ಬೆಂಗಳೂರು: ಅಪ್ಪಾಜಿ ಶಾರೀರಕವಾಗಿ ದೂರವಾಗಿ ಒಂಭತ್ತು ವರ್ಷಗಳು ಕಳೆದಿವೆ. ಇದೂವರೆಗೆ ಸ್ಮಾರಕ ನಿರ್ಮಾಣ ಮಾಡಲು ರಾಜ್ಯ ಸರ್ಕಾರ ಮುಂದಾಗುತ್ತಿಲ್ಲ. ಬೆಂಗಳೂರಲ್ಲಿ ಸಿನಿಮಾ ಮತ್ತು ಟಿಲಿವಿಷನ್ ಸಂಸ್ಥೆಯ ಶಾಖೆ ತೆರೆಯಬೇಕು ಎಂದು ಮತ್ತೊಮ್ಮೆ ವಿಷ್ಣುವರ್ಧನ್ ಅಳಿಯ ಅನಿರುದ್ಧ್ ಆಗ್ರಹಿಸಿದ್ದಾರೆ.
ಶುಕ್ರವಾರ ನಡೆದ ಸಭೆಯಲ್ಲಿ ಮೈಸೂರಿನಲ್ಲಿ ಅಂಬರೀಶ್ ಅವರ ಹೆಸರಲ್ಲಿ ಫಿಲ್ಮ್ ಸಿಟಿಗೆ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಒಪ್ಪಿಗೆ ಸೂಚಿಸಿದ್ದಾರೆ. ಆದ್ರೆ ಅಪ್ಪಾಜಿ ಹೆಸರಲ್ಲಿ ಸ್ಮಾರಕ ನಿರ್ಮಾಣ ಮಾಡಲು ಸರ್ಕಾರ ನಿರ್ಲಕ್ಷ್ಯ ಮಾಡುತ್ತಿದೆ. ಕೇವಲ ಬೇರೆ ಇಬ್ಬರ ನಾಯಕರ ಹೆಸರನ್ನು ತೆಗೆದುಕೊಳ್ಳುತ್ತಾರೆ. ಹಾಗಾದ್ರೆ ಅಪ್ಪಾಜಿ ಕನ್ನಡ ಚಲನಚಿತ್ರಕ್ಕೆ ಸೇವೆ ಸಲ್ಲಿಸಿಲ್ಲವೇ ಎನ್ನುವ ಪ್ರಶ್ನೆ ಕಾಡುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು.
ಕಳೆದ 9 ವರ್ಷಗಳಿಂದ ಕಚೇರಿಯಿಂದ ಕಚೇರಿಗೆ ಅಲೆದಾಡುತ್ತಿದ್ದೇವೆ. ಎರಡು ದಿನದ ಹಿಂದೆ ನಾನು ಆವೇಷಭರಿತನಾಗಿ ಮಾತಾಡಿದಾಗ ಮಾನ್ಯ ಮುಖ್ಯಮಂತ್ರಿಗಳು ಸಕಾರಾತ್ಮಕವಾಗಿ ಪ್ರತಿಕ್ರಿಯೆ ನೀಡಿದರು. ಸ್ಪಷ್ಟನೆ ನೀಡಿ ಟ್ವೀಟ್ ಸಹ ಮಾಡಿದರು. ಶುಕ್ರವಾರ ನಡೆದ ಕಾರ್ಯಕ್ರಮದಲ್ಲಿ ಅಂಬಿ ಅಂಕಲ್ ಹೆಸರಲ್ಲಿ ಫಿಲ್ಮ್ ಸಿಟಿ ಮತ್ತು ವಿಶ್ವವಿದ್ಯಾಲಯ ಸ್ಥಾಪನೆ ಮಾಡಲಾಗುತ್ತಿದೆ ಎಂದು ಘೋಷಣೆ ಮಾಡಿದ್ದಾರೆ. ಈ ಉತ್ಸಾಹದ ಕೆಲಸ ಅಪ್ಪಾಜಿ ಹೆಸರಲ್ಲಿ ಮಾತ್ರ ಯಾಕೆ ಆಗುತ್ತಿಲ್ಲ ಎಂದು ಪ್ರಶ್ನಿಸಿ ಅಸಮಾಧಾನವನ್ನು ಹೊರ ಹಾಕಿದರು.
ಸಿಎಂ ಫಿಲ್ಮ್ ಸಿಟಿ, ವಿಶ್ವವಿದ್ಯಾಲಯ ಮಾತುಕತೆಗಳು ನಡೆಯುತ್ತಿವೆ. ಕನ್ನಡ ಚಿತ್ರರಂಗದಲ್ಲಿ ಮೂವರು ನಾಯಕರು ಹೆಸರು ಒಟ್ಟಿಗೆ ತೆಗೆದುಕೊಳ್ಳುತ್ತಾರೆ. ಆದ್ರೆ ಸ್ಮಾರಕ ವಿಚಾರದಲ್ಲಿ ಅಪ್ಪಾಜಿ ಅವರನ್ನು ನಿರ್ಲಕ್ಷ್ಯ ಮಾಡಲಾಗುತ್ತಿದೆ ಎಂದು ಆರೋಪಿಸಿದರು.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live ವೀಕ್ಷಿಸಲು ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv