ರಿಯಿಸಿ, ವಿದ್ಯಾರ್ಥಿನಿಯ ಗೌರವ ಹಾಗೂ ವಿದ್ಯಾರ್ಥಿಗಳ ಭವಿಷ್ಯದ ದೃಷ್ಟಿಯಿಂದ ಈ ಕುರಿತು ಪೊಲೀಸರಿಗೆ ತಿಳಿಸಲಿಲ್ಲ ಎಂದು ಹೇಳಿದೆ. ಕಾಲೇಜಿನ ಮಾತುಕತೆ ನಂತರವೂ ವಂಶಿ ಹಾಗೂ ಶಿವಾ ರೆಡ್ಡಿ ಎಂಬವರು ತಮ್ಮ ಸ್ನೇಹಿತರೊಂದಿಗೆ ಈ ವಿಡಿಯೋ ಹಂಚಿಕೊಂಡಿದ್ದಾರೆ.
Advertisement
ಕಳೆದ ಎರಡು ತಿಂಗಳ ಹಿಂದೆ ವಿದ್ಯಾರ್ಥಿ ಪ್ರವೀಣ್ ಎಂಬಾತ ಕರೆ ಮಾಡಿ ನನ್ನ ಹತ್ತಿರ ವಿಡಿಯೋ ಇದೆ. ನನಗೆ 10 ಲಕ್ಷ ರೂ. ನೀಡಬೇಕು. ಅಲ್ಲದೇ ತನ್ನ ಜೊತೆಗೆ ದೈಹಿಕ ಸಂಬಂಧ ಹೊಂದುವಂತೆ ಬೆದರಿಕೆ ಹಾಕಿದ್ದಾನೆ ಎಂದು ವಿದ್ಯಾರ್ಥಿನಿ ಹೇಳಿದ್ದಾಳೆ. ನೊಂದ ವಿದ್ಯಾರ್ಥಿನಿ ಆತನ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾಳೆ.
ಕರೆ ಮಾಡಿ ಬೆದರಿಕೆ ಹಾಕಿದ್ದ ಪ್ರವೀಣ್ ನನ್ನು ಈಗಾಗಲೇ ಪೊಲೀಸರು ಬಂಧಿಸಿದ್ದಾರೆ. ಇನ್ನುಳಿದ ಆರೋಪಿಗಳನ್ನು ಕೂಡ ಬಂಧಿಸಲಾಗುವುದು ಎಂದು ತಿಳಿಸಿದ್ದಾರೆ.