ಆನೇಕಲ್: ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳಿಗೆ ಮಾಸ್ಕ್ ಧರಿಸುವಂತೆ ಆದೇಶ ಹೊರಡಿಸಲಾಗಿದೆ. ಜೈಲಿನಲ್ಲಿ ಕೈದಿಗಳು 5000 ಮಾಸ್ಕ್ ಗಳನ್ನು ತಯಾರಿಸುತ್ತಿದ್ದಾರೆ.
ಕೊರೊನಾ ವೈರಸ್ ಭೀತಿ ವಿಶ್ವದಾದ್ಯಂತ ಹರಡಿದ್ದು ಹೆಚ್ಚಿನ ಜನರು ಒಟ್ಟಿಗೆ ಇರುವಂತಹ ಜಾಗಗಳಲ್ಲಿ ಜಾಗರೂಕತೆಯಿಂದ ಇರುವಂತೆ ಸೂಚಿಸಲಾಗಿದೆ. ಅದರಂತೆಯೇ ಜೈಲುಗಳಲ್ಲಿಯೂ ಸಹ ಕೊರೊನಾ ವೈರಸ್ ಬಗ್ಗೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುತ್ತಿದ್ದು ಬೆಂಗಳೂರಿನ ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ ಕೊರೊನಾ ವೈರಸ್ ಎಫೆಕ್ಟ್ ಹಿನ್ನೆಲೆ ಕೈದಿಗಳು ಎಲ್ಲರೂ ಮಾಸ್ಕ್ ಧರಿಸುವಂತೆ ಅಧಿಕಾರಿಗಳು ಕಟ್ಟು ನಿಟ್ಟಿನ ಆದೇಶ ಹೊರಡಿಸಿದ್ದಾರೆ.
Advertisement
Advertisement
ಈ ಹಿನ್ನೆಲೆ ಜೈಲಿನಲ್ಲಿರುವ ಕೈದಿಗಳು ಸ್ವತಃ ತಾವೇ ಸುಮಾರು 5000 ಕ್ಕೂ ಹೆಚ್ಚು ಮಾಸ್ಕ್ ಗಳನ್ನು ತಯಾರು ಮಾಡುತ್ತಿದ್ದಾರೆ. ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ಕೈದಿಗಳು ಮಾಸ್ಕ್ ಗಳನ್ನು ತಯಾರಿಕೆ ಮಾಡುತ್ತಿದ್ದು ಅಗತ್ಯವಿದ್ದರೆ ಮಾಸ್ಕ್ ಗಳನ್ನು ಕೆಲ ಸರ್ಕಾರಿ ಆಸ್ಪತ್ರೆಗಳಿಗೂ ರವಾನೆ ಮಾಡುವುದಕ್ಕೆ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಮೂಲಗಳಿಂದ ಮಾಹಿತಿ ತಿಳಿದು ಬಂದಿದೆ.