ಆನೇಕಲ್: ಚಾಲಕನ ನಿಯಂತ್ರಣ ತಪ್ಪಿ ಬಿಎಂಟಿಸಿ ಬಸ್‌ವೊಂದು (BMTC) ಬೇಕರಿಗೆ ನುಗ್ಗಿದ ಘಟನೆ ಬೆಂಗಳೂರು (Bengaluru) ಹೊರವಲಯದ ಆನೇಕಲ್ ತಾಲೂಕಿನ ಜಿಗಿಣಿಯಲ್ಲಿ ನಡೆದಿದೆ.
ಬಿಎಂಟಿಸಿ ಬಸ್ ಮುಂಜಾನೆ ಬನ್ನೇರಘಟ್ಟದಿಂದ ಜಿಗಣಿ ಕಡೆಗೆ ಬರುತ್ತಿತ್ತು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ಬಸ್ ರಸ್ತೆ ಬದಿ ಬೇಕರಿಗೆ ನುಗ್ಗಿದೆ. ಬೆಳಗ್ಗೆ ಯಾರೂ ಗ್ರಾಹಕರಿಲ್ಲದ ಕಾರಣ ಯಾವುದೇ ಅನಾಹುತ ಸಂಭವಿಸಿಲ್ಲ. ಜೊತೆಗೆ ಬೇಕರಿ ಇನ್ನೂ ಓಪನ್ ಮಾಡದ ಹಿನ್ನೆಲೆ ಗ್ರಾಹಕರು ಇಲ್ಲದ ಕಾರಣ ಯಾವುದೇ ಅನಾಹುತ ಸಂಭವಿಸಿಲ್ಲ. ಇದನ್ನೂ ಓದಿ: ಪತ್ನಿ ಕಿರುಕುಳಕ್ಕೆ ಬೇಸತ್ತು, ವೀಡಿಯೋ ಮಾಡಿಟ್ಟು ಟೆಕ್ಕಿ ಆತ್ಮಹತ್ಯೆ
ಇನ್ನು ಚಾಲಕ ಬಹುಶಃ ನಿದ್ದೆ ಮಂಪರಿನಲ್ಲಿ ಅಪಘಾತ ಸಂಭವಿಸಿರುವ ಸಾಧ್ಯತೆಯಿದೆ. ಸದ್ಯ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಕೂಡಲೇ ಸ್ಥಳೀಯರು ಚಾಲಕನನ್ನು ಸ್ಥಳೀಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲು ಮಾಡಿದ್ದಾರೆ. ಈ ಸಂಬಂಧ ಜಿಗಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಇದನ್ನೂ ಓದಿ: `ಕೈ’ ಸರ್ಕಾರ ಬಂದ್ಮೇಲೆ ಜನಿವಾರ, ಶಿವದಾರ, ಉಡುದಾರಕ್ಕೂ ಕತ್ತರಿ ಬೀಳ್ತಿದೆ, ಹಿಜಬ್‌ಗೆ ಬಹುಪರಾಕ್ ನಡೀತಿದೆ: ಆರ್.ಅಶೋಕ್