ಮುಂಬೈ: ತನ್ನ ಮನೆಯಲ್ಲಿ ವಿದ್ಯುತ್ (Power) ಕಡಿತಗೊಂಡಿದ್ದರಿಂದ ಕೋಪಗೊಂಡ ವ್ಯಕ್ತಿಯೊಬ್ಬ ಮಹಾರಾಷ್ಟ್ರ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ (Devendra Fadnavis) ಮನೆಗೆ ಕರೆ ಮಾಡಿ ಬಾಂಬ್ ಇಡಲಾಗಿದೆ ಎಂದು ಬೆದರಿಕೆ ಹಾಕಿದ ಘಟನೆ ಮಹಾರಾಷ್ಟ್ರದ ನಾಗ್ಪುರದಲ್ಲಿ (Nagpur) ನಡೆದಿದೆ.
ನಾಗ್ಪುರ ಪೊಲೀಸ್ ನಿಯಂತ್ರಣ ಕೊಠಡಿಗೆ ವ್ಯಕ್ತಿಯೊಬ್ಬ ಕರೆ ಮಾಡಿ ದೇವೇಂದ್ರ ಫಡ್ನವಿಸ್ ಮನೆಯ ಹೊರಗೆ ಬಾಂಬ್ ಇಟ್ಟಿರುವುದಾಗಿ ತಿಳಿಸಿ ಏಕಾಏಕಿ ಸಂಪರ್ಕ ಕಡಿತಗೊಳಿಸಿದ್ದಾನೆ. ಘಟನೆಗೆ ಸಂಬಂಧಿಸಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು (Police) ತನಿಖೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಕರೆ ಮಾಡಿದ 30 ವರ್ಷದ ವ್ಯಕ್ತಿಯನ್ನು ವಶಕ್ಕೆ ಪಡೆದಿದ್ದಾರೆ. ಇದನ್ನೂ ಓದಿ: ದೇಶದಲ್ಲಿ SDPIನವರೇ ಅಲ್ಪಸಂಖ್ಯಾತರ ವಿರೋಧಿಗಳು, ಅದೊಂದು ದೇಶದ್ರೋಹಿ ಸಂಘಟನೆ: ಸಿಎಂ
Advertisement
Advertisement
ಘಟನೆಗೆ ಸಂಬಂಧಿಸಿ ಆರೋಪಿಯನ್ನು ಪೊಲೀಸರು ವಿಚಾರಣೆ ನಡೆಸಿದ್ದಾರೆ. ಈ ವೇಳೆ ಆರೋಪಿಯು ತನ್ನ ಮನೆಯಲ್ಲಿ ವಿದ್ಯುತ್ ಕಡಿತಗೊಂಡಿದ್ದರಿಂದ ಕೋಪಗೊಂಡು ಮಹಾರಾಷ್ಟ್ರ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರ ಮನೆಯಲ್ಲಿ ಮಂಗಳವಾರ ಬಾಂಬ್ ಇಡಲಾಗಿದೆ ಎಂದು ಸುಳ್ಳು ಕರೆ ಮಾಡಿದ್ದೇನೆ ಎಂದು ತಪ್ಪೊಪ್ಪಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: 5 ವರ್ಷದ ಹಿಂದೆ ಹೆಂಡತಿ, ಈಗ ತನ್ನ ಮಗನನ್ನೇ ಕೊಂದ ಪಾಪಿ