LatestLeading NewsMain PostNational

ಮೋದಿ ಸಾಕ್ಷ್ಯಚಿತ್ರಕ್ಕೆ ವಿರೋಧ – ಟೀಕೆಗೆ ಗುರಿಯಾಗಿದ್ದ ಎ.ಕೆ.ಆ್ಯಂಟನಿ ಪುತ್ರ ಕಾಂಗ್ರೆಸ್‌ಗೆ ರಾಜೀನಾಮೆ

ನವದೆಹಲಿ: 2002ರ ಗುಜರಾತ್‌ ಗಲಭೆಗೆ (Gujarat Riots) ಸಂಬಂಧಿಸಿದ ಬಿಬಿಸಿ (BBC) ವಿವಾದಾತ್ಮಕ ಸಾಕ್ಷ್ಯಾಚಿತ್ರದ ವಿರುದ್ಧ ಮಾತನಾಡಿ ಸ್ವಪಕ್ಷೀಯರಿಂದಲೇ ಟೀಕೆಗೆ ಗುರಿಯಾಗಿದ್ದ, ಕಾಂಗ್ರೆಸ್‌ ಹಿರಿಯ ನಾಯಕ ಎ.ಕೆ.ಆ್ಯಂಟನಿ (A.K.Antony) ಪುತ್ರ ಅನಿಲ್‌ ಕೆ.ಆ್ಯಂಟನಿ (Anil k Antony) ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ.

ಕೇರಳದಲ್ಲಿ (Kerala) ಕಾಂಗ್ರೆಸ್‌ನ (Congress) ಸಾಮಾಜಿಕ ಮಾಧ್ಯಮ ಕೋಶದ ಭಾಗವಾಗಿದ್ದ ಅನಿಲ್ ಆ್ಯಂಟನಿ, ಪ್ರಧಾನಿ ನರೇಂದ್ರ ಮೋದಿಗೆ ಸಂಬಂಧಿಸಿದಂತೆ ಬಿಬಿಸಿ ನಿರ್ಮಿಸಿರುವ ʼಇಂಡಿಯಾ: ದಿ ಮೋದಿ ಕ್ವೆಶ್ಚನ್‌ʼ (India: The Modi Question) ಸಾಕ್ಷ್ಯಚಿತ್ರವನ್ನು ನಿರ್ಬಂಧಿಸಿರುವ ಕೇಂದ್ರ ಸರ್ಕಾರದ ನಿರ್ಧಾರವನ್ನು ಸ್ವಾಗತಿಸಿ ಟ್ವೀಟ್‌ ಮಾಡಿದ್ದರು. ಅದಕ್ಕೆ ಕಾಂಗ್ರೆಸ್‌ ಪಕ್ಷದಿಂದಲೇ ವ್ಯಾಪಕ ಟೀಕೆ ವ್ಯಕ್ತವಾಗಿತ್ತು. ಇದರ ಬೆನ್ನಲ್ಲೇ ಅನಿಲ್‌ ಆ್ಯಂಟನಿ ಪಕ್ಷದ ತಮ್ಮ ಎಲ್ಲಾ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಇದನ್ನೂ ಓದಿ: ಮೋದಿ ಸಾಕ್ಷ್ಯಚಿತ್ರ ದಂಗಲ್ – ಜೆಎನ್‍ಯುನಲ್ಲಿ ಇಂಟರ್‌ನೆಟ್, ವಿದ್ಯುತ್ ಸ್ಥಗಿತ

https://twitter.com/anilkantony/status/1618095211284160513?ref_src=twsrc%5Etfw%7Ctwcamp%5Etweetembed%7Ctwterm%5E1618095211284160513%7Ctwgr%5E53f63a911ea2b6caff152fa7d4a85b35843dd576%7Ctwcon%5Es1_&ref_url=https%3A%2F%2Fwww.ndtv.com%2Findia-news%2Fanil-k-antony-quits-congress-cites-intolerant-calls-to-retract-tweet-on-bbc-documentary-on-pm-narendra-modi-3722103

ಟ್ವೀಟ್‌ ಮೂಲಕ ರಾಜೀನಾಮೆ ಘೋಷಿಸಿರುವ ಅನಿಲ್. “ನಾನು ಕಾಂಗ್ರೆಸ್‌ನ ಎಲ್ಲಾ ಸ್ಥಾನಗಳಿಗೂ ರಾಜೀನಾಮೆ ನೀಡಿದ್ದೇನೆ. ಬಿಬಿಸಿ ಸಾಕ್ಷ್ಯಚಿತ್ರ ವಿರುದ್ಧ ಟ್ವೀಟ್‌ ಮಾಡಿದ್ದಕ್ಕೆ ಅಸಹಿಷ್ಣುತೆ ಕರೆಗಳು ಮತ್ತು ಫೇಸ್‌ಬುಕ್‌ನಲ್ಲಿ ದ್ವೇಷ/ನಿಂದನೆ ಬರುತ್ತಿದೆ” ಎಂದು ತಿಳಿಸಿದ್ದಾರೆ.

“ಭಾರತದ ವಿರುದ್ಧ ಪೂರ್ವಾಗ್ರಹಗಳ ಸುದೀರ್ಘ ಇತಿಹಾಸ ಹೊಂದಿರುವ ರಾಜ್ಯ ಪ್ರಾಯೋಜಿತ ಚಾನೆಲ್ ಬಿಬಿಸಿ” ಎಂದು ಅನಿಲ್‌ ಆ್ಯಂಟನಿ ಸಾಕ್ಷ್ಯಚಿತ್ರದ ವಿರುದ್ಧ ಟ್ವೀಟ್‌ ಮಾಡಿ ನಿನ್ನೆ ಅಸಮಾಧಾನ ವ್ಯಕ್ತಪಡಿಸಿದ್ದರು. ಇದನ್ನೂ ಓದಿ: ಹೈದರಾಬಾದ್ ವಿವಿ ಕ್ಯಾಂಪಸ್‌ನಲ್ಲಿ ಮೋದಿ ಕುರಿತ ಬಿಬಿಸಿ ಸಾಕ್ಷ್ಯಚಿತ್ರ ಪ್ರದರ್ಶನ – ತನಿಖೆಗೆ ಆದೇಶ

ಅನಿಲ್ ಆ್ಯಂಟನಿ ತಂದೆ ಎ.ಕೆ.ಆ್ಯಂಟನಿ ಅವರು ಕಾಂಗ್ರೆಸ್ ಹಿರಿಯ ನಾಯಕರಲ್ಲಿ ಒಬ್ಬರು. ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿದ್ದಾಗ ಕೇಂದ್ರ ರಕ್ಷಣಾ ಸಚಿವರಾಗಿದ್ದರು.

Live Tv

Join our Whatsapp group by clicking the below link
https://chat.whatsapp.com/E6YVEDajTzH06LOh77r25k

Leave a Reply

Your email address will not be published. Required fields are marked *

Back to top button