ವಿಜಯಪುರ: ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನ ಉಪ್ಪಲದಿನ್ನಿ ತಾಂಡಾದಲ್ಲಿ ಅಂಗನವಾಡಿ ಕಾರ್ಯಕರ್ತೆಯೊಬ್ಬರು (Anganwadi Worker) ಮತಾಂತರಕ್ಕೆ ಯತ್ನಿಸುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ವಿಜಯಲಕ್ಷ್ಮಿ ಅಶೋಕ್ ಕುಮಾರ್ ಉಪ್ಪಲದಿನ್ನಿ ತಾಂಡಾದಲ್ಲಿ ಅಂಗನವಾಡಿ ಕಾರ್ಯಕರ್ತೆಯಾಗಿ ಕೆಲಸ ಮಾಡುತ್ತಿದ್ದಾರೆ. ಈಕೆ ಕೆಲಸ ವೇಳೆ ತಾಂಡಾದ ಜನರ ಮತಾಂತರಕ್ಕೆ ಪ್ರಯತ್ನಿಸುತ್ತಿದ್ದಾಳೆ ಎಂದು ಗ್ರಾಮಸ್ಥರಿಂದ ಆರೋಪ ಕೇಳಿಬಂದಿದೆ. ಇದರಿಂದ ರೊಚ್ಚಿಗೆದ್ದು ಗಲಾಟೆ ನಡೆಸಿರುವ ಗ್ರಾಮಸ್ಥರು ವಿಜಯಲಕ್ಷ್ಮಿ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ತಹಶೀಲ್ದಾರರಿಗೆ ಮನವಿ ಸಲ್ಲಿಸಿದ್ದಾರೆ. ಇದನ್ನೂ ಓದಿ: ಶಿವಮೊಗ್ಗದಲ್ಲಿ ಯುವನಿಧಿ ಕಾರ್ಯಕ್ರಮಕ್ಕೆ ಸಿಎಂ ಚಾಲನೆ
ಗ್ರಾಮಸ್ಥರಿಂದ ವ್ಯಾಪಕವಾಗಿ ದೂರು ಕೇಳಿಬಂದ ನಂತರ ತಹಶೀಲ್ದಾರರು ಹಾಗೂ ಪೊಲೀಸ್ ಅಧಿಕಾರಿಗಳು (Police Officers) ತಾಂಡಾದಲ್ಲೇ ಸಭೆ ನಡೆಸಿದ್ದಾರೆ. ಸಭೆಯಲ್ಲಿ ಗ್ರಾಮಸ್ಥರು, ಈಕೆ ಮತಾಂತರಕ್ಕೆ ಯತ್ನಿಸುತ್ತಿರುವುದಾಗಿ ಗಂಭೀರ ಆರೋಪ ಮಾಡಿದ್ದಾರೆ. ಇದರಿಂದ ಮತ್ತಷ್ಟು ಸಿಟ್ಟಾದ ಕಾರ್ಯಕರ್ತೆ ವಿಜಯಲಕ್ಷ್ಮಿ, ಮತಾಂತರ ನನ್ನ ವೈಯಕ್ತಿಕ ವಿಚಾರ ಎಂದು ಮುಖಂಡರ ವಿರುದ್ಧವೇ ವಾಗ್ವಾದಕ್ಕಿಳಿದಿದ್ದಾಳೆ. ಕೊನೆಗೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿಯೂ ಬೆದರಿಕೆ ಹಾಕಿದ್ದಾಳೆ.
ಅಷ್ಟೇ ಅಲ್ಲದೇ ಬಸವನ ಬಾಗೇವಾಡಿ ಪೊಲೀಸ್ ಠಾಣೆಯಲ್ಲಿ ತಾಂಡಾದ ಮುಖಂಡರ ವಿರುದ್ಧವೇ ವಿಜಯಲಕ್ಷ್ಮಿ ದೂರು ನೀಡಿದ್ದಾಳೆ. ಅದಕ್ಕೆ ಪ್ರತಿಯಾಗಿ ತಾಂಡಾದ ಮುಖಂಡರು ಸಹ ದೂರು ದಾಖಲಿಸಿದ್ದಾರೆ. ಇದನ್ನೂ ಓದಿ: Ayodhya Ram Mandir: ರಾಮಮಂದಿರಕ್ಕೆ 4 ಮಾರ್ಗ – ರಾಮನೂರಿಗೆ ಬರುವ ಭಕ್ತರಿಗಿದು ಮೋಕ್ಷದ ಹಾದಿ
ಸದ್ಯ ತಾಂಡಾದಲ್ಲಿ ಪರಿಸ್ಥಿತಿ ಉದ್ವಿಗ್ನಗೊಂಡಿದೆ. ಶಾಂತಿ ಕಾಪಾಡಲು ಪೊಲೀಸರು ಸ್ಥಳದಲ್ಲೇ ಬೀಡುಬಿಟ್ಟಿದ್ದಾರೆ.