– ತುಮಕೂರು ಹೆದ್ದಾರಿಯಲ್ಲಿ ಬೈಕ್ ವ್ಹೀಲಿಂಗ್ ವಿರುದ್ಧ ಜನರ ಆಕ್ರೋಶ
ತುಮಕೂರು: ಬೈಕ್ ವೀಲ್ಹಿಂಗ್ ಮಾಡುತ್ತಾ ಪ್ರಯಾಣಿಕರಿಗೆ ತೊಂದರೆ ಕೊಡುತ್ತಿದ್ದ ಪುಂಡರ ಬೈಕ್‌ಗಳನ್ನು ಸಾರ್ವಜನಿಕರು ಫ್ಲೈಓವರ್‌ನಿಂದ ಕೆಳಗೆ ಎಸೆದ ಘಟನೆ ತುಮಕೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ಬೈಕನ್ನು ಫ್ಲೈಓವರ್‌ನಿಂದ ಕೆಳಗೆ ಎಸೆಯುತ್ತಿರುವ ದೃಶ್ಯದ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಸ್ವಾತಂತ್ರ್ಯ ದಿನಾಚರಣೆಯಂದು ಬೆಂಗಳೂರಿಂದ ತುಮಕೂರು ಕಡೆಗೆ ಎರಡು ದ್ವಿಚಕ್ರ ವಾಹನಗಳಲ್ಲಿ ಚಲಿಸುತ್ತಿದ್ದ ಪುಂಡರು ವೀಲ್ಹಿಂಗ್ ಮಾಡುತ್ತಿದ್ದರು. ಇದನ್ನೂ ಓದಿ: TB Dam- ಎಲ್ಲಾ ಸ್ಟಾಪ್ ಲಾಗ್ ಗೇಟ್ ಅಳವಡಿಕೆ ಯಶಸ್ವಿ
ಅವರನ್ನು ಅಡ್ಡಗಟ್ಟಿ ಕೆಲ ಪ್ರಯಾಣಿಕರು ಪ್ರಶ್ನಿಸಿದ್ದಾರೆ. ನಂತರ ಅವರಿಗೆ ಬುದ್ದಿ ಕಲಿಸಲು ದ್ವಿಚಕ್ರ ವಾಹನವನ್ನು ಹೆದ್ದಾರಿಯ ಮೇಲ್ಸೇತುವೆಯಿಂದ ಕೆಳಗೆ ಎಸೆದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನೆಲಮಂಗಲ ಸಂಚಾರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬೈಕ್‌ಗಳನ್ನು ವಶಕ್ಕೆ ಪಡೆದ ಪ್ರಕರಣ ದಾಖಲಿಸಿಕೊಂಡಿದ್ದಾರೆಂದು ತಿಳಿದುಬಂದಿದೆ. ಇದನ್ನೂ ಓದಿ: ನಾನ್ಯಾಕೆ ರಾಜೀನಾಮೆ ನೀಡಲಿ? ರಾಜ್ಯಪಾಲರೇ ರಾಜೀನಾಮೆ ನೀಡಬೇಕು: ಸಿಎಂ