ಆನೇಕಲ್: ಡ್ರಾಪ್ ಕೊಡುವುದಾಗಿ ಹೇಳಿ ಬೈಕಿನಲ್ಲಿ ಕರೆದೊಯ್ದು ಇಬ್ಬರು ಅಪರಿಚಿತರು ಯುವತಿ ಮೇಲೆ ಅತ್ಯಾಚಾರ ನಡೆಸಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ಹೊರವಲಯದಲ್ಲಿ ನಡೆದಿದೆ.
ಹೊಸಕೋಟೆ ಬಳಿಯ ನೀಲಗಿರಿ ತೋಪಿನ ಬಳಿ ಕರೆದೊಯ್ದು ದುಷ್ಕೃತ್ಯ ಎಸಗಲಾಗಿದೆ. 38 ವರ್ಷದ ಇನ್ನೂ ಮದುವೆಯಿಲ್ಲದೆ ಯುವತಿಯ ಮೇಲೆ ಅಪರಿಚಿತರು ಪೈಶ್ಯಾಚಿಕ ಕೃತ್ಯ ಮೆರೆದಿದ್ದಾರೆ. ನವೆಂಬರ್ 14 ರಂದು ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಕಳೆದ 14ರ ಸಂಜೆ ವಾಕಿಂಗ್ ಹೋಗಿ ಮನೆಗೆ ವಾಪಸ್ಸಾಗುತ್ತಿದ್ದ ಸಂತ್ರಸ್ತೆಯನ್ನು ಮನೆ ಬಳಿ ಬಿಡೋದಾಗಿ ನಂಬಿಸಿ ಬೈಕಿನಲ್ಲಿ ಕೂರಿಸಿಕೊಂಡು ಕರೆದೊಯ್ದು ಅತ್ಯಾಚಾರ ಮಾಡಲಾಗಿದೆ.
Advertisement
Advertisement
ಕೃತ್ಯದ ನಂತರ ಸಂತ್ರಸ್ತೆಯನ್ನ ನೀಲಗಿರಿ ತೂಪಿನಲ್ಲೇ ಬಿಟ್ಟು ಕಾಮುಕರು ಪರಾರಿಯಾಗಿದ್ದಾರೆ. ಸದ್ಯ ಸ್ಥಳೀಯರ ಸಹಾಯದಿಂದ ಸಂತ್ರಸ್ತೆ ಮನೆಗೆ ವಾಪಸ್ ಬಂದಿದ್ದಾರೆ. ಘಟನೆ ನಡೆದ ರಾತ್ರಿ 10 ಗಂಟೆಯಾದರೂ ಮಗಳು ಮನೆಗೆ ಬಾರದ ಕಾರಣ ಮಗಳು ನಾಪತ್ತೆಯಾಗಿರೋ ಬಗ್ಗೆ ಸಂತ್ರಸ್ತೆಯ ತಂದೆ ಸ್ಥಳೀಯ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಮುಂಜಾನೆ ಮೂರು ಗಂಟೆಗೆ ಮಗಳು ಮನೆಗೆ ಬಂದಿದ್ದನ್ನು ಕಂಡು ವಿಚಾರಿಸಿದಾಗ ಘಟನೆ ಬೆಳಕಿಗೆ ಬಂದಿದೆ. ಈ ಸಂಬಂಧ ಸಂತ್ರಸ್ತೆ ತಂದೆ ಇದೇ 15 ರಂದು ಹೊಸಕೋಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
Advertisement
Advertisement
ನ.16 ರಂದು ಸಂತ್ರಸ್ತೆಗೆ ಮೆಡಿಕಲ್ ಟೆಸ್ಟ್ ಮಾಡಿಸಿ ಪೊಲೀಸರಿಂದ ಪ್ರಕರಣ ದಾಖಲಾಗಿದೆ. ಪ್ರಕರಣ ದಾಖಲಾಗಿ 10 ದಿನ ಕಳೆದರೂ ಕ್ರಮ ಕೈಗೊಂಡಿಲ್ಲ ಅಂತ ಆಕೆಯ ಪೋಷಕರು ಆಕ್ರೋಶ ಹೊರ ಹಾಕಿದ್ದಾರೆ. ನ್ಯಾಯಕ್ಕಾಗಿ ನೊಂದ ಪೋಷಕರು ಕಣ್ಣೀರು ಹಾಕಿದ್ದಾರೆ. ಇದನ್ನೂ ಓದಿ: ಜೆಡಿಎಸ್ ಅಭ್ಯರ್ಥಿ ನಾಮಪತ್ರ ವಾಪಸ್- ಕೊಡಗಿನಲ್ಲಿ ಬಿಜೆಪಿ, ಕಾಂಗ್ರೆಸ್ ಫೈಟ್