– ಚಂದ್ರಬಾಬು ನಾಯ್ಡು ಆರೋಪ ತಳ್ಳಿಹಾಕಿದ ಜಗನ್ ರೆಡ್ಡಿ ಪಕ್ಷ
ಅಮರಾವತಿ: ಹಿಂದಿನ ವೈಎಸ್‌ಆರ್ ಕಾಂಗ್ರೆಸ್ (YSR Congress) ಸರ್ಕಾರದಲ್ಲಿ ತಿರುಪತಿ ಲಡ್ಡು (Tirupati Laddoos) ತಯಾರಿಸಲು ಪ್ರಾಣಿಗಳ ಕೊಬ್ಬನ್ನು ಬಳಸಲಾಗುತ್ತಿತ್ತು ಎಂದು ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಗಂಭೀರ ಆರೋಪ ಮಾಡಿದ್ದಾರೆ.
ಆದರೆ, ಸಿಎಂ ನಾಯ್ಡು (ChandrababuNaidu) ಆರೋಪವನ್ನು ಮಾಜಿ ಸಿಎಂ ವೈಎಸ್ ಜಗನ್ ಮೋಹನ್ ರೆಡ್ಡಿ (Jagan Mohan Reddy) ನೇತೃತ್ವದ ಪಕ್ಷವು ತಳ್ಳಿಹಾಕಿದೆ. ಇದು ದುರುದ್ದೇಶಪೂರಿತವಾಗಿದೆ ಎಂದು ಟೀಕಿಸಿದೆ. ಇದನ್ನೂ ಓದಿ: 35 ವರ್ಷದಲ್ಲೇ ದಾಖಲೆ – ಜಮ್ಮು ಕಾಶ್ಮೀರದಲ್ಲಿ ಭರ್ಜರಿ ಮತದಾನ
ಬುಧವಾರ ನಡೆದ ಎನ್‌ಡಿಎ ಶಾಸಕಾಂಗ ಪಕ್ಷದ ಸಭೆಯನ್ನುದ್ದೇಶಿಸಿ ಮಾತನಾಡಿದ ನಾಯ್ಡು, ಜಗನ್ ರೆಡ್ಡಿ ಸರ್ಕಾರದ ಅವಧಿಯಲ್ಲಿ ತಿರುಪತಿಯ ಶ್ರೀ ವೆಂಕಟೇಶ್ವರ ದೇವಸ್ಥಾನವು ‘ಪ್ರಸಾದ’ವಾಗಿ ನೀಡುವ ಲಡ್ಡುಗಳನ್ನು ತಯಾರಿಸಲು ಪ್ರಾಣಿಗಳ ಕೊಬ್ಬನ್ನು ಬಳಸಲಾಗುತ್ತಿತ್ತು ಎಂದು ಆರೋಪಿಸಿದ್ದಾರೆ.
ಕಳೆದ 5 ವರ್ಷಗಳಲ್ಲಿ ವೈಎಸ್‌ಆರ್ ಕಾಂಗ್ರೆಸ್ ಪಕ್ಷದ ನಾಯಕರು ತಿರುಮಲದ ಪಾವಿತ್ರ್ಯತೆಯನ್ನು ಹಾಳು ಮಾಡಿದ್ದಾರೆ. ಅವರು ‘ಅನ್ನದಾನ’ (ಉಚಿತ ಊಟ) ಗುಣಮಟ್ಟದಲ್ಲಿ ರಾಜಿ ಮಾಡಿಕೊಂಡಿದ್ದಾರೆ. ಪವಿತ್ರ ತಿರುಮಲ ಲಡ್ಡುವನ್ನು ತುಪ್ಪದ ಬದಲು ಪ್ರಾಣಿಗಳ ಕೊಬ್ಬನ್ನು ಬಳಸಿ ಕಲುಷಿತಗೊಳಿಸಿದ್ದಾರೆ. ಆದರೆ, ನಾವು ಈಗ ಶುದ್ಧ ತುಪ್ಪವನ್ನು ಬಳಸುತ್ತಿದ್ದೇವೆ. ತಿರುಮಲ ತಿರುಪತಿ ದೇವಸ್ಥಾನ ಪಾವಿತ್ರ್ಯತೆಯನ್ನು ಕಾಪಾಡಲು ಪ್ರಯತ್ನಿಸುತ್ತಿದ್ದೇವೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಒಂದು ವಾರದೊಳಗೆ ಸಿಎಂ ಅಧಿಕೃತ ನಿವಾಸ ತ್ಯಜಿಸಲಿದ್ದಾರೆ ಕೇಜ್ರಿವಾಲ್
ಚಂದ್ರಬಾಬು ನಾಯ್ಡು ಅವರು ತಿರುಮಲದ ಪಾವಿತ್ರ್ಯತೆ ಮತ್ತು ಕೋಟ್ಯಂತರ ಹಿಂದೂಗಳ ನಂಬಿಕೆಯನ್ನು ತೀವ್ರವಾಗಿ ಹಾಳು ಮಾಡಿದ್ದಾರೆ. ತಿರುಮಲ ಪ್ರಸಾದದ ಬಗ್ಗೆ ಅವರ ಹೇಳಿಕೆಗಳು ಅತ್ಯಂತ ದುರುದ್ದೇಶಪೂರಿತವಾಗಿವೆ. ಯಾವುದೇ ವ್ಯಕ್ತಿ ಇಂತಹ ಮಾತುಗಳನ್ನು ಆಡುವುದಿಲ್ಲ. ಅಂತಹ ಆರೋಪಗಳನ್ನು ಮಾಡುವುದಿಲ್ಲ ರಾಜ್ಯಸಭಾ ಸಂಸದ ವೈವಿ ಸುಬ್ಬಾ ರೆಡ್ಡಿ ಖಂಡಿಸಿದ್ದಾರೆ.
ರಾಜಕೀಯ ಲಾಭಕ್ಕಾಗಿ ಚಂದ್ರಬಾಬು ನಾಯ್ಡು ಯಾವ ಮಟ್ಟಕ್ಕೂ ಇಳಿಯುತ್ತಾರೆ ಎಂಬುದು ಮತ್ತೆ ಸಾಬೀತಾಗಿದೆ. ಭಕ್ತರ ನಂಬಿಕೆ ಗಟ್ಟಿಗೊಳಿಸಲು ನಾನು ಕುಟುಂಬ ಸಮೇತ ತಿರುಮಲ ಪ್ರಸಾದದ ವಿಚಾರವಾಗಿ ಪರಮಾತ್ಮನ ಮುಂದೆ ಪ್ರಮಾಣ ವಚನ ಸ್ವೀಕರಿಸಲು ಸಿದ್ಧ. ಚಂದ್ರಬಾಬು ನಾಯ್ಡು ತಮ್ಮ ಕುಟುಂಬದೊಂದಿಗೆ ಅದೇ ರೀತಿ ಮಾಡಲು ಸಿದ್ಧರಿದ್ದಾರೆಯೇ ಎಂದು ಸುಬ್ಬಾ ರೆಡ್ಡಿ ಸವಾಲು ಹಾಕಿದ್ದಾರೆ.