ಕೋಲ್ಕತ್ತಾ: ಆರ್‌ಜಿ ಕರ್ ಮೆಡಿಕಲ್ ಕಾಲೇಜಿನ (RG Kar Medical College) ಟ್ರೈನಿ ವೈದ್ಯೆ ಅತ್ಯಾಚಾರ ಮತ್ತು ಕೊಲೆ ಪ್ರಕರಣ ವಿರುದ್ಧ ಪ್ರತಿಭಟನಾಕಾರರಿಂದ ಆಕ್ರೋಶದ ಕಟ್ಟೆಯೊಡೆದಿದೆ. ಮಮತಾ ಬ್ಯಾನರ್ಜಿ (Mamata Banerjee) ವಿರುದ್ಧ ಆಕ್ರೋಶ ಹೆಚ್ಚಾಗಿದ್ದು, ನಬನ್ನ ರ‍್ಯಾಲಿಯಲ್ಲಿ (Nabanna Rally) ಪ್ರತಿಭಟನಾಕಾರರು ಘರ್ಷಣೆ ನಡೆಸುತ್ತಿದ್ದಾರೆ. ಅವರನ್ನು ನಿಯಂತ್ರಿಸಲು ಪೊಲೀಸರು ಅಶ್ರುವಾಯು ಸಿಡಿಸಿ, ಲಾಠಿಚಾರ್ಜ್ ನಡೆಸಿದ್ದಾರೆ.
ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಆವರಣದಲ್ಲಿ ಮಹಿಳಾ ಟ್ರೈನಿ ವೈದ್ಯೆಯ ಮೇಲೆ ಅಮಾನುಷ ಅತ್ಯಾಚಾರ ಮತ್ತು ಕೊಲೆ ಪ್ರಕರಣ ದೇಶಾದ್ಯಂತ ಆಕ್ರೋಶಕ್ಕೆ ಕಾರಣವಾಗಿದೆ. ಈ ಘಟನೆಯು ಇಡೀ ರಾಷ್ಟ್ರವನ್ನು ಬೆಚ್ಚಿಬೀಳಿಸಿದೆ. ಅಂದಿನಿಂದ ಸಂತ್ರಸ್ತರಿಗೆ ನ್ಯಾಯಕ್ಕಾಗಿ ಒತ್ತಾಯಿಸಿ ಹಲವಾರು ಪ್ರತಿಭಟನೆಗಳನ್ನು ನಡೆಸಲಾಗುತ್ತಿದೆ.ಇದನ್ನೂ ಓದಿ: ‘ಈಗ 2’ ಬರುವ ಬಗ್ಗೆ ನಾನಿ ಕೊಟ್ರು ಇಂಟರೆಸ್ಟಿಂಗ್ ಅಪ್‌ಡೇಟ್
Advertisement
Advertisement
ಈ ಹಿನ್ನೆಲೆಯಲ್ಲಿ ನಬನ್ನ ರ‍್ಯಾಲಿ ನಡೆಯುತ್ತಿದೆ. ಕೋಲ್ಕತ್ತಾದಿಂದ ಹೌರಾಕ್ಕೆ ಎರಡು ಮಾರ್ಗಗಳ ಮೂಲಕ ರ‍್ಯಾಲಿ ನಡೆಯುತ್ತಿದೆ. ಮೊದಲ ಮೆರವಣಿಗೆ ಸಂತ್ರಗಚಿಯಿಂದ ನಬನ್ನಗೆ ಮತ್ತು ಎರಡನೇ ರ‍್ಯಾಲಿ ಕಾಲೇಜು ಆವರಣದಿಂದ ಮುಂದುವರೆದಿದೆ.
Advertisement
Advertisement
ಸಂತ್ರಗಚಿ ಪ್ರದೇಶದಲ್ಲಿ ಪ್ರಾರಂಭವಾದ ರ‍್ಯಾಲಿ ಕೋಲ್ಕತ್ತಾದ ರಾಜ್ಯ ಸಚಿವಾಲಯದ ಕಡೆಗೆ ಹೊರಟಿತು. ಹಲವಾರು ವಿದ್ಯಾರ್ಥಿಗಳು ಮತ್ತು ನಾಗರಿಕರು ತಮ್ಮ ಕೈಯಲ್ಲಿ ತ್ರಿವರ್ಣ ಧ್ವಜವನ್ನು ಪ್ರದರ್ಶಿಸುವ ಮೂಲಕ ರ‍್ಯಾಲಿಯಲ್ಲಿ ಪಾಲ್ಗೊಂಡಿದ್ದರು.
ಹೌರಾ ಸೇತುವೆಯ ಬಳಿ ಜಮಾಯಿಸಿದ ಪ್ರತಿಭಟನಾಕಾರರು ಬ್ಯಾರಿಕೇಡ್‌ಗಳನ್ನು ಹತ್ತಿ, ಪೊಲೀಸ್ ಸಿಬ್ಬಂದಿಯೊಂದಿಗೆ ತ್ರೀವ ಘರ್ಷಣೆಗೆ ಇಳಿದಿದ್ದಾರೆ. ಪ್ರತಿಭಟನೆಯ ಕಾವನ್ನು ಕಡಿಮೆಗೊಳಿಸಲು ಭದ್ರತಾ ಸಿಬ್ಬಂದಿ ಜಲಫಿರಂಗಿ ಹಾಗೂ ಲಾಠಿಚಾರ್ಜ್ ಮಾಡಿದ್ದಾರೆ.
ರ‍್ಯಾಲಿಯಲ್ಲಿ ಸಂತ್ರಗಚಿ ಬಳಿ ಇರಿಸಲಾಗಿದ್ದ ಬ್ಯಾರಿಕೇಡ್‌ಗಳನ್ನು ಪ್ರತಿಭಟನಾಕಾರರು ಮುರಿದು ಎಳೆದುಕೊಂಡು ಹೋಗುತ್ತಿದ್ದಾರೆ. ಜೊತೆಗೆ ಪಶ್ಚಿಮ ಬಂಗಾಳ ರಾಜ್ಯ ಸಚಿವಾಲಯದ ಸುತ್ತಲೂ ಪೊಲೀಸ್ ಭದ್ರತೆಯನ್ನು ಮಾಡಲಾಗಿದೆ.ಇದನ್ನೂ ಓದಿ: ಕೇರಳ ಚಿತ್ರರಂಗದಲ್ಲಿ ಲೈಂಗಿಕ ಕಿರುಕುಳ ವಿವಾದ; ‘ಅಮ್ಮ’ ಅಧ್ಯಕ್ಷ ಸ್ಥಾನಕ್ಕೆ ಮೋಹನ್ ಲಾಲ್ ರಾಜೀನಾಮೆ
“ಶಾಂತಿಯುತ ಪ್ರತಿಭಟನೆ ನಡೆಸುತ್ತಿರುವ ವಿದ್ಯಾರ್ಥಿಗಳನ್ನು ತಡೆಯಲು ನಿಮ್ಮ ಅಧಿಕಾರವನ್ನು ಬಳಸಬೇಡಿ ಎಂದು ರಾಜ್ಯಪಾಲ ಸಿವಿ ಆನಂದ ಬೋಸ್ (C. V. Ananda Bose) ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಶಾಂತಿಯುತ ಪ್ರತಿಭಟನಾಕಾರರ ಮೇಲೆ ಪಶ್ಚಿಮ ಬಂಗಾಳದ ಅಧಿಕಾರವನ್ನು ಹೇರಬೇಡಿ ಎಂದು ವೀಡಿಯೋ ಸಂದೇಶ ಕಳುಹಿಸುವ ಮೂಲಕ ತಿಳಿಸಿದ್ದಾರೆ.