ಗದಗ: ಎಸ್‌ಐಆರ್ (SIR) ಕಾರ್ಯನಿರ್ವಹಿಸುತ್ತಿದ್ದ ಅಂಗನವಾಡಿ ಕಾರ್ಯಕರ್ತೆ (Anganwadi Worker) ಹೃದಯಾಘಾತದಿಂದ (Heart Attack) ಸಾವನ್ನಪ್ಪಿರುವ ಘಟನೆ ಗದಗ (Gadag) ಜಿಲ್ಲೆ ಮುಂಡರಗಿ ತಾಲೂಕಿನ ಬಾಗೆವಾಡಿ ಗ್ರಾಮದಲ್ಲಿ ನಡೆದಿದೆ.
ಗದಗ ಜಿಲ್ಲೆ ಬಾಗೆವಾಡಿಯ ರತ್ನಮ್ಮ ಬಳಿಗಾರ (43) ಮೃತ ಮಹಿಳೆ. ಎಸ್‌ಐಆರ್ ಹಿನ್ನೆಲೆ ರತ್ನಮ್ಮ ಬಿಎಲ್‌ಒ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಶುಕ್ರವಾರ ಸಂಜೆ ವೇಳೆ ಶಿರಹಟ್ಟಿ ಶಾಸಕ ಡಾ.ಚಂದ್ರು ಲಮಾಣಿ ಗ್ರಾಮಕ್ಕೆ ಭೇಟಿ ಕೊಟ್ಟಿದ್ದರು. ಈ ವೇಳೆ ಎಸ್‌ಐಆರ್ ಪ್ರಗತಿ ಪರಿಶೀಲನೆ ನಡೆಸಿದ್ದರು. ಗ್ರಾಮದ ಮಹೇಶಗೌಡ ಪಾಟೀಲ ಎಂಬವರ ಮನೆಯಲ್ಲಿ ಶಾಸಕರು ಹಾಗೂ ಸಿಬ್ಬಂದಿಗೆ ಚಹಾ ವ್ಯವಸ್ಥೆ ಮಾಡಲಾಗಿತ್ತು. ಸಭೆ ಬಳಿಕ ಚಹಾ ಕುಡಿಯುವ ಸಂದರ್ಭ ರತ್ನಮ್ಮ ಕುಸಿದು ಬಿದ್ದಿದ್ದಾರೆ. ಇದನ್ನೂ ಓದಿ: FIFA: ಒಂದೇ ಪಂದ್ಯದಲ್ಲಿ ದಾಖಲೆಯ 10 ಗೋಲ್ – ಫ್ರಾನ್ಸ್ ಮಣಿಸಿ 3ನೇ ಸ್ಥಾನಕ್ಕೆ ತೃಪ್ತಿಪಟ್ಟ ಇಂಗ್ಲೆಂಡ್
ತಕ್ಷಣವೇ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ರತ್ನಮ್ಮ ಮೃತಪಟ್ಟಿದ್ದಾರೆ. ತೀವ್ರ ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ತಾಲೂಕು ಆಸ್ಪತ್ರೆಗೆ ಮುಂಡರಗಿ ತಹಶಿಲ್ದಾರ್ ರ‍್ರಿಸ್ವಾಮಿ ಭೇಟಿ ನೀಡಿದ್ದಾರೆ. ಗದಗ ಜಿಲ್ಲೆ ಮುಂಡರಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಇದನ್ನೂ ಓದಿ: ಗೌಡರಿಗಾಗಿ ಊಟ ಮಾಡದೇ ಕಾಯುತ್ತಿದ್ರು – ಅತ್ತೆ ನೆನೆದು ಡಾ.ಮಂಜುನಾಥ್ ಭಾವುಕ
