ಆನೇಕಲ್: ಮಿನಿ ಮೈಸೂರು ಖ್ಯಾತಿಯ ಆನೇಕಲ್ (Anekal) ಪಟ್ಟಣದಲ್ಲಿ ಶಕ್ತಿ ದೇವತೆ ಚೌಡೇಶ್ವರಿ ದೇವಿ (Chowdeshwari) ವಿಜಯದಶಮಿ (Vijayadashami) ದಸರಾ ಉತ್ಸವ ಮತ್ತು ಜಂಬೂಸವಾರಿ (Jamboo Savari) ವಿಜೃಂಭಣೆಯಿಂದ ಆಚರಿಸಲಾಯಿತು. ನಾಡ ಹಬ್ಬ ಮೈಸೂರು ದಸರಾದಲ್ಲಿ ಚಾಮುಂಡೇಶ್ವರಿಯ ಅಂಬಾರಿ ಹೊತ್ತು ಕ್ಯಾಪ್ಟನ್ ಅಭಿಮನ್ಯು ಹೆಜ್ಜೆ ಹಾಕಿದ್ರೆ ಆನೇಕಲ್‌ನಲ್ಲಿ ಕೇರಳದ ಕೊಚ್ಚಿಯ ಶೇಖರ್ ಆನೆ ಚೌಡೇಶ್ವರಿ ದೇವಿ ಉತ್ಸವ ಮೂರ್ತಿ ಅಂಬಾರಿ ಹೊತ್ತು ಹೆಜ್ಜೆ ಹಾಕಿತು.
ಮೈಸೂರಿನಲ್ಲಿ ನಾಡದೇವತೆ ಚಾಮುಂಡೇಶ್ವರಿ ದೇವಿ ಜಂಬೂಸವಾರಿ ನಡೆಸಿದಂತೆ ಆನೇಕಲ್‌ನಲ್ಲಿ ನಾಡಹಬ್ಬ ದಸರಾ (Dasara) ಉತ್ಸವವನ್ನು ವಿಜೃಂಭಣೆಯಿಂದ ಆಚರಿಸಿದ್ದಾರೆ. ನಗರದ ಆದಿ ದೇವತೆ ಚೌಡೇಶ್ವರಿ ದೇವಿ ಅಂಬಾರಿಯನ್ನು ಹೊತ್ತ ಕೇರಳದ ಕೊಚ್ಚಿಯ ಶೇಖರ್ ಆನೆ ಪಟ್ಟಣದ ತಾಲೂಕು ಕಚೇರಿಯಿಂದ ತಿಲಕ್ ವೃತ್ತದ ಚೌಡೇಶ್ವರಿ ದೇವಾಲಯದ ಬಳಿ ಬರುತ್ತಿದ್ದಂತೆ ಜನಸಾಗರ ತುಂಬಿತ್ತು. ಗಣ್ಯರು ಜಂಬೂಸವಾರಿ ಹೊರಟಿದ್ದ ದೇವಿಗೆ ಪುಷ್ಪಾರ್ಚನೆ ಸಲ್ಲಿಸಿದ್ದಾರೆ. ಬಳಿಕ ಆನೇಕಲ್ ನಗರದ ಪ್ರಮುಖ ಬೀದಿಗಳಲ್ಲಿ ಜಂಬೂಸವಾರಿ ಗಜಗಾಂಭೀರ್ಯವಾಗಿ ಸಾಗಿದೆ. ಇದನ್ನೂ ಓದಿ: ದಾವಣಗೆರೆಯಲ್ಲಿ ವಿಜಯದಶಮಿ ಶೋಭಾಯಾತ್ರೆ – 50,000 ಮಂದಿ ಭಾಗಿ, ಕಣ್ಮನ ಸೆಳೆಯುತ್ತಿರುವ ಟ್ಯಾಬ್ಲೋಗಳು
ಇದಕ್ಕೂ ಮೊದಲು ತಿಲಕ್ ವೃತ್ತದ ಬಳಿ ಚೌಡೇಶ್ವರಿ ದೇವಿ ಅಂಬಾರಿ ದೃಶ್ಯವನ್ನು ಕಣ್ತುಂಬಿಕೊಳ್ಳಲು ಪಕ್ಕದ ತಮಿಳುನಾಡು, ಬೆಂಗಳೂರು ಸೇರಿದಂತೆ ಸುತ್ತಮುತ್ತಲಿನ ಹಳ್ಳಿಗಳಿಂದ ಆಪಾರ ಸಂಖ್ಯೆಯಲ್ಲಿ ಜನ ಆಗಮಿಸಿದ್ದರು. ಚೌಡೇಶ್ವರಿ ದೇವಿ ಅಂಬಾರಿ ಹೊತ್ತು ಸಾಗಿದ ಶೇಖರ್ ಆನೆಯನ್ನು ಕಂಡು ಭಕ್ತರು ರೋಮಾಂಚನಗೊಂಡಿದ್ದಾರೆ. ಇದನ್ನೂ ಓದಿ: ಚಿತ್ರಗಳಲ್ಲಿ ಮೈಸೂರು ಜಂಬೂಸವಾರಿ ನೋಡಿ
ಆನೇಕಲ್ ಪಟ್ಟಣದ ಚೌಡೇಶ್ವರಿ ದೇವಿ ದಸರಾ ಮಹೋತ್ಸವ ನೋಡಲು ಕಳೆದ ಮೂರು ವರ್ಷದಿಂದ ಇಲ್ಲಿಗೆ ಬರುತ್ತೆವೆ. ಈ ಬಾರಿಯು ಕುಟುಂಬ ಸಮೇತ ಆಗಮಿಸಿದ್ದು, ತಾಯಿ ಚೌಡೇಶ್ವರಿ ಜಂಬೂ ಸವಾರಿಯನ್ನು ನೋಡಲು ತುಂಬಾ ಖುಷಿಯಾಯಿತು. ತುಂಬಾ ವಿಜೃಂಭಣೆಯಿಂದ ಈ ಬಾರಿ ದಸರಾ ಆಚರಣೆ ಮಾಡಿದ್ದಾರೆ. ಸಾವಿರಾರು ಮಂದಿ ಭಕ್ತರು ಆಗಮಿಸಿದ್ದು, ದೇವಿಯ ದರ್ಶನ ಪಡೆದಿದ್ದಾರೆ. ವಿಶ್ವ ವಿಖ್ಯಾತ ಮೈಸೂರು ದಸರಾ ನೋಡಲು ಸಾದ್ಯವಾಗದ ಭಕ್ತರು ಆನೇಕಲ್ ದಸರಾ ನೋಡಿ ಕಣ್ತುಂಬಿಕೊಳ್ಳುತ್ತಾರೆ. ಜೊತೆಗೆ ವಿವಿಧ ಕಡೆಯಿಂದ ಆಗಮಿಸಿದ್ದ ಆಕರ್ಷಕ ಕಲಾತಂಡಗಳು ಅತ್ಯುತ್ತಮ ಪ್ರದರ್ಶನ ನೀಡುವ ಮೂಲಕ ನೆರೆದಿದ್ದ ಜನರನ್ನು ರಂಜಿಸಿವೆ ಎಂದು ಭಕ್ತರು ಸಂತಸ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಶಿವಮೊಗ್ಗ ದಸರಾ | ಜಂಬೂ ಸವಾರಿಗೆ ಅದ್ದೂರಿ ಚಾಲನೆ