ರಾಯಚೂರು: ಜಿಲ್ಲೆಯ ಹಲವೆಡೆ ರಾತ್ರಿ ಸುರಿದ ಜೋರು ಮಳೆಗೆ ಹಳ್ಳ,ಕೊಳ್ಳಗಳು ತುಂಬಿ ಹರಿಯುತ್ತಿವೆ. ಜೊತೆಗೆ ಲಿಂಗಸುಗೂರು (Lingasuguru) ತಾಲೂಕಿನ ಆನೆಹೊಸೂರು (Anehosur) ಸೇತುವೆ ಮುಳುಗಡೆಯಾಗಿದೆ.
ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿದ್ದು, ಆನೆಹೊಸೂರು ಹಾಗೂ ಜಾಗೀರನಂದಿಹಾಳ ಗ್ರಾಮಗಳ ಮಧ್ಯದ ಸೇತುವೆ ಮುಳುಗಡೆಯಾಗಿದೆ. ಪರಿಣಾಮ ಗ್ರಾಮಸ್ಥರು ಪರದಾಡುವಂತಾಗಿದೆ. ಶಾಲೆಗೆ ಹೋಗುವ ಮಕ್ಕಳನ್ನು ಪೋಷಕರು ಹೆಗಲ ಮೇಲೆ ಹೊತ್ತು ಹಳ್ಳ ದಾಟಿಸುತ್ತಿದ್ದಾರೆ. ಇನ್ನೂ ಮಧ್ಯಂತರ ಪರೀಕ್ಷೆಗಳು ನಡೆಯುತ್ತಿದ್ದು, ಶಾಲಾ-ಕಾಲೇಜುಗಳಿಗೆ ತೆರಳಲು ವಿದ್ಯಾರ್ಥಿಗಳು ಪರದಾಡುತ್ತಿದ್ದಾರೆ.ಇದನ್ನೂ ಓದಿ: ಬಾಗಲಕೋಟೆ ನಗರದಲ್ಲಿ ಹೆಚ್ಚಾಯ್ತು ಬೀದಿ ನಾಯಿಗಳ ಹಾವಳಿ – ಒಂದೇ ದಿನ 15 ಮಂದಿ ಮೇಲೆ ದಾಳಿ
ಇಲ್ಲಿನ ನೀರಲಕೆರೆ, ಆನೆಹೊಸೂರು, ಜಾಗೀರನಂದಿಹಾಳ ಗ್ರಾಮಗಳ ಸಂಪರ್ಕ ಕಡಿತವಾಗಿದೆ. ಅಲ್ಲದೇ ಲಿಂಗಸುಗೂರು, ಮುದ್ದೇಬಿಹಾಳಗೆ ತೆರಳುವ ಮಾರ್ಗಗಳು ಬಂದ್ ಆಗಿವೆ. ಜೋರು ಮಳೆ ಬಂದಾಗಲೆಲ್ಲಾ ಹಳ್ಳದ ಸೇತುವೆ ಮುಳುಗಡೆಯಾಗುತ್ತಿದ್ದು, ಸೇತುವೆಯ ಎತ್ತರವನ್ನು ಹೆಚ್ಚಿಸುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.