ಸದ್ದು ಮಾಡುತ್ತಿದೆ ಅನೀಶ್, ಮಿಲನಾ ನಾಗರಾಜ್ ನಟನೆಯ ‘ಆರಾಮ್ ಅರವಿಂದ ಸ್ವಾಮಿ’ ಚಿತ್ರದ ಪೋಸ್ಟರ್

Public TV
1 Min Read
milana nagaraj

ಸಿನಿಮಾ ಅನ್ನೋದೇ ಒಂದು ಸವಾಲು. ಈ ಸವಾಲನ್ನು ಸ್ವೀಕರಿಸಿ ಅಖಾಡಕ್ಕೆ ಇಳಿದ್ಮೇಲೆ ಪ್ರೇಕ್ಷಕರಿಗೆ ಸಿನಿಮಾ ತಲುಪಿಸುವುದು ಮಗದೊಂದು ಸವಾಲು. ತಮ್ಮ ಚಿತ್ರವನ್ನು ಚಿತ್ರಪ್ರೇಮಿಗಳಿಗೆ ತಲುಪಿಸಲು ಪ್ರಚಾರ ಬಹಳ ಮುಖ್ಯ. ಈ ವಿಚಾರದಲ್ಲಿ ‘ಆರಾಮ್ ಅರವಿಂದ ಸ್ವಾಮಿ’ (Aram Aravinda Swamy) ಬಳಗದ ಕ್ರಿಯೇಟಿವಿಟಿಗೆ ರಾಯಲ್ ಸೆಲ್ಯೂಟ್ ಹೇಳಲೇಬೇಕು. ಸದ್ಯ ಗಣೇಶನ ಹಬ್ಬದ ಸಂದರ್ಭದಲ್ಲಿ ಸಿನಿಮಾದ ವಿಶೇಷ ಪೋಸ್ಟರ್‌ವೊಂದನ್ನು ರಿಲೀಸ್ ಮಾಡಿದ್ದಾರೆ. ಈ ಪೋಸ್ಟರ್‌ ಪ್ರೇಕ್ಷಕರ ಗಮನ ಸೆಳೆದಿದೆ.

milana nagaraj 1

ಮಿಲನಾ ಮತ್ತು ಹೃತಿಕ ಇಬ್ಬರ ನಡುವೆ ಮದುವೆ ಮಂಟಪದಲ್ಲಿ ಅನೀಶ್‌ ಕುಳಿತಿರುವ ಪೋಸ್ಟರ್‌ ಇದೀಗ ಸದ್ದು ಮಾಡುತ್ತಿದೆ.  ಈ ಮೂಲಕ ಆರಾಮ್‌ ಅರವಿಂದನ ಕಥೆ ಹೇಳೋಕೆ ಅನೀಶ್‌ ಸಜ್ಜಾಗಿದ್ದಾರೆ. ಮಾಸ್ ಸಿನಿಮಾಗಳಲ್ಲಿಯೇ ಹೆಚ್ಚಾಗಿ ನಟಿಸಿರೋ ಅನೀಶ್ ‘ಆರಾಮ್ ಅರವಿಂದ ಸ್ವಾಮಿ’ ಸಿನಿಮಾ ಮೂಲಕ ರೊಮ್ಯಾಂಟಿಕ್ ಕಾಮಿಡಿ ಕಥಾಹಂದರವನ್ನು ಪ್ರೇಕ್ಷಕರಿಗೆ ಉಣಬಡಿಸಲಿದ್ದಾರೆ. ‘ನಮ್ ಗಣಿ ಬಿಕಾಂ ಪಾಸ್’ ಮತ್ತೆ ‘ಗಜಾನನ ಅಂಡ್ ಗ್ಯಾಂಗ್’ ಸಿನಿಮಾ ಮೂಲಕ ಭರವಸೆ ಮೂಡಿಸಿರುವ ಅಭಿಷೇಕ್ ಶೆಟ್ಟಿ ಈ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳಿದ್ದಾರೆ.ಇದನ್ನೂ ಓದಿ:ತಮಿಳುನಾಡಿನ ಡೆಂಕಣಿಕೋಟೆಯಲ್ಲಿ ‘ಕಲ್ಕಿ’ ಥೀಮ್‌ನಲ್ಲಿ ಗಣೇಶ ಪ್ರತಿಷ್ಠಾಪನೆ

ಅನೀಶ್‌ಗೆ ಮಿಲನಾ ನಾಗರಾಜ್ (Milana Nagaraj) ಹಾಗೂ ಹೃತಿಕ ಶ್ರೀನಿವಾಸ್ ಇಬ್ಬರು ನಾಯಕಿಯರು. ‘ಆರಾಮ್ ಅರವಿಂದ್ ಸ್ವಾಮಿ’ (Aram Aravinda Swamy) ಸಿನಿಮಾಗೆ ಮ್ಯಾಜಿಕಲ್ ಕಂಪೋಸರ್ ಅರ್ಜುನ್ ಜನ್ಯಾ ಟ್ಯೂನ್ ಹಾಕಿದ್ದಾರೆ. ಹೀಗಾಗಿ ಸಂಗೀತ ಪ್ರಿಯರ ಕಿವಿಗಳಿಗಂತೂ ಒಳ್ಳೊಳ್ಳೆ ಹಾಡುಗಳನ್ನು ನಿರೀಕ್ಷೆ ಮಾಡಬಹುದು. ‘ಅಕಿರ’ ಸಿನಿಮಾ ನಿರ್ಮಿಸಿದ್ದ ಶ್ರೀಕಾಂತ್ ಪ್ರಸನ್ನ ಹಾಗೂ ‘ಗುಳ್ಟು’ ಸಿನಿಮಾ ನಿರ್ಮಾಪಕ ಪ್ರಶಾಂತ್ ರೆಡ್ಡಿ ಈ ಸಿನಿಮಾವನ್ನು ನಿರ್ಮಾಣ ಮಾಡಿದ್ದಾರೆ. ವೈವಿಬಿ ಶಿವಸಾಗರ್ ಛಾಯಾಗ್ರಹಣ, ಉಮೇಶ್ ಆರ್. ಬಿ. ಸಂಕಲನ ಈ ಸಿನಿಮಾಗಿದೆ.

Share This Article