Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಅಸಲಿಮುಖ ಮತ್ತೊಮ್ಮೆ ಕಳಚಿ ಬಿದ್ದಿದೆ: ಅನಿತಾ ಕುಮಾರಸ್ವಾಮಿ ಕಿಡಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಅಸಲಿಮುಖ ಮತ್ತೊಮ್ಮೆ ಕಳಚಿ ಬಿದ್ದಿದೆ: ಅನಿತಾ ಕುಮಾರಸ್ವಾಮಿ ಕಿಡಿ

Bengaluru City

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಅಸಲಿಮುಖ ಮತ್ತೊಮ್ಮೆ ಕಳಚಿ ಬಿದ್ದಿದೆ: ಅನಿತಾ ಕುಮಾರಸ್ವಾಮಿ ಕಿಡಿ

Public TV
Last updated: March 18, 2023 6:26 pm
Public TV
Share
4 Min Read
Bangalore Mysore Expressway 1
SHARE

ಬೆಂಗಳೂರು: ಇತ್ತೀಚೆಗಷ್ಟೇ ಪ್ರಧಾನಿ ನರೇಂದ್ರ ಮೋದಿ (Narendra Modi) ಉದ್ಘಾಟಿಸಿದ್ದ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ (Bangaluru Mysuru Expressway) ಕೆರೆಯಂತಾಗಿದ್ದು, ಸಂಚಾರ ಅಸ್ತವ್ಯಸ್ತವಾಗಿದೆ. ಈ ಅವ್ಯವಸ್ಥೆಗೆ ವಿರೋಧ ಪಕ್ಷಗಳು ಸರ್ಕಾರದ ವಿರುದ್ಧ ಟೀಕಾಪ್ರಹಾರ ನಡೆಸಿವೆ.

ಎಕ್ಸ್‌ಪ್ರೆಸ್‌ವೇ ಕಾಮಗಾರಿ ಅವೈಜ್ಞಾನಿಕವಾಗಿದೆ ಎಂದು ವಿಪಕ್ಷಗಳ ನಾಯಕರು ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ. ಇದರ ಬೆನ್ನಲ್ಲೇ ಜಲಾವೃತಗೊಂಡ ರಸ್ತೆ ಪೋಟೋಗಳನ್ನು ಟ್ವಿಟ್ಟರ್‌ನಲ್ಲಿ ಜೆಡಿಎಸ್‌ (JDS) ಶಾಸಕಿ ಅನಿತಾ ಕುಮಾರಸ್ವಾಮಿ (Anitha Kumaraswamy) ಹಂಚಿಕೊಂಡು, ಅವ್ಯವಸ್ಥೆಯ ವಿರುದ್ಧ ಸರಣಿ ಟ್ವೀಟ್ ಮಾಡಿ ಕಿಡಿಕಾರಿದ್ದಾರೆ.

Bangalore Mysore Expressway 2

ಟ್ವೀಟ್‍ನಲ್ಲಿ ಏನಿದೆ?
ಡಬಲ್ ಎಂಜಿನ್ ಸರಕಾರಗಳು, ಈ ರಸ್ತೆ ನಮ್ಮ ಹೆಮ್ಮೆ ಎಂದು ಬಡಾಯಿ ಕೊಚ್ಚಿಕೊಳ್ಳುತ್ತಿರುವ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಅಸಲಿಮುಖ ಮತ್ತೊಮ್ಮೆ ಕಳಚಿ ಬಿದ್ದಿದೆ. ಬೆಳಗಿನಜಾವ ಸುರಿದ ಒಂದು ಸಣ್ಣ ಮಳೆಗೇ (Rain) ಅದು ಕೆರೆಯಾಗಿ, ಚರಂಡಿಯಾಗಿ ಉಕ್ಕಿ ಹರಿದಿದೆ.

ಕಳೆದ ವರ್ಷ ಅಬ್ಬರಿಸಿದ ಮಹಾಮಳೆಗೆ ಈ ಎಕ್ಸ್ ಪ್ರೆಸ್ ಹೆದ್ದಾರಿ ತತ್ತರಿಸಿತ್ತು. ಕಾಮಗಾರಿಗಳು ಮುಗಿದಿರಲಿಲ್ಲ ಎಂದು ಹೇಳಿ ಗುತ್ತಿಗೆದಾರರು ಆಗ ಬೀಸುವ ದೊಣ್ಣೆಯಿಂದ ತಪ್ಪಿಸಿಕೊಂಡಿದ್ದರು. ಈಗ ವರ್ಷ ಮುಗಿಯುವ ಮೊದಲೇ ಮತ್ತೆ ಬಂದ ಸಣ್ಣಮಳೆಗೆ ಸಾವಿರಾರು ಕೋಟಿ ವೆಚ್ಚದ ಈ ಹೆದ್ದಾರಿ ವಾಹನ ಸವಾರರ ಪಾಲಿಗೆ ಸಾವಿನಮಾರಿಯಾಗಿ ಮಾರ್ಪಟ್ಟಿದೆ. 2/6

— ಅನಿತಾ ಕುಮಾರಸ್ವಾಮಿ | Anitha Kumaraswamy (@Anitha_JDS) March 18, 2023

ಕಳೆದ ವರ್ಷ ಅಬ್ಬರಿಸಿದ ಮಹಾಮಳೆಗೆ ಈ ಎಕ್ಸ್‍ಪ್ರೆಸ್ ಹೆದ್ದಾರಿ ತತ್ತರಿಸಿತ್ತು. ಕಾಮಗಾರಿಗಳು ಮುಗಿದಿರಲಿಲ್ಲ ಎಂದು ಹೇಳಿ ಗುತ್ತಿಗೆದಾರರು ಆಗ ಬೀಸುವ ದೊಣ್ಣೆಯಿಂದ ತಪ್ಪಿಸಿಕೊಂಡಿದ್ದರು. ಈಗ ವರ್ಷ ಮುಗಿಯುವ ಮೊದಲೇ ಮತ್ತೆ ಬಂದ ಸಣ್ಣ ಮಳೆಗೆ ಸಾವಿರಾರು ಕೋಟಿ ರೂ. ವೆಚ್ಚದ ಈ ಹೆದ್ದಾರಿ ವಾಹನ ಸವಾರರ ಪಾಲಿಗೆ ಸಾವಿನ ಮಾರಿಯಾಗಿ ಮಾರ್ಪಟ್ಟಿದೆ. ಇದನ್ನೂ ಓದಿ: ಸಿದ್ದರಾಮಯ್ಯ ರಾಜ್ಯದ ಯಾವ ಕ್ಷೇತ್ರದಲ್ಲೂ ಗೆಲ್ಲುವುದಿಲ್ಲ: ಆರ್.ಅಶೋಕ್

ಅವೈಜ್ಞಾನಿಕವಾದ ಈ ಯೋಜನೆಯ ಕಾಮಗಾರಿಗಳನ್ನು ಪೂರ್ಣಗೊಳಿಸಿದೆಯೇ, ತರಾತುರಿಯಲ್ಲಿ ಪ್ರಧಾನಮಂತ್ರಿಗಳಾದ ಶ್ರೀ @narendramodi ಅವರಿಂದ ಉದ್ಘಾಟನೆ ಮಾಡಿಸಿದ ಈ ‘ ಚುನಾವಣಾ ಗಿಮಕ್ ‘ ಬಗ್ಗೆ ಜನರು ಹಾದಿಬೀದಿಯಲ್ಲಿ ಆಡಿಕೊಳ್ಳುತ್ತಿದ್ದಾರೆ. ವಾಹನ ಸವಾರರು ಶಪಿಸುತ್ತಿದ್ದಾರೆ. ಇದಕ್ಕೆ ಉತ್ತರದಾಯಿಗಳು ಯಾರು? 3/6

— ಅನಿತಾ ಕುಮಾರಸ್ವಾಮಿ | Anitha Kumaraswamy (@Anitha_JDS) March 18, 2023

ಅವೈಜ್ಞಾನಿಕವಾದ ಈ ಯೋಜನೆಯ ಕಾಮಗಾರಿಗಳನ್ನು ಪೂರ್ಣಗೊಳಿಸಿದೆಯೇ, ತರಾತುರಿಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆ ಮಾಡಿಸಿದ ಈ `ಚುನಾವಣಾ ಗಿಮಿಕ್’ ಬಗ್ಗೆ ಜನರು ಹಾದಿಬೀದಿಯಲ್ಲಿ ಆಡಿಕೊಳ್ಳುತ್ತಿದ್ದಾರೆ. ವಾಹನ ಸವಾರರು ಶಪಿಸುತ್ತಿದ್ದಾರೆ. ಇದಕ್ಕೆ ಉತ್ತರದಾಯಿಗಳು ಯಾರು?

ಬೆಳಗಿನಜಾವ ಸುರಿದ ಮಳೆಯಿಂದ ಹೆದ್ದಾರಿಯಲ್ಲಿ ನೀರು ಆಳೆತ್ತರ ನಿಂತಿದೆ. ವಾಹನಗಳು ಅಪಘಾತಕ್ಕೀಡಾಗಿ ಪ್ರಯಾಣಿಕರು ತೊಂದರೆಗೆ ಸಿಲುಕಿದ್ದಾರೆ. 270 ರೂ. ಟೋಲ್ ಕಟ್ಟಿ ಹೆದ್ದಾರಿಗೆ ಬಂದ ವಾಹನ ಸವಾರರು ಮಳೆ ಚಳಿಯಲ್ಲಿ ಜೀವವನ್ನು ಅಂಗೈಯಲ್ಲಿ ಇಟ್ಟುಕೊಂಡು ನರಳಿದ್ದಾರೆ. ಇದು ನಿಜಕ್ಕೂ ನೋವಿನ ಸಂಗತಿ.4/6

— ಅನಿತಾ ಕುಮಾರಸ್ವಾಮಿ | Anitha Kumaraswamy (@Anitha_JDS) March 18, 2023

ಬೆಳಗಿನಜಾವ ಸುರಿದ ಮಳೆಯಿಂದ ಹೆದ್ದಾರಿಯಲ್ಲಿ ನೀರು ಆಳೆತ್ತರ ನಿಂತಿದೆ. ವಾಹನಗಳು ಅಪಘಾತಕ್ಕೀಡಾಗಿ ಪ್ರಯಾಣಿಕರು ತೊಂದರೆಗೆ ಸಿಲುಕಿದ್ದಾರೆ. 270 ರೂ. ಟೋಲ್ ಕಟ್ಟಿ ಹೆದ್ದಾರಿಗೆ ಬಂದ ವಾಹನ ಸವಾರರು ಮಳೆ ಚಳಿಯಲ್ಲಿ ಜೀವವನ್ನು ಅಂಗೈಯಲ್ಲಿ ಇಟ್ಟುಕೊಂಡು ನರಳಿದ್ದಾರೆ. ಇದು ನಿಜಕ್ಕೂ ನೋವಿನ ಸಂಗತಿಯಾಗಿದೆ.

ಕೆಲ ದಿನಗಳ ಹಿಂದೆ ಹೆದ್ದಾರಿಯಲ್ಲಿ ಕೆಟ್ಟು ನಿಂತಿದ್ದ ವಾಹನದಲ್ಲಿದ್ದ ದಂಪತಿಯ ಹಣ, ಚಿನ್ನಾಭರಣವನ್ನು ದೋಚಿದ್ದ ಪ್ರಕರಣ ವರದಿಯಾಗಿತ್ತು. ಜತೆಗೆ, ನಿರಂತರ ಅಪಘಾತಗಳಿಂದ 80ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ಹಾಗಾದರೆ, ಈ ಹೆದ್ದಾರಿಯ ಭದ್ರತೆ, ಸುರಕ್ಷತೆ ಪಾಡೇನು? ಟೋಲ್ ಸಂಗ್ರಹ ಮಾಡಿದರೆ ಸಾಕೇ? 5/6

— ಅನಿತಾ ಕುಮಾರಸ್ವಾಮಿ | Anitha Kumaraswamy (@Anitha_JDS) March 18, 2023

ಕೆಲ ದಿನಗಳ ಹಿಂದೆ ಹೆದ್ದಾರಿಯಲ್ಲಿ ಕೆಟ್ಟು ನಿಂತಿದ್ದ ವಾಹನದಲ್ಲಿದ್ದ ದಂಪತಿಯ ಹಣ, ಚಿನ್ನಾಭರಣವನ್ನು ದೋಚಿದ್ದ ಪ್ರಕರಣ ವರದಿಯಾಗಿತ್ತು. ಜೊತೆಗೆ ನಿರಂತರ ಅಪಘಾತಗಳಿಂದ 80ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ಹಾಗಾದರೆ ಈ ಹೆದ್ದಾರಿಯ ಭದ್ರತೆ, ಸುರಕ್ಷತೆ ಪಾಡೇನು? ಟೋಲ್ ಸಂಗ್ರಹ ಮಾಡಿದರೆ ಸಾಕೇ?

ನನ್ನ ಒತ್ತಾಯ ಇಷ್ಟೇ. ಸರ್ವಿಸ್ ರಸ್ತೆಯೂ ಸೇರಿದಂತೆ ಈ ಹೆದ್ದಾರಿಯ ಎಲ್ಲಾ ಬಾಕಿಬಿದ್ದಿರುವ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕು. ಅದುವರೆಗೂ ಟೋಲ್ ಸಂಗ್ರಹ ನಿಲ್ಲಿಸಬೇಕು. ಈ ರಸ್ತೆಗಾಗಿ ಭೂಮಿ ಕಳೆದುಕೊಂಡಿರುವ ರಾಮನಗರ, ಮಂಡ್ಯ ಸೇರಿ ಆ ಭಾಗದ ಎಲ್ಲ ಜನರು ಮುಕ್ತವಾಗಿ ಸಂಚರಿಸಲು ಅವಕಾಶ ಮಾಡಿಕೊಡಬೇಕು.6/6

— ಅನಿತಾ ಕುಮಾರಸ್ವಾಮಿ | Anitha Kumaraswamy (@Anitha_JDS) March 18, 2023

ನನ್ನ ಒತ್ತಾಯ ಇಷ್ಟೇ. ಸರ್ವಿಸ್ ರಸ್ತೆಯೂ ಸೇರಿದಂತೆ ಈ ಹೆದ್ದಾರಿಯ ಎಲ್ಲಾ ಬಾಕಿ ಇರುವ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕು. ಅಲ್ಲಿಯವರೆಗೂ ಟೋಲ್ ಸಂಗ್ರಹ ನಿಲ್ಲಿಸಬೇಕು. ಈ ರಸ್ತೆಗಾಗಿ ಭೂಮಿ ಕಳೆದುಕೊಂಡಿರುವ ರಾಮನಗರ, ಮಂಡ್ಯ ಸೇರಿ ಆ ಭಾಗದ ಎಲ್ಲ ಜನರು ಮುಕ್ತವಾಗಿ ಸಂಚರಿಸಲು ಅವಕಾಶ ಮಾಡಿಕೊಡಬೇಕು ಎಂದು ಅವರು ಟ್ವಿಟ್ಟರ್‌ನಲ್ಲಿ ಹಂಚಿಕೊಂಡಿದ್ದಾರೆ. ಇದನ್ನೂ ಓದಿ: ಜೆಡಿಎಸ್ ಒಂದು ಪುಟ್ಗೋಸಿ ಪಕ್ಷ – ಮಾಜಿ ಸಚಿವ ನರೇಂದ್ರ ಸ್ವಾಮಿ ಅವಾಜ್

TAGGED:Bangalore Mysore Expressway Anitha Kumaraswamy BJPjdsnarendra modiಅನಿತಾ ಕುಮಾರಸ್ವಾಮಿಜೆಡಿಎಸ್ನರೇಂದ್ರ ಮೋದಿಬಿಜೆಪಿಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌
Share This Article
Facebook Whatsapp Whatsapp Telegram

Cinema news

Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema
vijay thalapathy
ನಟ ವಿಜಯ್‌ ವಿರುದ್ಧ ಪ್ರಕರಣ ದಾಖಲು
Cinema Latest South cinema Top Stories
Delhi Rain
ದೆಹಲಿ-ಎನ್‌ಸಿಆರ್‌ನ ಹಲವೆಡೆ ಭಾರೀ ಮಳೆ – ಯೆಲ್ಲೋ ಅಲರ್ಟ್ ಜಾರಿ
Cinema Latest National Top Stories
Rishabh Shetty
Chandanavana Film Critics Awards 2026 | ರಿಷಬ್ ಅತ್ಯುತ್ತಮ ನಟ, ಆಶಿಕಾ ರಂಗನಾಥ್ ಅತ್ಯುತ್ತಮ ನಟಿ
Bengaluru City Cinema Latest Sandalwood Top Stories

You Might Also Like

Sunilkumar
Bagalkot

ಅಹಿಂದಕ್ಕೆ ಅನ್ಯಾಯ ಎಸಗಿದ ಕಾಂಗ್ರೆಸ್‌ ಸರ್ಕಾರವನ್ನು ತಿರಸ್ಕರಿಸಿ: ಸುನಿಲ್‌ ಕುಮಾರ್‌

Public TV
By Public TV
3 minutes ago
Shreyas Iyer
Cricket

IPL 2026 | ಜಿಟಿ ವಿರುದ್ಧ ಗೆಲುವಿನ ಬೆನ್ನಲ್ಲೇ ಶ್ರೇಯಸ್ ಅಯ್ಯರ್‌ಗೆ 12 ಲಕ್ಷ ದಂಡ

Public TV
By Public TV
14 minutes ago
Digital Census India
31 Districts

Census 2027 | ಈ ಸುದ್ದಿ ಓದಿ ಮನೆಯಲ್ಲೇ ಕುಳಿತೇ 15 ನಿಮಿಷದ ಒಳಗಡೆ ನಿಮ್ಮ ವಿವರವನ್ನು ಭರ್ತಿ ಮಾಡಿ!

Public TV
By Public TV
24 minutes ago
ABVP 1 1
Bengaluru City

ಮಹಾರಾಣಿ ವಿವಿಯಲ್ಲಿ ಭಾರೀ ಭ್ರಷ್ಟಾಚಾರ – ವಿದೇಶದಲ್ಲಿ ಪಾಠ ಮಾಡೋ ಉಪನ್ಯಾಸಕರಿಗೆ ವಿವಿಯಿಂದ ಸಂಬಳ: ಎಬಿವಿಪಿ ಆರೋಪ

Public TV
By Public TV
33 minutes ago
wild elephant attack on bike in chikkamagaluru
Chikkamagaluru

ಬೈಕ್ ಅಡ್ಡಗಟ್ಟಿ ತುಳಿದು ಹಾಕಿದ ಪುಂಡಾನೆ – ಸವಾರ ಜಸ್ಟ್ ಮಿಸ್

Public TV
By Public TV
2 hours ago
Russia Military Plane
Latest

Russian Military Plane Crash – ವಿಮಾನದಲ್ಲಿದ್ದ 29 ಪ್ರಯಾಣಿಕರು ಸಾವು, ತಾಂತ್ರಿಕ ದೋಷ ಶಂಕೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?