ನಟ ಅನಿರುದ್ಧ ಹೊಸ ಧಾರಾವಾಹಿಯನ್ನು ಘೋಷಿಸುತ್ತಿದ್ದಂತೆಯೇ ವಿರೋಧ ವ್ಯಕ್ತವಾಗಿದೆ. ಎಸ್.ನಾರಾಯಣ್ ನಿರ್ದೇಶನದ ಸೂರ್ಯವಂಶ ಧಾರಾವಾಹಿಯಲ್ಲಿ ಅನಿರುದ್ಧ ನಾಯಕನಾಗಿ ನಟಿಸುತ್ತಿದ್ದಾರೆ. ಈ ಧಾರಾವಾಹಿಯನ್ನು ತಡೆಯಬೇಕು ಎಂದು ಕನ್ನಡ ಕಿರುತೆರೆ ನಿರ್ಮಾಪಕರು ಆಗ್ರಹಿಸಿದ್ದಾರೆ. ಅನಿರುದ್ಧ ಮೇಲೆ ಎರಡು ವರ್ಷಗಳ ಕಾಲ ಅಲಿಖಿತ ನಿಷೇಧ ಹೇರಿದ್ದರಿಂದ ಅವರಿಗಾಗಿ ಸೀರಿಯಲ್ ಮಾಡದಂತೆ ನಾರಾಯಣ್ ಅವರಿಗೆ ಮನವಿ ಮಾಡಿದ್ದಾರೆ.
Advertisement
ಈ ಕುರಿತು ಪಬ್ಲಿಕ್ ಟಿವಿ ಜೊತೆ ಮಾತನಾಡಿರುವ ಎಸ್.ನಾರಾಯಣ್, ‘ ಅನಿರುದ್ದ ಅವರ ಬಗ್ಗೆ ಬಹಳಷ್ಟು ಆರೋಪಗಳನ್ನ ಮಾಡಿದ್ದಾರೆ.ಆ ಆರೋಪಗಳು ಸುಳ್ಳಾಗಲಿ ಅಂತ ನಾನು ಆಶಿಸುತ್ತೇನೆ. ಅನಿರುದ್ದ ಅವರು ವಿಷ್ಣುವರ್ಧನ್ ಅಳಿಯ. ಅವರ ಹೆಸರಿಗೆ ಮಸಿ ಬಳಿಯುವ ಕೆಲಸವನ್ನು ಮಾಡಲ್ಲ ಅನ್ನುವುದು ನನ್ನ ನಂಬಿಕೆ. ಮಾತು ಕತೆಯ ಮೂಲಕ ಸಮಸ್ಯೆಗಳನ್ನು ಪರಿಹರಿಸಿಕೊಳ್ಳಲು ಅವಕಾಶ ಇದೆ. ಕಿರುತರೆಯ ನಿರ್ಮಾಪಕರು ನನ್ನ ಬಳಿ ಮಾತನಾಡಿ ಅವರು ಎದುರಿಸಿದ ಸಮಸ್ಯೆಗಳನ್ನು ಹೇಳಿಕೊಂಡಿದ್ದಾರೆ. ಇಂದು ಸಂಜೆ ಸಭೆಯಲ್ಲಿ ಆ ಕುರಿತು ಮಾತನಾಡುತ್ತೇನೆ’ ಎಂದಿದ್ದಾರೆ. ಇದನ್ನೂ ಓದಿ: ‘ಅನ್ ಲಾಕ್ ರಾಘವ’ ಸಿನಿಮಾಗೆ ಕೊನೆ ಹಂತದ ಶೂಟಿಂಗ್
Advertisement
Advertisement
ಕನ್ನಡ ಕಿರುತೆರೆ ನಿರ್ಮಾಪಕರ ಸಂಘವು ಅನಿರುದ್ಧ ಅವರಿಗೆ ಎರಡು ವರ್ಷಗಳ ಕಾಲ ನಿಷೇಧ ಹೇರುವ ಕುರಿತು ತೀರ್ಮಾನ ತಗೆದುಕೊಂಡಿತ್ತು. ಜೊತೆ ಜೊತೆಯಲಿ ಧಾರಾವಾಹಿಯಲ್ಲಿ ಕಿರಿಕ್ ಮಾಡಿದರು ಎನ್ನುವ ಕಾರಣಕ್ಕಾಗಿ ಎರಡು ವರ್ಷಗಳ ಕಾಲ ಅನಿರುದ್ಧ ಅವರಿಗೆ ಯಾರೂ ಕೆಲಸ ಕೊಡಬಾರದು ಎಂದು ಹೇಳಲಾಗಿತ್ತು. ಆದರೆ, ಘಟನೆ ನಡೆದ ಕೆಲವೇ ತಿಂಗಳಲ್ಲೇ ಅನಿರುದ್ಧ ಮತ್ತೊಂದು ಧಾರಾವಾಹಿಗೆ ಹೀರೋ ಆಗಿ ಆಯ್ಕೆಯಾಗಿದ್ದಾರೆ.
Advertisement
ಜೊತೆ ಜೊತೆಯಲಿ ಧಾರಾವಾಹಿಯಿಂದ ಹೊರ ನಡೆದ ನಂತರ ನಟ ಅನಿರುದ್ಧ ಮುಂದೇನು ಮಾಡುತ್ತಾರೆ ಎನ್ನುವ ಕುತೂಹಲ ಸಹಜವಾಗಿಯೇ ಅವರ ಅಭಿಮಾನಿಗಳಲ್ಲಿ ಇತ್ತು. ಕಿರುತೆರೆ ನಿರ್ಮಾಪಕರ ಸಂಘವು ಅನಿರುದ್ಧಗಾಗಿ ಯಾರೂ ಧಾರಾವಾಹಿ ಮಾಡಬಾರದು ಎಂದು ಅಲಿಖಿತ ಫಾರ್ಮಾನು ಹೊರಡಿಸಿತ್ತು. ಯಾವುದೇ ವಾಹಿನಿಗಳು ಕೂಡ ಇವರಿಗೆ ಕೆಲಸ ಕೊಡದಂತೆ ಮನವಿ ಮಾಡಿಕೊಳ್ಳಲಾಗಿತ್ತು. ಆದರೆ, ಚಿತ್ರಣ ಬೇರೆ ರೀತಿಯಲ್ಲೇ ಬದಲಾಗಿದೆ.