ಚಂಡೀಗಢ: ಉಸಿರಾಟ ತೊಂದರೆಯಿಂದ ಬಳಲುತ್ತಿದ್ದ ಹರ್ಯಾಣದ ಗೃಹ ಸಚಿವ ಅನಿಲ್ ವಿಜ್ ಅವರನ್ನು ಶುಕ್ರವಾರ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇದೀಗ ಅನಿಲ್ ವಿಜ್‍ರವರು ವೆಂಟಿಲೇಟರ್ ಸಹಾಯದಿಂದ ಉಸಿರಾಡುತ್ತಿದ್ದಾರೆ. ಅಲ್ಲದೇ ಅನಿಲ್ ವಿಜ್ ಆರೋಗ್ಯ ದೃಷ್ಟಿಯಿಂದ ಶನಿವಾರ ಅವರು ಹಾಜರಾಗಬೇಕಿದ್ದ ಜನತಾ ದರ್ಬಾರ್ ಕಾರ್ಯಕ್ರಮವನ್ನು ರದ್ದುಗೊಳಿಸಲಾಗಿದೆ. ಇದನ್ನೂ ಓದಿ:ಮೊಹರಂ ಆಚರಣೆ ವೇಳೆ ವಿದ್ಯುತ್ ಅವಘಡ- ಇಬ್ಬರು ಸಾವು
ಕಳೆದ ವರ್ಷ ಡಿಸೆಂಬರ್‌ನಲ್ಲಿ ಅನಿಲ್ ವಿಜ್ ಕೋವಿಡ್-19 ಸೋಂಕಿಗೆ ಒಳಗಾಗಿದ್ದರು. ಭಾರತ್ ಬಯೋಟಿಕ್ ಕೋವ್ಯಾಕ್ಸಿನ್ ಲಸಿಕೆಯ ಪ್ರಯೋಗಕ್ಕೆ ಒಳಗಾಗಿದ್ದ ಅವರು, ಲಸಿಕೆ ಸ್ವೀಕರಿಸಿದ ಬಳಿಕ ಕೊರೊನಾ ಸೋಂಕು ದೃಢಪಟ್ಟಿತ್ತು. ಹೀಗಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು, ಆದಾದ ಮೂರು ವಾರಗಳ ಬಳಿಕ ಚೇತರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿತ್ತು. ಇದನ್ನೂ ಓದಿ:ಅಫ್ಘಾನ್‍ನಲ್ಲಿ ತಾಲಿಬಾನಿಗಳ ಅಟ್ಟಹಾಸ- ಭಾರತದಲ್ಲಿ ಡ್ರೈ ಫ್ರೂಟ್ಸ್ ಬೆಲೆ ಗಗನಕ್ಕೆ