ಬೆಂಗಳೂರು: ಇಲ್ಲಿನ ಸದಾಶಿವನಗರದಲ್ಲಿರುವ ಡಿಸಿಎಂ ನಿವಾಸದಲ್ಲಿಂದು ಟೀಂ ಇಂಡಿಯಾದ ಮಾಜಿ ಕ್ರಿಕೆಟಿಗ ಅನಿಲ್ ಕುಂಬ್ಳೆ (Anil Kumble) ಡಿ.ಕೆ ಶಿವಕುಮಾರ್ ಅವರನ್ನ ಭೇಟಿಯಾದರು. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡುತ್ತಾ.. ಆರ್‌ಸಿಬಿ ಕಪ್ ಗೆಲ್ಲುವ ನಿರೀಕ್ಷೆಯನ್ನು ವ್ಯಕ್ತಪಡಿಸಿದ್ದಾರೆ.
ಈ ಸಲ ಆರ್‌ಸಿಬಿ (RCB) ಕಪ್ ಗೆಲ್ಲುವ ನಿರೀಕ್ಷೆ ಇದೆಯೇ ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿ, ಅದನ್ನ ಹೇಳಬೇಡಿ, ಹೇಳಿದಾಗೆಲ್ಲ ತೊಂದ್ರೆ ಆಗುತ್ತಲ್ಲ. ಕಪ್ ಗೆಲ್ಲುವ ನಿರೀಕ್ಷೆ ಅಂತು ಇದ್ದೇ ಇದೆ ಅಂತ ಹೇಳಿದ್ದಾರೆ.
ಕಳೆದ 18 ವರ್ಷಗಳಿಂದಲೂ ಐಪಿಎಲ್ ಚೆನ್ನಾಗಿ ನಡೆದುಕೊಂಡು ಬಂದಿದೆ. ಈ ಆವೃತ್ತಿಯಲ್ಲಿ ಏನಾಗುತ್ತೆ ನೋಡೋಣ. ಇವತ್ತಿನ ಆರ್‌ಸಿಬಿ ಮ್ಯಾಚ್‌ಗೆ ಆಲ್ ದಿ ಬೆಸ್ಟ್ ಹೇಳುವೆ ಎಂದರಲ್ಲದೇ, ನಾನು ಪಂಜಾಬ್ ಹಾಗೂ ಬೆಂಗಳೂರು ಎರಡೂ ತಂಡದಲ್ಲಿ ಇದ್ದೆ. ಅದೇ ಸಮಸ್ಯೆ ನನಗೆ ಎಂದು ಮುಗುಳುನಕ್ಕರು.